ತುಮಕೂರು

ಶಿರಾ: ಟಿ.ಬಿ ಜಯಚಂದ್ರ 15ರಂದು ಗುರುವಾರ ನಾಮಪತ್ರ ಸಲ್ಲಿಕೆ.

ಶಿರಾ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಟಿ.ಬಿ.ಜಯಚಂದ್ರ ಅವರು ನಾಳೆ ದಿನಾಂಕ 15-10-2020 ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರವನ್ನು ಸಲ್ಲಿಸಲಿದ್ದಾರೆ.ಈ ಸಂಧರ್ಭದಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿರೋಧಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್, ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ , ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ, ಶಾಸಕರಾದ ವೆಂಕಟರಮಣಪ್ಪ, ಮಾಜಿ ಸಂಸದರಾದ ಎಸ್.ಪಿ.ಮುದ್ದಹನುಮೇಗೌಡ, ಬಿ.ಎನ್.ಚಂದ್ರಪ್ಪ , ಮಾಜಿ ಶಾಸಕರಾದ ಶಫೀ ಅಹಮದ್ ,ಶ್ರೀ ಷಡಕ್ಷರಿ , ರಫೀಕ್ ಅಹಮದ್ , ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಸಾಸಲು ಸತೀಶ್, ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾದ ಶ್ರೀ ರಾಜೇಂದ್ರ ಮುಂತಾದವರು ಭಾಗವಹಿಸಲಿದ್ದು ಅವರನ್ನು ಸ್ವಾಗತಿಸಲು ಎಲ್ಲಾ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಕಳ್ಳಂಬೆಳ್ಳ ಟೋಲ್ ಬಳಿ 10 ಗಂಟೆಗೆ ಆಗಮಿಸುವಂತೆ ಶಿರಾ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

⚫ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ⚫ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ಹಾಗೂ E-mail ID: kannadamedia1947@gmail.com ಗೆ ಸಂಪರ್ಕಿಸಿ. ⚫ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com