Advertisement

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ

Advertisement

ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಶಿರಾ ಮತ್ತು ರಾಜರಾಜೇಶ್ವರಿ ನಗರದ ಚುನಾವಣೆಯ ಬಳಿಕ ಹುಲಿಯಾ ಕಾಡು ಸೇರಲಿದೆ, ಕನಕಪುರ ಬಂಡೆ ಛಿದ್ರವಾಗಲಿದೆ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಕುರಿತಾಗಿ ನಿನ್ನೆಯಷ್ಟೇ ಲೇವಡಿ ಮಾಡಿದ್ದರು. ಆ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮೇಲಿನಂತೆ ಹೇಳಿದ್ದಾರೆ ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ Immature fellow. ನಳಿನ್ ಕುಮಾರ್ ಕಟೀಲಿಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬು ಇಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದವರು ಹೇಳಿದ್ದಾರೆ. ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುವುದು, ಅದನ್ನೇ ಮಾಡುತ್ತಾ ಇದ್ದಾರೆ. ಈಗ ನಡೆಯುತ್ತಿರುವ ಉಪಚುನಾವಣೆ ಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ .ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದವರು ಹೇಳಿದ್ದಾರೆ. ►► ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►► ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

Advertisement
Advertisement
Recent Posts
Advertisement