ರಾಜ್ಯ

ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾದ ರಾಜರಾಜೇಶ್ವರಿ ನಗರದ ಟಿಕೆಟ್​ ಆಕಾಂಕ್ಷಿ ಕುಸುಮಾ ಡಿ.ಕೆ. ರವಿ.

ದಿವಂಗತ ಡಿ.ಕೆ ರವಿಯವರ ಪತ್ನಿ ಹಾಗೂ ಮುಖಂಡ ಹನುಮಂತರಾಯಪ್ಪ ರವರ ಮಗಳಾದ ಕುಸುಮಾ ಎಚ್. ರವರು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಇಂದು 11.45ರ ಸುಮಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ರಾಜರಾಜೇಶ್ವರಿ ನಗರದ ಟಿಕೇಟ್ ಆಕಾಂಕ್ಷಿಯಾಗಿರುವ ಹಾಗೂ ಸಮಾಜಸೇವೆಯ ಮೂಲಕ ಆ ಭಾಗದಲ್ಲಿ ಜನಪ್ರಿಯತೆ ಹೊಂದಿರುವ ಕುಸುಮಾರವರ ಕಾಂಗ್ರೆಸ್ ಸೇರ್ಪಡೆ ವಿಚಾರ ಬಿಜೆಪಿ ವಲಯದಲ್ಲಿ ತಳಮಳಕ್ಕೆ ಕಾರಣವಾಗಿದೆ.ಡಿ.ಕೆ. ಶಿವಕುಮಾರ್ ಅವರು ಕುಸುಮಾ ಅವರಿಗೆ ಕಾಂಗ್ರೆಸ್ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್, ಬೆಂಗಳೂರು ಉತ್ತರ ಜಿಲ್ಲೆ ಕಾಂಗ್ರೆಸ್ ಅಧ್ಯಕ್ಷ ರಾಜ್ ಕುಮಾರ್, ಕುಸುಮಾ ಅವರ ತಂದೆ ಹನುಮಂತರಾಯಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

⚫ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ.

⚫ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ಹಾಗೂ E-mail ID: kannadamedia1947@gmail.com ಗೆ ಸಂಪರ್ಕಿಸಿ.

⚫ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

0Shares