ಶಿವಮೊಗ್ಗ

ಶಿವಮೊಗ್ಗ: ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮದ ಸ್ಥಳಕ್ಕೆ ಎನ್‌ಎಸ್‌ಯುಐ ಮುತ್ತಿಗೆ- ಗೋ ಬ್ಯಾಕ್ ಸೂಲಿಬೆಲೆ ಘೋಷಣೆ!

ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ, ಮಾಜಿ ಪ್ರಧಾನಿಗಳ ವಿರುದ್ಧ ಮತ್ತು ದೇಶದ ಇತಿಹಾಸವನ್ನು ಸದಾ ತಿರುಚಿ ಅಪಪ್ರಚಾರ ಮಾಡುವ ಮೂಲಕ ಫೇಸ್‌ಬುಕ್‌, ಟ್ವಿಟರ್, ವಾಟ್ಸ್ಯಾಪ್ ಮುಂತಾದ ಸಾಮಾಜಿಕ ಜಾಲತಾಣದಲ್ಲಿ ರಾಜ್ಯದಾದ್ಯಂತ ಪ್ರಗತಿಪರರಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿರುವ ಹಾಗೂ ಯುವಕರಿಂದ #ಹೆಂಗ್_ಪುಂಗ್_ಲೀ ಬಿರುದು ಪಡೆದಿರುವ ಬಿಜೆಪಿ ಪರ ಬಾಷಣಕಾರ ಚಕ್ರವರ್ತಿ ಸೂಲಿಬೆಲೆಯ ಶಿವಮೊಗ್ಗದ ನೆಹರೂ ಸ್ಟೇಡಿಯಂ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಎನ್‌ಎಸ್‌ಯುಐ ಘಟಕ ಮುತ್ತಿಗೆ ಹಾಕಿ ಗೋ ಬ್ಯಾಕ್ ಸೂಲಿಬೆಲೆ ಘೋಷಣೆ ಕೂಗಿ ಪ್ರತಿಭಟಿಸಿತು.ಒಂದೆಡೆ ರಾಜ್ಯ ಸರ್ಕಾರ ಕೊರೊನಾ-2 ಹೆಸರಲ್ಲಿ ರಾಜ್ಯಾದಾದ್ಯಂತ ಮಾಸ್ಕ್ ಹಾಕದ ಆರೋಪದ ಮೇಲೆ ಗರಿಷ್ಠ ಐದು ಸಾವಿರದ ತನಕ ದಂಡ ವಿಧಿಸುತ್ತಿದ್ದರೆ ಮತ್ತೊಂದೆಡೆ ಈ ರೀತಿಯ ಇತಿಹಾಸ ತಿರುಚುವ ಕಾರ್ಯಕ್ರಮಕ್ಕೆ ಅನುಮತಿ ನೀಡುತ್ತಿರುವುದು ಖಂಡನೀಯ ಎಂದು ಎನ್‌ಎಸ್‌ಯುಐ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಬಾಲಾಜಿ ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಚೇತನ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಜಿ ಮಧುಸೂದನ್, ಎನ್‌ಎಸ್‌ಯುಐ ಜಿಲ್ಲಾ ಕಾರ್ಯಾಧ್ಯಕ್ಷ ರವಿಕುಮಾರ್ ಮತ್ತಿತರ ಜಿಲ್ಲಾ ಕಾಂಗ್ರೆಸ್ ಎನ್‌ಎಸ್‌ಯುಐ, ಯುವ ಕಾಂಗ್ರೆಸ್ ಘಟಕದ ಪದಾದಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

__________________________________

►► ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ RG ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►► ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

0Shares