Advertisement

ಭದ್ರಾವತಿ ನಗರಸಭಾ ಚುನಾವಣೆ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆ.

Advertisement

ಭದ್ರಾವತಿ ನಗರಸಭೆ ಚುನಾವಣೆ ಪ್ರಯುಕ್ತ ಭದ್ರಾವತಿ ಶಾಸಕ ಸಂಗಮೇಶ್ ರವರ ಗೃಹಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪದಾದಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಭದ್ರಾವತಿಯ ನಗರಸಭೆ ಚುನಾವಣೆಯಲ್ಲಿ ಪಾಲ್ಗೊಳ್ಳಲು ನಿರ್ಣಯ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಭದ್ರಾವತಿಯ ಶಾಸಕರಾದ ಸಂಗಮೇಶ್, ವಿಧಾನ ಪರಿಷತ್ ಸದಸ್ಯರಾದ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ರಾಮೇಗೌಡ್ರು, ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷರಾದ ಶ್ರೀ ಆರಿಫುಲ್ಲಾ, ಸೈಯದ್ ವಾಹಿದ್ ಅಡ್ಡು, ಬ್ಲಾಕ್ ಅಧ್ಯಕ್ಷರಾದ ಶ್ರೀ ಚಂದ್ರೇಗೌಡ್ರು, ಬಿ.ಕೆ.ಮೋಹನ್, ಕೆಪಿಸಿಸಿ ಸೋಶಿಯಲ್ ಪ್ರಧಾನ ಕಾರ್ಯದರ್ಶಿ ಸೌಗಂಧಿಕಾ ರಘುನಾಥ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ಮಂಜುನಾಥ್ ಗೌಡ, ಭದ್ರಾವತಿ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಅಧ್ಯಕ್ಷ ಅಬೀದ್, ಸಂಜಯ್, ಮತ್ತಿತರ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು. __________________________________ ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ RG ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ.

Advertisement
Advertisement
Recent Posts
Advertisement