ರಾಷ್ಟ್ರೀಯ

ಆರೋಪಿತ ಅಧಿಕಾರಿಯಿಂದ ನ್ಯಾಯದ ನಿರೀಕ್ಷೆ ಮೂರ್ಖತನ, ಹಾಥ್ರಸ್ ಜಿಲ್ಲಾಧಿಕಾರಿ ಅಮಾನತು ಗೊಳಿಸಿ : ಪ್ರಿಯಾಂಕಾ ವಾದ್ರಾ ಆಗ್ರಹ

ಆರೋಪಿಗಳಿಗೆ ಸಹಕರಿಸಿದ ಮತ್ತು ಮೃತದೇಹವನ್ನು ಸಂತ್ರಸ್ತರಿಗೆ ಹಸ್ತಾಂತರಿಸದೆ ರಾತ್ರೋರಾತ್ರಿ ಸುಟ್ಟು ಹಾಕಿರುವಂತಹ ಗಂಭೀರವಾದ ಆರೋಪ ಎದುರಿಸುತ್ತಿರುವ ಮತ್ತು ಅತ್ಯಾಚಾರಕ್ಕೊಳಗಾದ ದಲಿತ ಯುವತಿಯ ಕುಟುಂಬದವರೊಂದಿಗೆ ಅಮಾನವೀಯವಾಗಿ ನಡೆದುಕೊಂಡಿರುವ ಆರೋಪಿತ ಜಿಲ್ಲಾಧಿಕಾರಿಯೊಬ್ಬರು ಜಿಲ್ಲೆಯಲ್ಲೆ ಇದ್ದಾಗ, ನಿಷ್ಪಕ್ಷಪಾತವಾದ ಪ್ರಾಮಾಣಿಕವಾದ ತನಿಖೆ ಹೇಗೆ ಸಾಧ್ಯವಾಗುತ್ತದೆ? ಅಂತಹ ಅಧಿಕಾರಿಯಿಂದ ನ್ಯಾಯದ ನಿರೀಕ್ಷೆ ಶುದ್ದ ಮೂರ್ಖತನ! ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಯುವತಿಯ ಕುಟುಂಬದವರಿಗೆ ಹಾಥ್ರಸ್ ಜಿಲ್ಲಾಧಿಕಾರಿ ಬೆದರಿಕೆ ಹಾಕುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದ್ದರೂ, ರಾಜ್ಯದ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ಮೌನವಾಗಿರುವುದರ ಹಿಂದಿನ ರಹಸ್ಯವಾದರೂ ಏನು? ನಿಮಗೆ ಪ್ರಾಮಾಣಿಕತೆ ಇದ್ದರೆ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಿ ಮತ್ತು ಇಡೀ ಪ್ರಕರಣದಲ್ಲಿ ಅವರ ಪಾತ್ರವಿರುವ ಕುರಿತಾಗಿ ತನಿಖೆ ನಡೆಸಿ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಉತ್ತರ ಪ್ರದೇಶದ ಉಸ್ತುವಾರಿ ಪ್ರಿಯಾಂಕಾ ವಾದ್ರಾ ಮೋದಿ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.ಶನಿವಾರ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರು ಹಾಥ್ರಸ್‌ನಲ್ಲಿ ಸಂತ್ರಸ್ಥೆಯ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದರು. ಆ ಕುರಿತಾಗಿ ಲಖನೌನಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರಿಯಾಂಕಾ ಉತ್ತರಿಸಿದರು.

⚫ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ.

⚫ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ಹಾಗೂ E-mail ID: kannadamedia1947@gmail.com ಗೆ ಸಂಪರ್ಕಿಸಿ.

⚫ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

0Shares