Advertisement

ಇಂಧನ ಬೆಲೆ ಏರಿಕೆ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್ ನಡೆಸಿದ ಪ್ರತಿಭಟನೆಗಳ ವರ್ಚುವಲ್ ವೀಕ್ಷಣೆ ಮಾಡಿದ ರಾಜ್ಯ ನಾಯಕರು: ಫೋಟೋ ವೈರಲ್

Advertisement

ಪೆಟ್ರೋಲ್ ಡಿಸೇಲ್ ಬೆಲೆ ದಾಖಲೆಯ ನೂರು ರೂಪಾಯಿ ಗೆ ಏರಿರುವುದನ್ನು ವಿರೋಧಿಸಿ ಇಂದಿನಿಂದ ಐದು ದಿನಗಳ ಕಾಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ದೇಶದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅದರ ಅಂಗವಾಗಿ ಕರ್ನಾಟಕ ರಾಜ್ಯಾದ್ಯಂತ ಇಂದು ಸುಮಾರು 800ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳ ಮುಂದೆ ನಡೆದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರು ವರ್ಚುವಲ್ ಆಗಿ ವೀಕ್ಷಿಸಿ, ಭಾಗವಹಿಸಿದ ಪಕ್ಷದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ನಾಯಕರಿಗೂ, ಜನಪ್ರತಿನಿಧಿಗಳಿಗೂ, ಪದಾದಿಕಾರಿಗಳಿಗೂ ಹಾಗೂ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸಿದರು. ಇಂದು (ಜೂನ್ 11) ದೇಶದ ಎಲ್ಲಾ ಜಿಲ್ಲಾ ಕೇಂದ್ರದ ಪೆಟ್ರೋಲ್ ಬಂಕ್‌ಗಳ ಸಮೀಪ ಪ್ರತಿಭಟನೆ ನಡೆದರೆ, ನಾಳೆ (ಜೂನ್ 12) ತಾಲೂಕು ಕೇಂದ್ರದ ಪೆಟ್ರೋಲ್ ಬಂಕ್‌ಗಳ ಸಮೀಪ ನಡೆಯಲಿದ್ದು, ನಾಡಿದ್ದು (ಜೂನ್ 13) ಎಲ್ಲಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಪೆಟ್ರೋಲ್ ಬಂಕ್‌ಗಳ ಸಮೀಪ ನಡೆಯಲಿದೆ. ಅದರ ಮರುದಿನ (ಜೂನ್ 14) ಗ್ರಾಮಮಟ್ಟದಲ್ಲಿನ ಪೆಟ್ರೋಲ್ ಬಂಕ್ ಎದುರು ನಡೆದರೆ ಜೂನ್ 15ರಂದು ಇನ್ನುಳಿದ ಪ್ರಮುಖ ಸ್ಥಳಗಳಲ್ಲಿ ನಡೆಯಲಿದೆ. ಹಿಂದಿನ ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಪಕ್ಷದ ಆಡಳಿತದ ಅವಧಿಯಲ್ಲಿ ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಬ್ಯಾರಲ್‌ಗೆ 127 ಡಾಲರ್ ಇದ್ದಾಗ ಸಿಂಗ್ ಸರ್ಕಾರ ಕೇವಲ 3ರೂಪಾಯಿ 16ಪೈಸೆಗಳಷ್ಟು ಮಾತ್ರವೇ ತೆರಿಗೆ ವಿಧಿಸುವ ಮೂಲಕ ದೇಶದ ಜನರಿಗೆ ಪೆಟ್ರೋಲ್ ಡಿಸೇಲ್ ಖರೀದಿ ಹೊರೆಯಾಗದಂತೆ ಆ ಮೂಲಕ ಸಾಗಣೆ ವೆಚ್ಚ ಹೆಚ್ಚಾಗಿ ಅಗತ್ಯ ವಸ್ತುಗಳ ಬೆಲೆಯೇರಿಕೆಯಾಗದಂತೆ ತಡೆಯೊಡ್ಡಿತ್ತು. ಆದರೆ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಬ್ಯಾರಲ್‌ಗೆ ಕೇವಲ 47ಡಾಲರ್ ಮಟ್ಟಕ್ಕೆ ಇಳಿಕೆ ಕಂಡಿತ್ತು. ಆದರೆ ಮೋದಿ ಸರ್ಕಾರ ಕಚ್ಚಾತೈಲ ಬೆಲೆ ಇಳಿಕೆಯ ಲಾಭವನ್ನು ಜನರಿಗೆ ಕೊಡದೆ ವಿಪರೀತ ಎಂಬಷ್ಟು ತೆರಿಗೆಗಳನ್ನು ವಿಧಿಸುವ ಮೂಲಕ ಅಂದರೆ ಪೆಟ್ರೋಲ್ ಮೂಲ ಬೆಲೆ 35ರೂ. ಆಗಿದ್ದರೆ ಕೇಂದ್ರದ ಮೋದಿ ಸರ್ಕಾರ 34ರೂ. ತೆರಿಗೆ ಹಾಕುವ ಮೂಲಕ ಹಾಗೂ ರಾಜ್ಯದ ಯಡಿಯೂರಪ್ಪ ಸರ್ಕಾರ 26ರೂ. ತೆರಿಗೆ ಹಾಕುವ ಮೂಲಕ ಜನರ ಸುಲಿಗೆಗೆ ಇಳಿದಿದೆ. ಜನರ ಆರ್ಥಿಕತೆ ಅವೈಜ್ಞಾನಿಕವಾದ ನೋಟು ಬ್ಯಾನ್ ಮತ್ತು ಅನಗತ್ಯವಾಗಿದ್ದ ಲಾಕ್‌ಡೌನ್ ನಿಂದ ಪಾತಾಳ ಕಂಡಿರುವ ಈ ಹೊತ್ತಿನಲ್ಲಿ ಪೆಟ್ರೋಲ್ ಬೆಲೆ ಏರಿಕೆ ಅಕ್ಷಮ್ಯ. ಈ ಕೂಡಲೇ ತೆರಿಗೆಯನ್ನು ಸಂಪೂರ್ಣವಾಗಿ ಕಡಿತಗೊಳಿಸಿ ಜನರು ಪುನಃ ಬದುಕು ಕಟ್ಟಿಕೊಳ್ಳಲು ಸರ್ಕಾರ ನೆರವಾಗಬೇಕು. ಅದರ ಅಂಗವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? 1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? 'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com

Advertisement
Advertisement
Recent Posts
Advertisement