ಉಡುಪಿ

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಂಧನ ಖಂಡನೀಯ:ಅಶೋಕ್ ಕುಮಾರ್ ಕೊಡವೂರು

ಉತ್ತರ ಪ್ರದೇಶದಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಹಾಗೂ ಆಕೆಯ ಮೃತ ದೇಹವನ್ನು ಪೋಲಿಸರು ಆಕೆಯ ಹೆತ್ತವರಿಗೆ ಹಸ್ತಾಂತರಿಸದೆ ರಾತ್ರೋರಾತ್ರಿ ಸುಟ್ಡು ಹಾಕಿದ ಘಟನೆಯನ್ನು ಖಂಡಿಸಿ ಸಂತೃಸ್ತ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಆಕೆಯ ಹುಟ್ಟೂರಾದ ಉತ್ತರ ಪ್ರದೇಶದ ಹಥ್ರಾಸ್‌ಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರನ್ನು ಉತ್ತರ ಪ್ರದೇಶದ ಪೋಲಿಸರು ಬಂದಿಸಿರುವ ಘಟನೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರಾಹುಲ್ ಹಾಗೂ ಪ್ರಿಯಾಂಕ ಪ್ರಯಾಣಿಸುತ್ತಿದ್ದ ಕಾರನ್ನು ತಡೆದು ನಿಲ್ಲಿಸಿ, ವಾಹನವನ್ನು ಮುಂದೆ ಹೋಗಲು ತಡೆಯೊಡ್ಡಿದಾಗ ರಾಹುಲ್ ಹಾಗೂ ಪ್ರಿಯಾಂಕಾ 142 ಕಿ.ಮೀ ದೂರವನ್ನು ಕಾಲ್ನಡಿಗೆಯಲ್ಲೆ ತೆರಳಲು ನಿಶ್ಚಯಿಸಿ ಹೊರಟಿದ್ದರು ಆಗ ಆ ಇಬ್ಬರು ನಾಯಕರನ್ನು ಉತ್ತರ ಪ್ರದೇಶದ ಪೋಲಿಸರು ತಡೆದು ದೈಹಿಕ ಹಲ್ಲೆ ನಡೆಸಿ ಬಂದಿಸಿರುವ ಘಟನೆ ಜಿಲ್ಲೆಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ.

ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ಹಾಗೂ E-mail ID: kannadamedia1947@gmail.com ಗೆ ಸಂಪರ್ಕಿಸಿ.

ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

0Shares