ರಾಜ್ಯ

ಬೆಳಗಾವಿ ಲೋಕಸಭೆ- ಸತೀಶ್ ಜಾರಕಿಹೊಳಿ ಅಭ್ಯರ್ಥಿ: ಕಾಂಗ್ರೆಸ್ ಹೈಕಮಾಂಡ್ ಘೋಷಣೆ

ಪ್ರತಿಷ್ಠೆಯ ಕ್ಷೇತ್ರವಾಗಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಸೂಚನೆಯ ಮೇರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಬಿಜೆಪಿಯಿಂದ ಮಾಜಿ ಸಂಸದ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಕಣದಲ್ಲಿದ್ದಾರೆ. 4 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್‌ ಅಂಗಡಿ ಯವರು ಕಳೆದ ವರ್ಷ ಸೆಪ್ಟೆಂಬರ್ 23 ರಂದು ಮೃತಪಟ್ಟ ಕಾರಣದಿಂದ ಬೆಳಗಾವಿ ಲೋಕಸಭಾ ಸ್ಥಾನ ತೆರವಾಗಿತ್ತು.

ಉಪಚುನಾವಣೆ ವೇಳಾಪಟ್ಟಿ ಇಂತಿದೆ: ಮಾರ್ಚ್ 30: ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ. ಮಾರ್ಚ್ 31: ನಾಮಪತ್ರಗಳ ಪರಿಶೀಲನೆ. ಏಪ್ರಿಲ್ 03: ನಾಮಪತ್ರ ವಾಪಸ್‌ಗೆ ಕೊನೆ ದಿನ. ಏಪ್ರಿಲ್ 17: ಮತದಾನ‌. ಮೇ 02: ಫಲಿತಾಂಶ ಪ್ರಕಟ.

__________________________________

►► ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ RG ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►► ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

0Shares