Advertisement

ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿಯನ್ನು ಈ ಕೂಡಲೇ ಬಂದಿಸಿ ಇಲ್ಲವಾದರೆ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡಲಿದೆ: ಡಿ.ಕೆ ಶಿವಕುಮಾರ್

Advertisement

ಮುಖ್ಯಮಂತ್ರಿ, ಗೃಹಮಂತ್ರಿ, ರಾಜ್ಯದ ಮಹಿಳೆಯರ ಹಾಗೂ ಪೊಲೀಸ್ ಅಧಿಕಾರಿಗಳ ಆತ್ಮಗೌರವ ರಕ್ಷಣೆಗೆ ಪೊಲೀಸರು ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿಯನ್ನು ತಕ್ಷಣ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತಾದ ವಿಡಿಯೋ ನೋಡಿ ಮತ್ತು ಕನ್ನಡ ಮೀಡಿಯಾ ಡಾಟ್ ಕಾಂ ಯೂಟ್ಯೂಬ್ ಚಾನಲ್ ಸಬ್ಸ್‌ಕ್ರೈಬ್ ಮಾಡಿ: ‘ನಮಗೆ ವ್ಯಕ್ತಿಗಿಂತ ಕರ್ನಾಟಕ ರಾಜ್ಯದ ಪೋಲೀಸ್ ಇಲಾಖೆ ಗೌರವ ಮುಖ್ಯ. ಪೊಲೀಸ್ ಅಧಿಕಾರಿಗಳು ಮುಕ್ತವಾಗಿ ಕೆಲಸ ಮಾಡಲಾಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಐಪಿಸಿ ಸೆಕ್ಷನ್ 376 ಅಡಿಯ ಆರೋಪಿಯನ್ನು ಸ್ವತಂತ್ರವಾಗಿ ತಿರುಗಾಡಿಕೊಂಡಿರಲು ಬಿಟ್ಟಿದ್ದಾರೆ. ಆರೋಪಿಯನ್ನು ರಕ್ಷಿಸುತ್ತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಹಾಗೂ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಟ್ಟ ಸಂಪ್ರದಾಯಕ್ಕೆ ಬುನಾದಿ ಹಾಕಿಕೊಡುತ್ತಿದ್ದಾರೆ. ಕೆಟ್ಟ ಇತಿಹಾಸ ನಿಮ್ಮಿಂದ ನಿರ್ಮಾಣವಾಗುತ್ತದೆ. ಭವಿಷ್ಯದಲ್ಲಿ ಇಂತಹ ಯಾವುದೇ ಪ್ರಕರಣ ವರದಿಯಾದರೂ ಈ ಪ್ರಕರಣವನ್ನು ಉದಾಹರಣೆಯನ್ನಾಗಿ ತೆಗೆದುಕೊಳ್ಳುತ್ತಾರೆ. ನಾನು ಸೌಮೇಂದು ಮುಖರ್ಜಿ, ಸಂದೀಪ್ ಪಾಟೀಲ್, ಅನುಚೇತ್ ಸೇರಿದಂತೆ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಒಂದು ವಿಚಾರ ಹೇಳಲು ಬಯಸುತ್ತೇನೆ. ನೀವು ಇನ್ನು ಹತ್ತಾರು ವರ್ಷ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಬೇಕಿದೆ. ರಾಜಕಾರಣಿಗಳು ಇಂದು ಇರುತ್ತಾರೆ, ನಾಳೆ ಹೋಗುತ್ತಾರೆ. ಆದರೆ ಪೊಲೀಸರು ತಮ್ಮ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಬಾರದು. ನೀವು ಹಾಕಿಕೊಂಡಿರುವ ಸ್ಟಾರ್ ಗಳಿಗೆ ಧಕ್ಕೆ ತಂದುಕೊಳ್ಳಬಾರದು. ಕೆಟ್ಟ ಉದಾಹರಣೆಯಾಗಬಾರದು ಎಂದವರು ಒತ್ತಾಯಿಸಿದ್ದಾರೆ. ಮಾಜಿ ಸಚಿವರ ಮೇಲೆ ರೇಪ್ ಆರೋಪ ಕೇಳಿ ಬಂದ ನಂತರ ಗೃಹ ಸಚಿವರನ್ನು ಅವರು ಭೇಟಿ ಮಾಡುತ್ತಾರೆ. ಇದನ್ನು ಮಾಧ್ಯಮಗಳು ವರದಿ ಮಾಡಿವೆ. ಸಂಬಂಧಪಟ್ಟವರು ಇದನ್ನು ನಿರಾಕರಿಸಿಲ್ಲ. ರೇಪ್ ಆರೋಪಿಯ ಫೋನ್ ಕರೆಗಳ ದಾಖಲೆ ತೆಗೆಯಿರಿ. ಈ ರೀತಿ ಇನ್ನು ಎಷ್ಟು ಹೆಣ್ಣುಮಕ್ಕಳು ಇಂತಹ ಪರಿಸ್ಥಿತಿ ಎದುರಿಸಿದ್ದಾರೋ? ಈ ಪ್ರಕರಣ ಹೈಕೋರ್ಟ್ ನಿರ್ದೇಶನದಲ್ಲಿ ತನಿಖೆ ಆಗಬೇಕು. ಕೂಡಲೇ ರೇಪಿಸ್ಟ್ ರಮೇಶನನ್ನು ಬಂಧಿಸಿ, ಆತನ ವೈದ್ಯಕೀಯ ಪರೀಕ್ಷೆ ನಡೆಸಬೇಕು. ಆಗ ಈತ ಕೊಟ್ಟಹೇಳಿಕೆಗಳು, ಹೊಡೆದ ಡೈಲಾಗ್ ಗಳು ಈಗ ಯಾಕೆ ಆಚೆ ಬರುತ್ತಿಲ್ಲ? ಈಗ ಪತ್ರಿಕಾಗೋಷ್ಠಿ ನಡೆಸಿ ಯಾರು ನಿಮಗೆ ಬೆದರಿಸಿ ಹಣ ಕೇಳಿದರು, ಯಾರು ಒತ್ತಡ ಹಾಕಿದರು ಎಂದು ಹೇಳಿ. ನೀವು ಇಂತಹ ದುಷ್ಟ ನಡವಳಿಕೆ ಇಟ್ಟುಕೊಂಡು, ಆ ಹೆಣ್ಣಿನ ನಡವಳಿಕೆ ಬಗ್ಗೆ ಮಾತನಾಡುತ್ತೀರಾ? ಆಕೆ ವಿರುದ್ಧ ಎಂತಹ ಶಬ್ಧ ಬಳಸಿದ್ದೀರಿ? ಕರ್ನಾಟಕ ಭವನಕ್ಕೆ ಹೋಗಿ ಅಲ್ಲಿಯೂ ತನಿಖೆ ಮಾಡಬೇಕು. ಆಡಿಯೋ, ವಿಡಿಯೋದಲ್ಲಿ ಯಾರ ಹೆಸರೆಲ್ಲಾ ಬಂದಿದೆ. ಇದು ಕೇವಲ ಒಬ್ಬ ವ್ಯಕ್ತಿಗೆ ಸಂಬಂಧಿಸಿದ ವಿಚಾರವಲ್ಲ, ರಾಜ್ಯದ ಘನತೆ, ರಾಜ್ಯದ ಮಹಿಳೆಯರ ರಕ್ಷಣೆಗೆ ಸಂಬಂಧಿಸಿದ ವಿಚಾರ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಬೀದಿಗಿಳಿದು ಹೋರಾಟ ನಡೆಸುತ್ತದೆ. ಗೃಹ ಸಚಿವರೇ ನೀವು ನ್ಯಾಯ ನೀಡುವ ಸ್ಥಾನದಲ್ಲಿ ಕೂತು ಅನ್ಯಾಯಕ್ಕೆ ಅವಕಾಶ ಕೊಡಬಾರದು ಎಂದವರು ಕಿಡಿ ಕಾರಿದ್ದಾರೆ. __________________________________ ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ.

Advertisement
Advertisement
Recent Posts
Advertisement