ರಾಜ್ಯ

ರಮೇಶ್ ಜಾರಕಿಹೊಳಿ ಯಿಂದ ಆಗಿರುವ ಅನ್ಯಾಯದ ಕುರಿತು ಅಳಲು ತೋಡಿಕೊಂಡ ಸಂತ್ರಸ್ತ ಯುವತಿ (ನೋಡಿ..ಐದನೆಯ ವಿಡಿಯೋ)

ಕೆಲಸ ಕೊಡಿಸುವುದಾಗಿ ನಂಬಿಸಿ, ಅತ್ಯಾಚಾರವೆಸಗಿದ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತು ತನಗೆ, ತನ್ನ ಕುಟಂಬಕ್ಕೆ ರಕ್ಷಣೆ ಒದಗಿಸುವಂತೆ ವಿನಂತಿಸಿದ ಅತ್ಯಾಚಾರ ಸಂತ್ರಸ್ಥೆಯ ಐದನೆಯ ವಿಡಿಯೋ.

ಇಂದು ಆಗಿರುವ ಬೆಳವಣಿಗೆ ಕಂಡು ನನಗೆ ಭಯವಾಗುತ್ತಿದೆ. ನಮ್ಮ ಅಪ್ಪ, ಅಮ್ಮನಿಗೆ ಏನೂ ಗೊತ್ತೇ ಇಲ್ಲ. ಅವರ ಮೇಲೆ ಪ್ರಭಾವ ಬೀರಿ, ಬೆದರಿಕೆ ಹಾಕಿ, ಅವರನ್ನು ಎಲ್ಲೋ ಇರಿಸಿ, ಇಂದು ಹೊರಗಡೆ ಕರೆದುಕೊಂಡು ಬಂದು ಅವರ ಬಾಯಿಂದ ಏನೇನೋ ಹೇಳಿಸುತ್ತಿದ್ದಾರೆ. ಈ ಕೇಸಲ್ಲಿ ಅನ್ಯಾಯವಾಗಿರುವುದು ನನಗೆ, ಅನ್ಯಾಯ ಮಾಡಿರುವುದು ಅವರು. ಆದರೆ ಅವರ ಮನೆಯವರನ್ನು ಯಾಕೆ ಕರೆದುಕೊಂಡು ಬಂದು ವಿಚಾರಣೆ ಮಾಡುತ್ತಿಲ್ಲ?ನಮ್ಮ ತಂದೆ, ತಾಯಿ ಬಾಯಿಂದ ಏನೇನೋ ಹೇಳಿಸಿ, ಪ್ರಕರಣವನ್ನೇ ಬೇರೆ ರೀತಿ ತಿರುಗಿಸುತ್ತಿದ್ದಾರೆ. ಇಲ್ಲಿ ನ್ಯಾಯ ಸಿಗಬೇಕಿರುವುದು ನನಗೆ, ಮೊದಲು ನನ್ನ ಬಗ್ಗೆ ಮಾತನಾಡಬೇಕು. ಅದನ್ನು ಬಿಟ್ಟು ಬೇರೆಯವರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ನನಗೆ ಬೇಕಿಲ್ಲ ಅವೆಲ್ಲ ಅವರ ವೈಯಕ್ತಿಕ ವಿಚಾರ. ಈಗ ನಾನು ಬಂದು ಹೇಳಿಕೆ ನೀಡಬೇಕೆಂದರೂ ನನಗೆ ಭಯವಾಗುತ್ತಿದೆ!

ಪ್ರಭಾವ ಬೀರಿ ನಮ್ಮ ಅಪ್ಪ, ಅಮ್ಮನ ಕಡೆಯಿಂದಲೇ ಏನೇನೋ ಹೇಳಿಸಿ, ಪ್ರಕರಣವನ್ನೇ ಬದಲಾಯಿಸಲು ನೋಡುತ್ತಿದ್ದಾರೆ. ಹೀಗಿರುವಾಗ ನಾನು ಅಲ್ಲಿಗೆ ಬಂದು ಹೇಳಿಕೆ ನೀಡಿದರೆ ಏನಾಗುತ್ತೋ ನನಗೆ ಗೊತ್ತಾಗುತ್ತಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಅವರ ಬಳಿ ಕೇಳಿಕೊಳ್ಳುವುದು ಇಷ್ಟೇ, ನನಗೆ ಸಹಾಯ ಮಾಡಿ. ಏನೇನು ಅನ್ಯಾಯ ಮಾಡಿದ್ದಾರೋ ಎಲ್ಲವನ್ನೂ ಎಳೆ ಎಳೆಯಾಗಿ ಎಲ್ಲರ ಮುಂದೆ ಬಿಚ್ಚಿಡುತ್ತೇನೆ.

ವಿಡಿಯೋ ನೋಡಲು ಈ ಕೆಳಗಿನ ಕನ್ನಡ ಮೀಡಿಯಾ ಡಾಟ್ ಕಾಮ್ ಯೂಟ್ಯೂಬ್ ಚಾನಲ್‌ನ ಲಿಂಕ್ ಕ್ಲಿಕ್ ಮಾಡಿ… ಮತ್ತು ಯೂಟ್ಯೂಬ್ ಚಾನಲ್ subscribe ಮಾಡಿ. (ಸಂತ್ರಸ್ಥೆಯ ಗೌಪ್ಯತೆಯ ದೃಷ್ಟಿಯಿಂದ ವಿಡಿಯೋ ಬ್ಲರ್ ಮಾಡಲಾಗಿದೆ)__________________________________

►► ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ RG ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►► ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

0Shares