ಉಡುಪಿ

ರಾಹುಲ್, ಪ್ರಿಯಾಂಕಾ ಮೇಲಿನ ಹಲ್ಲೆ, ಬಂಧನದ ಹಿಂದೆ ಮೋದಿ ಸರ್ಕಾರದ ಕೈವಾಡ : ಕುಂದಾಪುರ ಬ್ಲಾಕ್ ಕಾಂಗ್ರೆಸ್ ಆರೋಪ.

ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವಾನ ಹೇಳಲು ಹೊರಟಿದ್ದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರ ಮೇಲೆ ಉತ್ತರ ಪ್ರದೇಶ ಪೊಲೀಸರು ನಡೆಸಿದ ದೌರ್ಜನ್ಯ ಖಂಡನೀಯ ಮತ್ತು ಈ ಕೃತ್ಯದ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಮತ್ತು ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಅಧಿತ್ಯನಾಥ್ ನೇರ ಕೈವಾಡ ಇದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಆರೋಪಿಸಿದ್ದಾರೆ ಮತ್ತು ಘಟನೆಯನ್ನು ಖಂಡಿಸಿದ್ದಾರೆ.ಉತ್ತರ ಪ್ರದೇಶದ ದಲಿತ ಯುವತಿಯ ಮೇಲಿನ ಅತ್ಯಾಚಾರ, ಕೊಲೆ ಭಾರತಾಂಬೆಯ ಮೇಲೆ ಎಸಗಲಾದ ಅಮಾನವೀಯ ಕ್ರೌರ್ಯ ಅಷ್ಟೇ ಅಲ್ಲ ಇದು ಮನುಕುಲಕ್ಕೆಸಗಿದ ದ್ರೋಹ. ಮೃತ ದೇಹವನ್ನು ಅವರ ಕುಟುಂಬಕ್ಕೆ ನೀಡದೆ ಸುಟ್ಟು ಹಾಕಿ ಅಮಾನವೀಯವಾಗಿ ನಡೆದುಕೊಂಡಿರುವುದು ಮತ್ತು ಮೃತ ದಲಿತ ಯುವತಿಯ ಕುಟುಂಬವನ್ನು ಗ್ರಹ ಬಂಧನದಲ್ಲಿರಿಸಿದ ಸರಕಾರದ ಕ್ರಮ ನಾಚಿಕೆಗೇಡಿನ ಸಂಗತಿ ಮತ್ತು ಸರ್ಕಾರದ ನಿಜ ಬಣ್ಣ ಬಯಲಾಗುವುದನ್ನು ತಪ್ಪಿಸಲು ಮುಖ್ಯಮಂತ್ರಿ ತೆಗೆದುಕೊಂಡ ಈ ಕ್ರಮ ನಾಗರೀಕ ಸಮಾಜ ತಲೆ ತಗ್ಗಿಸುವಂತಹುದ್ದಾಗಿದೆ ಎಂದವರು ಹೇಳಿದ್ದಾರೆ.

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಹಾಗೂ ಹಾಲಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರು ಅತ್ಯಾಚಾರದಲ್ಲಿ ಸಾವನ್ನಪ್ಪಿದ ಕುಟುಂಬ ಭೇಟಿ ಮಾಡಿ, ಸಾಂತ್ವನ ಹೇಳಲು ತೆರಳುತ್ತಿದ್ದ ವೇಳೆ ತಡೆದು ಹಲ್ಲೆ ನಡೆಸಿ, ಬಂದಿಸಿ ಆ ನಂತರ ವಾಪಸ್ ದೆಹಲಿಗೆ ಕಳುಹಿಸಿದ್ದಾರೆ. ಈ ದೇಶದಲ್ಲಿ ರಾಷ್ಟ್ರ ನಾಯಕರ ಪರಿಸ್ಥಿತಿಯೇ ಹೀಗಾದರೆ ಉತ್ತರ ಪ್ರದೇಶದಲ್ಲಿ ಜನ ಸಾಮಾನ್ಯರ, ರೈತರ ಹಾಗೂ ಕಾರ್ಮಿಕರ ಪರಿಸ್ಥಿತಿ ಹೇಗಿರಬಹುದು ಮತ್ತು ಅವರಿಗೆ ರಕ್ಷಣೆ ನೀಡುವವರು ಯಾರು ಎಂದು ಪ್ರಶ್ನಿಸಿರುವ ಅವರು ಉತ್ತರ ಪ್ರದೇಶ ಸರಕಾರವನ್ನು ವಜಾಗೊಳಿಸಿ ತಕ್ಷಣವೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ.

ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ಹಾಗೂ E-mail ID: kannadamedia1947@gmail.com ಗೆ ಸಂಪರ್ಕಿಸಿ.

ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

0Shares