Advertisement

ಆರ್‌ಆರ್ ನಗರದ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಕಾರಣ: ಸಿದ್ದರಾಮಯ್ಯ.

Advertisement

'ನಿನ್ನೆ ನಾನು ಯಶವಂತಪುರ ಸಮೀಪ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸಿದ್ದರಲ್ಲದೆ, ನಾನು ವಾಪಾಸು ತೆರಳುವಾಗ ವಾಹನ ಅಡ್ಡಗಟ್ಟಿ ಬೆದರಿಸುವ ಪ್ರಯತ್ನ ಮಾಡಿದ್ದರು. ಇದು ಬಿಜೆಪಿಯವರ ರಾಜಕಾರಣದ ಇನ್ನೊಂದು ಮುಖವನ್ನು ಅನಾವರಣಗೊಳಿಸಿದೆ. ಆರ್.ಆರ್ ನಗರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದ ಮುನಿರತ್ನ ಅವರೆ ಅಲ್ಲಿನ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಮೂಲ ಕಾರಣ. ಸೋಲಿನ ಭಯದಿಂದ ಜಿ.ಕೆ ವೆಂಕಟೇಶ್ ಅಂಥವರನ್ನು ಮುಂದೆ ಬಿಟ್ಟು ಮುನಿರತ್ನ ಅವರೆ ಗಲಭೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನವಿದೆ' ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. 'ಶಿರಾ ಕ್ಷೇತ್ರದ ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ, ಹಾಗಾದರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ? ಚುನಾವಣೆಯನ್ನು ಸಾಧನೆ ಮತ್ತು ಸಿದ್ಧಾಂತದ ಮೂಲಕ ಎದುರಿಸಲಾಗದವರು ಮಾತ್ರ ಸೋಲಿನ ಭೀತಿಯಿಂದ ಈ ರೀತಿ ಚಾರಿತ್ರ್ಯಹರಣ, ಗೂಂಡಾಗಿರಿ, ಹಣ ಹಂಚುವುದು ಮೊದಲಾದ ಅಡ್ಡದಾರಿ ಹಿಡಿಯುವುದು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ಹಾಗೂ ಶಾಸಕರು ನಿರ್ಧರಿಸುತ್ತಾರೆ. ಕೆಲವರು ಅಭಿಮಾನದಿಂದ ಇವ್ರೆ ನಮ್ಮ ಮುಂದಿನ ಮುಖ್ಯಮಂತ್ರಿ ಅಂತ ಹೇಳ್ತಾರೆ, ಅವರಿಗೆಲ್ಲ ಮಾತಾಡ್ಬೇಡಿ ಅಂತ ಹೇಳೋಕಾಗುತ್ತಾ' ಎಂದವರು ಹೇಳಿದರು. ಕೊರೊನಾ ವಿರುದ್ಧ ಹೋರಾಡಬೇಕಾಗಿದ್ದ ಕೇಂದ್ರ ಸರ್ಕಾರ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಜನವಿರೋಧಿ ಕಾನೂನುಗಳನ್ನು ಜಾರಿಗೆ ತಂದದ್ದೇ ಮಾನ್ಪಡೆಯವರೂ ಸೇರಿದಂತೆ ಅನೇಕ ಹೋರಾಟಗಾರರ ಸಾವಿಗೆ ಕಾರಣ: ಸಿದ್ದರಾಮಯ್ಯ 'ಮಾರುತಿ ಮಾನ್ಪಡೆ ಅವರ ಸಾವಿಗೆ ನಾನು ಮತ್ತು ಡಿ.ಕೆ.ಶಿವಕುಮಾರ್ ಕಾರಣ ಎಂಬ ಬಾಲಿಷ ಹೇಳಿಕೆಯನ್ನು ಕೇಂದ್ರ ಸಚಿವ ಸದಾನಂದ ಗೌಡ ಅವರು ನೀಡಿದ್ದಾರೆ. ಹಾಗಿದ್ದರೆ ದೇಶದಲ್ಲಿ ಒಂದು ಕಾಲು ಲಕ್ಷ ಜನ ಕೊರೊನಾಕ್ಕೆ ಬಲಿಯಾಗಿದ್ದಾರಲ್ಲಾ ಅದಕ್ಕೆ ಯಾರು ಹೊಣೆ ಎಂದು ಹೇಳುವಿರಾ ಸದಾನಂದ ಗೌಡರೇ? ಕೊರೊನಾ ವಿರುದ್ಧ ಹೋರಾಡಬೇಕಾಗಿದ್ದ ಕೇಂದ್ರ ಸರ್ಕಾರ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಜನವಿರೋಧಿ ಕಾನೂನುಗಳನ್ನು ಜಾರಿಗೆ ತಂದದ್ದೇ ಮಾನ್ಪಡೆಯವರೂ ಸೇರಿದಂತೆ ಅನೇಕ ಹೋರಾಟಗಾರರ ಸಾವಿಗೆ ಕಾರಣ' ಎಂದು ಸಿದ್ದರಾಮಯ್ಯನವರು ಹೇಳಿದರು 'ಮುನಿರತ್ನ ತನಗೆ ಅನುದಾನ ನೀಡಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ತೊರೆದದ್ದು ಎಂದು ಸುಳ್ಳು ಹೇಳುತ್ತಿದ್ದಾರೆ. ನನ್ನ ಅಧಿಕಾರಾವಧಿಯಲ್ಲಿ ಆರ್.ಆರ್ ನಗರ ಕ್ಷೇತ್ರಕ್ಕೆ ರೂ.2,000 ಕೋಟಿಗೂ ಅಧಿಕ ಅನುದಾನ ನೀಡಿದ್ದೆ, ಇಂದು ಕ್ಷೇತ್ರದಲ್ಲಿ ಏನಾದರೂ ಅಭಿವೃದ್ಧಿ ಕಾರ್ಯಗಳಾಗಿದ್ದರೆ ಅದಕ್ಕೆ ನಮ್ಮ ಸರ್ಕಾರ ಕಾರಣ. ಕೆ.ಆರ್ ಪೇಟೆಯಲ್ಲಿ ಹಣ ಹಂಚಿ ಗೆದ್ದಂತೆ ಶಿರಾ ಮತ್ತು ಆರ್.ಆರ್ ನಗರದಲ್ಲೂ ಹಣ ಹಂಚಿ ಸುಲಭದಲ್ಲಿ ಗೆಲ್ಲಬಹುದು ಎಂಬುದು ಬಿಜೆಪಿಯವರ ಲೆಕ್ಕಾಚಾರ. ಆದರೆ ಇಲ್ಲಿನ ಜನ ಹಣದ ಆಮಿಷಕ್ಕೆ ಒಳಗಾಗದೆ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸವಿದೆ' ಎಂದಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಪರ ನಡೆಯುತ್ತಿದ್ದ ರೋಡ್ ಶೋಗೆ ಅಡ್ಡಿಪಡಿಸಲೆತ್ನಿಸಿದ ಬಿಜೆಪಿ ಅಭ್ಯರ್ಥಿ ಮುನಿರತ್ನ ರವರ ಬೆಂಬಲಿಗರಿಗೆ ಖಡಕ್ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ ನವರ ವಿಡಿಯೋ ನೋಡಲು ಕೆಳಗಿನ ಟ್ವಿಟರ್ ಲಿಂಕ್ ಕ್ಲಿಕ್ ಮಾಡಿ. _______________________________ ►►ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►►ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

Advertisement
Advertisement
Recent Posts
Advertisement