Advertisement

ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ನೂತನ ರಾಜ್ಯ ಸಂಚಾಲಕರಾಗಿ ಬಿ.ಆರ್ ನಾಯ್ಡು ನೇಮಕ

Advertisement

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಸಂಚಾಲಕರಾಗಿ ಯುವಮುಖಂಡ ಬಿ.ಆರ್ ನಾಯ್ಡುರವರನ್ನು ನೇಮಕ ಗೊಳಿಸಿ ಆದೇಶಿಸಲಾಗಿದೆ. ಈ ಆಯ್ಕೆಯನ್ನು ಕಾಂಗ್ರೆಸ್ ಅಧ್ಯಕ್ಷರ ಸೂಚನೆಯ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೊಪಾಲ್ ರವರು ಪ್ರಕಟಿಸಿರುತ್ತಾರೆ. ಬೆಂಗಳೂರಿನ ವಸಂತ ನಗರದ ಬಿ.ಆರ್ ನಾಯ್ಡು, ವಿಧ್ಯಾರ್ಥಿ ಜೀವನದಲ್ಲಿ ಎನ್‌ಎಸ್‌ಯುಐ ಮೂಲಕ ರಾಜಕೀಯ ಪ್ರವೇಶಿಸಿದ್ದು ಕಾಂಗ್ರೆಸ್ ವಲಯದಲ್ಲಿ ಅತ್ಯಂತ ಕ್ರಿಯಾಶೀಲ ಯುವನಾಯಕ ಎನ್ನಿಸಿಕೊಂಡಿದ್ದಾರೆ. ಕಾಂಗ್ರೆಸ್ ಸಿದ್ಧಾಂತದ ಕುರಿತು ಅಪಾರ ಗೌರವ ಹೊಂದಿರುವ ಇವರು ಕಳೆದ 20ವರ್ಷಗಳಿಂದ ಪಕ್ಷದ ವಿವಿಧ ಹುದ್ದೆಯನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷದ ಹಿರಿಯ ನಾಯಕರ ವಿಶ್ವಾಸವನ್ನು ಗಳಿಸಿದ್ದಾರೆ. ರಾಷ್ಟ್ರದ ನಾಯಕರ ಜನ್ಮದಿನಾಚರಣೆಗಳ ಸಂಧರ್ಭಗಳಲ್ಲಿ ರಕ್ತದಾನ, ಬಡ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಶಾಲಾ ಸಮವಸ್ತ್ರ ಹಂಚುವಿಕೆಯನ್ನು ನಿರಂತರವಾಗಿ ನಡೆಸಿಕೊಂಡು ಬಂದಿರುತ್ತಾರೆ. ವಸಂತನಗರ ವಾರ್ಡಿನಿಂದ ಎರಡು ಬಾರಿ ಕಾರ್ಪೋರೇಟರ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಇವರು ದಿನೇಶ್ ಗುಂಡೂರಾವ್ ಅವಧಿಯಲ್ಲಿ ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಿರುತ್ತಾರೆ. ಹಾಗೆಯೇ ರಿಜ್ವಾನ್ ಅರ್ಷದ್ ಮತ್ತು ಪ್ರಿಯಾಂಕ್ ಖರ್ಗೆ ಅವರ ಅವಧಿಯಲ್ಲಿ ಯುವ ಕಾಂಗ್ರೆಸ್‌ನಲ್ಲಿ ರಾಜಕೀಯ ಕಾರ್ಯದರ್ಶಿಯಾಗಿ ಕೆಲಸ ಮಾಡಿರುತ್ತಾರೆ. 2002 ರಲ್ಲಿ ಎನ್‌ಎಸ್‌ಯುಐ ನ ರಾಜ್ಯ ಉಪಾಧ್ಯಕ್ಷರಾಗಿ ಕೆಲಸ ಮಾಡಿರುವ ಇವರು 2016 ರಿಂದ -2019ತನಕ ಕೆಪಿಸಿಸಿ ಕಾರ್ಯದರ್ಶಿಯಾಗಿ ಬೆಳಗಾಂ ಡಿವಿಜನ್ ನ ಉಸ್ತುವಾರಿ ಯಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಬಿ.ಆರ್ ನಾಯ್ಡುರವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಂಚಾಲಕ ನಟರಾಜ್ ಗೌಡ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಸಂಚಾಲಕರಾಗಿ ನೂತನವಾಗಿ ನೇಮಕಗೊಂಡಿರುವ ಬಿ.ಆರ್ ನಾಯ್ಡುರವರಿಗೆ ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಂಚಾಲಕರಾದ ನಟರಾಜ್ ಗೌಡರವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಸಂಧರ್ಭದಲ್ಲಿ ಅವರು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮೂಲಕ ಪಕ್ಷ ಸಂಘಟನೆಗೆ ತನ್ನ ಸಂಚಾಲಕ ಅವಧಿಯಲ್ಲಿ ಶ್ರಮಿಸಿದ ವಿಧಾನಸಭಾ ಕ್ಷೇತ್ರ, ಜಿಲ್ಲೆ ಹಾಗೂ ರಾಜ್ಯಮಟ್ಟದ ಎಲ್ಲಾ ಸಂಚಾಲಕರುಗಳಿಗೆ, ಕಾರ್ಯದರ್ಶಿಗಳಿಗೆ ಹಾಗೂ ಪದಾದಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಹಾಗೆಯೇ ಸಾಮಾಜಿಕ ಜಾಲತಾಣ ವಿಭಾಗದ ಜವಾಬ್ದಾರಿ ನಿರ್ವಹಿಸಲು ಅವಕಾಶ ಮಾಡಿಕೊಟ್ಟ ಆಗಿನ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರವರಿಗೆ ಅವರಿಗೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿದ್ದು ಸದಾ ಬೆಂಬಲವನ್ನು ನೀಡಿದ ಶ್ರೀಮತಿ ಟಬು ದಿನೇಶ್ ಗುಂಡೂರಾವ್ ಹಾಗೂ ಯತೀಂದ್ರ ಸಿದ್ಧರಾಮಯ್ಯರವರಿಗೂ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೂ, ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ. ಪರಮೇಶ್ವರ್ ರವರಿಗೂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರಿಗೂ, ಆರ್.ಎಸ್.ಸುರ್ಜಿವಾಲರವರಿಗೂ, ಕೆ.ಸಿ ವೇಣುಗೋಪಾಲ ರವರಿಗೂ, ರಾಜೀವ್ ಗೌಡರವರಿಗೂ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಷ್ಟ್ರೀಯ ಸಂಚಾಲಕರಾದ ರೋಹನ್ ಗುಪ್ತಾ ರವರಿಗೂ, ಹಸೀಬಾ ಅಮಿನ್ ರವರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ. __________________________________ ►►ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►►ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

Advertisement
Advertisement
Recent Posts
Advertisement