ರಾಷ್ಟ್ರೀಯ

ಅಖಿಲ ಭಾರತ ಯುವ ಕಾಂಗ್ರೆಸ್ ಘಟಕದ ಮಧ್ಯಂತರ ಅಧ್ಯಕ್ಷರಾಗಿ ಕರ್ನಾಟಕದ ಬಿ.ವಿ.ಶ್ರೀನಿವಾಸ್ ಪುನರಾಯ್ಕೆ​

ಅಖಿಲ ಭಾರತ ಯುವ ಕಾಂಗ್ರೆಸ್ ಘಟಕದ ಮಧ್ಯಂತರ ಅಧ್ಯಕ್ಷರಾಗಿ ಕರ್ನಾಟಕದ ಭದ್ರಾವತಿಯವರಾದ ಬಿ.ವಿ.ಶ್ರೀನಿವಾಸ್ ರವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ಬಿ.ವಿ.ಶ್ರೀನಿವಾಸ್ ಅವರನ್ನು ಅಖಿಲ ಭಾರತ ಯುವ ಕಾಂಗ್ರೆಸ್​ ಘಟಕದ ಮಧ್ಯಂತರ ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷರು ನೇಮಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕೇಶವ್‌ಚಂದ್ ಆವರು 2019ರ ಲೋಕಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ಹುದ್ದೆಗೆ ರಾಜೀನಾಮೆ ನೀಡಿದ್ದರು. ಯಾದವ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಶ್ರೀನಿವಾಸ್.ಬಿ.ವಿ. ಅವರನ್ನು ಭಡ್ತಿ ನೀಡಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿತ್ತು. ಇದೀಗ ಪುನರಾಯ್ಕೆಗೊಳಿಸಲಾಗಿದೆ.

ಶ್ರೀನಿವಾಸ.ಬಿ.ವಿ. ಈ ಹಿಂದೆ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದು, ಗುಜರಾತ್, ಉತ್ತರ ಪ್ರದೇಶ, ತೆಲಂಗಾಣ ಉಸ್ತುವಾರಿಯನ್ನು ವಹಿಸಿದ್ದರು. ಇವರು ದೇಶದಾದ್ಯಂತ ಯುವಕರನ್ನು ಸಂಘಟಿಸಿ, ಮೋದಿ ಸರ್ಕಾರದ ವಿರುದ್ದ ವಿಶಿಷ್ಠವಾದ ರೀತಿಯಲ್ಲಿ ಹಲವಾರು ಪ್ರತಿಭಟನೆಗಳನ್ನು ನಡೆಸುವ ಮೂಲಕ ಜನಮನ್ನಣೆಗಳಿಸಿದ್ದಾರೆ.

_______________________________________

►►ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►►ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

0Shares