ಶಿವಮೊಗ್ಗ

ಇಂದಿರಾಗಾಂಧಿ ಜನ್ಮದಿನಾಚರಣೆಯನ್ನು, ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ವಿಶಿಷ್ಠವಾಗಿ ಆಚರಿಸಿದ ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್

ಶಿವಮೊಗ್ಗ ನಗರದ ಕಾಂಗ್ರೆಸ್ ನ ಮಾಜಿ ಶಾಸಕರಾದ ಕೆ.ಬಿ ಪ್ರಸನ್ನ ಕುಮಾರ್ ರವರ ನೇತೃತ್ವದಲ್ಲಿ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ,ಉಕ್ಕಿನ ಮಹಿಳೆ ಖ್ಯಾತಿಯ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 103 ನೇ ಜನ್ಮದಿನಾಚರಣೆಯನ್ನು ನಗರದ ಶ್ರೀ ಮಹಾವೀರ ಗೋ ಶಾಲೆಗೆ ಭೇಟಿ ನೀಡಿ, ಗೋವುಗಳಿಗೆ ಮೇವು ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಸೂಡಾ ಮಾಜಿ ಅಧ್ಯಕ್ಷರಾದ ಎನ್. ರಮೇಶ್ , ನಗರಪಾಲಿಕೆ ಸದಸ್ಯರಾದ ಶ್ರೀಮತಿ ಯಮುನಾ ರಂಗೇ ಗೌಡ, ಅರಸಿ ನಾಯಕ್, ನಗರಪಾಲಿಕೆ ಮಾಜಿ ಸದಸ್ಯರಾದ ದೀಪಕ್ ಸಿಂಗ್, ಲಕ್ಷ್ಮಣ, ಶ್ಯಾಮ್ ಸುಂದರ್, ಉಮೇಶ್ ಹಾಗು ಕಾಂಗ್ರೆಸ್ ಮುಖಂಡರುಗಳಾದ ಶಿವಾನಂದ್ , ದಯಾನಂದ್, ರಾಜಶೇಖರ್, ಶಿವಕುಮಾರ್, ನೀಲು, ಚಂದ್ರು, ರವೀಂದ್ರ, ಗೋಪಿ, ನಾಗರಾಜ್, ವೆಂಕಟೇಶ್ ಹಾಗು ಇತರರು ಭಾಗವಹಿಸಿದ್ದರು.______________________________________

►►ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►►ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com