ರಾಜ್ಯ

‘ಒಂದೆಡೆ’ ಸಂಘಟನೆಯ ಸಂಸ್ಥಾಪಕಿ, ಸಾಮಾಜಿಕ ಹೋರಾಟಗಾರ್ತಿ ಡಾ.ಅಕೈ ಪದ್ಮಶಾಲಿ ಕಾಂಗ್ರೆಸ್ ಸೇರ್ಪಡೆ.

ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಮಂಗಳಮುಖಿಯರ ಸಂಘಟನೆ ‘ಒಂದೆಡೆ’ ಸಂಸ್ಥಾಪಕಿ, ಸಾಮಾಜಿಕ ಹೋರಾಟಗಾರ್ತಿ ಡಾ.ಅಕೈ ಪದ್ಮಶಾಲಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಶಾಲು ಹೊದೆಸಿ, ಪುಷ್ಪಗುಚ್ಛ ನೀಡಿ ಬರಮಾಡಿಕೊಂಡು, ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎಲ್ ಶಂಕರ್,ಉಪ ಮುಖ್ಯಸ್ಥರಾದ ವಿ.ಆರ್. ಸುದರ್ಶನ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಸೌಮ್ಯಾ ರೆಡ್ಡಿ, ಮಾಜಿ ಸಚಿವೆಯರಾದ ಉಮಾಶ್ರೀ, ಜಯಮಾಲ ಮತ್ತಿತರರು ಉಪಸ್ಥಿತರಿದ್ದರು.

0Shares