ಉಡುಪಿ

ಡಿಕೆಶಿ ಮನೆಯ ಮೇಲಿನ ಸಿಬಿಐ ದಾಳಿ ರಾಜಕೀಯ ಪ್ರೇರಿತ; ಅಶೋಕ್ ಕೊಡವೂರು ಖಂಡನೆ

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ ಮನೆಯ ಮೇಲಿನ ಸಿಬಿಐ ದಾಳಿಯು ರಾಜಕೀಯ ಪ್ರೇರಿತವಾದುದು. ಮುಂಬರುವ ಶಿರಾ ಮತ್ತು ರಾಜರಾಜೇಶ್ವರಿ ನಗರಗಳ ಉಪಚುನಾವಣೆಯ ಸಂಧರ್ಭದಲ್ಲಿಯೇ ಈ ದಾಳಿ ನಡೆದಿರುವುದು ಅದರ ಹಿಂದಿನ ದುರುದ್ದೇಶವನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದ ಬಿಜೆಪಿ, ಉಪಚುನಾವಣೆಯಲ್ಲಿ ಸೋಲುವ ಭಯದಿಂದ ಕಾಂಗ್ರೆಸ್ ಪಕ್ಷದ ನಾಯಕರನ್ನು ಹಣಿಯಲು ಸಿಬಿಐಯನ್ನು ಬಳಸುತ್ತಿದೆ, ಇದು ಖಂಡನೀಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0Shares