Advertisement

'ರಾಜಭವನ ಚಲೋ' ಪ್ರತಿಭಟನಾಕಾರರನ್ನು ಪೋಲಿಸರು ತಡೆಯುತ್ತಿರುವ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರೆ.‌

Advertisement

ಕೇಂದ್ರದ ಮೋದಿ ಸರ್ಕಾರ ಜಾರಿಗೊಳಿಸಿರುವ ಮೂರು ರೈತವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಅರವತ್ತಕ್ಕೂ ಹೆಚ್ಚು ಅನ್ನದಾತ ರೈತರು ಪ್ರಾಣತ್ಯಾಗಗೈದು, ಕಳೆದ 54 ದಿನಗಳಿಂದ ರಾಜಧಾನಿ ದೆಹಲಿಯಲ್ಲಿ ಕೊರೆವ ಚಳಿಯಲ್ಲಿ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಇಂದು ಕೆಪಿಸಿಸಿ ವತಿಯಿಂದ ಹಮ್ಮಿಕೊಳ್ಳಲಾಗಿರುವ 'ರಾಜಭವನ ಚಲೋ' ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರನ್ನು, ಪದಾದಿಕಾರಿಗಳನ್ನು ಹಾಗೂ ಬ್ಲಾಕ್, ಜಿಲ್ಲಾ, ರಾಜ್ಯ ಮಟ್ಟದ ನಾಯಕರುಗಳನ್ನು ಪೋಲಿಸರು ಕಳೆದ ರಾತ್ರಿಯಿಂದೀಚೆಗೆ ಹೆದ್ದಾರಿಯಲ್ಲಿ ಅಲ್ಲಲ್ಲಿ ತಡೆಯುತ್ತಿರುವ ಮತ್ತು ವಾಪಾಸು ತೆರಳುವಂತೆ ಬಲವಂತಪಡಿಸುತ್ತಿರುವ ಸುದ್ದಿಗಳ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರು 'ಯಾರೂ ಪೋಲಿಸರ ಒತ್ತಡಕ್ಕೆ ಮಣಿಯದಂತೆ, ಇರುವ ಸ್ಥಳದಿಂದಲೇ ಹೆದ್ದಾರಿಗಳನ್ನು ತಡೆದು ತಮ್ಮ ಪ್ರತಿಭಟನೆ ದಾಖಲಿಸುವಂತೆ ಮತ್ತು ಉಳಿದವರು ರೈಲ್ವೆ ನಿಲ್ದಾಣ ತಲುಪಿ ಅಲ್ಲಿಂದ ಫ್ರೀಡಂ ಪಾರ್ಕ್‌ಗೆ ಆಗಮಿಸಿ, ಪ್ರತಿಭಟನೆಯಲ್ಲಿ ಭಾಗವಹಿಸುವಂತೆ' ಕರೆ ನೀಡಿದ್ದಾರೆ. __________________________________ ►►ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►►ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

Advertisement
Advertisement
Recent Posts
Advertisement