Advertisement

ಕೋವಿಡ್‌ -2: ಜನರ ಕಷ್ಟಗಳಿಗೆ ಸ್ಪಂದಿಸುವಂತೆ ಪಕ್ಷದ ಶಾಸಕರಿಗೆ, ಪದಾದಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

Advertisement

ಕೊರೊನಾ-2ಅಲೆಯ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ, ಆಕ್ಸಿಜನ್ ಪೂರೈಕೆ, ಔಷಧಿಗಳ ಪೂರೈಕೆ, ಆಂಬ್ಯುಲೆನ್ಸ್ ಗಳನ್ನು ತುರ್ತಾಗಿ ದೊರಕಿಸಿಕೊಡಲು ನೆರವು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರು ಪಕ್ಷದ ಎಲ್ಲಾ ಶಾಸಕರುಗಳಲ್ಲಿ ವಿನಂತಿ ಮಾಡಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, "ನಮ್ಮ ಪಕ್ಷದ ಎಲ್ಲಾ ಶಾಸಕರು ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಆಸ್ಪತ್ರೆ, ಆಕ್ಸಿಜನ್, ಔಷಧಿ, ಆಂಬ್ಯುಲೆನ್ಸ್ ದೊರೆಯಲು ನೆರವು ನೀಡಬೇಕು. ಹಾಗೂ ಹಸಿವಿನಿಂದ ಬಳಲುತ್ತಿರುವವರಿಗೆ ಅನ್ನ ಆಹಾರದ ವ್ಯವಸ್ಥೆಯನ್ನು ಕಳೆದ ವರ್ಷದಂತೆ ಈ ವರ್ಷವೂ ಮಾಡುವ ಮೂಲಕ ಜನರ ಕಷ್ಟಕಾಲದಲ್ಲಿ ನೆರವಾಗಬೇಕು," ಎಂದು ಕೋರಿದ್ದಾರೆ. "ಕೋವಿಡ್ 2ನೇ ಅಲೆ ರಾಜ್ಯ ಮತ್ತು ರಾಷ್ಟ್ರವನ್ನು ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಜನತೆ ಮುನ್ನೆಚ್ಚರಿಕೆ ವಹಿಸುವುದು ತೀರಾ ಅಗತ್ಯ. ಮಾಸ್ಕ್ ಧರಿಸುವ, ಸಾಮಾಜಿಕ ಅಂತರ ಕಾಪಾಡುವ ಮೂಲಕ ಸೋಂಕಿನಿಂದ ದೂರ ಇರಬೇಕು" ಎಂದು ಅವರು ಮತ್ತೊಂದು ಟ್ಟೀಟ್‌‌ನಲ್ಲಿ ಮನವಿ ಮಾಡಿದ್ದಾರೆ. __________________________________ ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ RG ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ.

Advertisement
Advertisement
Recent Posts
Advertisement