ಶಿವಮೊಗ್ಗ

ಭೂಸುಧಾರಣಾ ತಿದ್ದುಪಡಿ ಕಾಯ್ದೆಯ ಮೂಲಕ ಬಿಜೆಪಿ ಸರ್ಕಾರ ರೈತರನ್ನು, ಕಾರ್ಮಿಕರನ್ನು ಬೀದಿ ಪಾಲು ಮಾಡ ಹೊರಟಿದೆ: ಹೆಚ್.ಎಸ್.ಸುಂದರೇಶ್.

ಕಾಂಗ್ರೆಸ್ ಪಕ್ಷ ಭೂಸುಧಾರಣಾ ಕಾಯ್ದೆಯನ್ನು ಜಾರಿ ಮಾಡುವ ಮೂಲಕ ಬಡವರಿಗೆ, ಶೋಷಿತರಿಗೆ ಭೂಮಿಯನ್ನು ಹಂಚಿದ್ದರೆ ಇದೀಗ ಮೋದಿ ಸರ್ಕಾರ ಅದೇ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಕಾಂಗ್ರೆಸ್ ನೀಡಿದ ಭೂಮಿಯನ್ನು ಕಸಿದು, ಉಳ್ಳವರಿಗೆ ಹಂಚಲು ಹೊರಟಿದೆ. ಮೋದಿ ಸರ್ಕಾರವೊಂದು ರೈತ ವಿರೋಧಿ ಸರ್ಕಾರವಾಗಿದೆ. ಮೋದಿ ಸರ್ಕಾರ ಸರ್ಕಾರಿ ಆಸ್ತಿಯನ್ನು ಉಧ್ಯಮಿ ಸ್ನೇಹಿತರಿಗೆ ಮಾರಾಟ ಮಾಡುವ ಮೂಲಕ ದೇಶದ ಖಜಾನೆಯನ್ನು ಲೂಟಿ ಮಾಡುತ್ತಿದೆ. ಕೊರೋನಾ ಹೆಸರಲ್ಲಿ ಪ್ರತಿಭಟನೆಗೆ ಅವಕಾಶ ನಿರಾಕರಿಸುವ ಇವರು ಅದೇ ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡು ಜನ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಹೇಳಿದ್ದಾರೆ.ಅವರು ಇಂದು ಶಿವಮೊಗ್ಗದಲ್ಲಿ ನಡೆದ ‘ಕರ್ನಾಟಕ ಬಂದ್’ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕೇಂದ್ರದ ಮೋದಿ ಸರ್ಕಾರ ಜಾರಿಗೊಳಿಸಿರುವ ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ, ವಿದ್ಯುತ್ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಇಂದು ರಾಜ್ಯದ ರೈತ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳು ಕರೆದಿರುವ ಬಂದ್ ಅನ್ನು ಬೆಂಬಲಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಾಯಕರುಗಳು, ಕಾರ್ಯಕರ್ತರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಶಿವಮೊಗ್ಗದ ಬಸ್ ನಿಲ್ದಾಣದಿಂದ ಎಎ ಸರ್ಕಲ್, ಗೋಪಿ ಸರ್ಕಲ್ ಮುಖಾಂತರ ಮೆರವಣಿಗೆ ನಡೆಸಿ ಕೊನೆಯಲ್ಲಿ ಮಹಾವೀರ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿದರು.

ಈ ಸಂಧರ್ಭದಲ್ಲಿ ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್,ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಶ್ರೀನಿವಾಸ್ ಕರಿಯಣ್ಣ, ವೇದಾ ವಿಜಯಕುಮಾರ್, ಕಲಗೋಡು ರತ್ನಾಕರ್ ಮುಂತಾದ ಮುಖಂಡರುಗಳು ಹಾಗೂ ರೈತಸಂಘ, ದಲಿತ ಸಂಘ, ಸ್ವರಾಜ್ ಇಂಡಿಯಾ, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಿಮಗೆ ಈ ಬರಹ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ.

ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ಹಾಗೂ E-mail ID: kannadamedia1947@gmail.com ಗೆ ಸಂಪರ್ಕಿಸಿ.

ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

0Shares