Advertisement

ತೆಕ್ಕಟ್ಟೆ: ಪೆಟ್ರೋಲ್ 100 ರೂಪಾಯಿ ನಾಟೌಟ್ -ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ.

Advertisement

ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ದಾಖಲೆಯ ಮಟ್ಟದಲ್ಲಿ ಇಳಿಕೆಯಾಗಿದ್ದರೂ ಕೂಡ, ಆ ಇಳಿಕೆಯ ಲಾಭವನ್ನು ಗ್ರಾಹಕರಿಗೆ ನೀಡದೆ ಪೆಟ್ರೋಲ್ ಬೆಲೆಯ ಎರಡರಷ್ಟು ತೆರಿಗೆಯನ್ನು ಹಾಕುವ ಮೂಲಕ ದೇಶದ ಜನರ ಸುಲಿಗೆಯಲ್ಲಿ ತೊಡಗಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮತ್ತು ರಾಜ್ಯದ ಯಡಿಯೂರಪ್ಪ ಸರ್ಕಾರದ ಜನವಿರೋದಿ ನೀತಿಯ ವಿರುದ್ದ ಕಳೆದ ಮೂರು ದಿನಗಳಿಂದ ದೇಶದಾದ್ಯಂತ ನಡೆಯುತ್ತಿರುವ 'ಪೆಟ್ರೋಲ್ 100 ನಾಟೌಟ್' ಪ್ರತಿಭಟನೆಯು ಜೂನ್ 11ರಂದು ಮೊದಲ ದಿನ ದೇಶದ ಎಲ್ಲಾ ಜಿಲ್ಲಾ ಕೇಂದ್ರ ಸ್ಥಳಗಳ ಪೆಟ್ರೋಲ್ ಬಂಕ್ ಎದುರಿನಲ್ಲಿ ನಡೆದಿತ್ತು. ಎರಡನೆಯ ದಿನ‌ ದೇಶದ ಎಲ್ಲಾ ತಾಲೂಕು ಕೇಂದ್ರದ ಪೆಟ್ರೋಲ್ ಬಂಕ್ ಎದುರಲ್ಲಿ ನಡೆದಿದ್ದರೆ ಇಂದು ಮೂರನೆಯ ದಿನ ದೇಶದ ಎಲ್ಲಾ ಜಿಲ್ಲಾ ಪಂಚಾಯತ್ ಮಟ್ಟದ ಪೆಟ್ರೋಲ್ ಬಂಕ್ ಸಮೀಪ ನಡೆಯುತ್ತಿದೆ. ಅದರ ಅಂಗವಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಕೋಣಿ, ಬಿದ್ಕಲ್‌ಕಟ್ಟೆ ಮತ್ತು ತೆಕ್ಕಟ್ಟೆ ಮುಂತಾದೆಡೆಯ ಪೆಟ್ರೋಲ್ ಬಂಕ್‌ಗಳ ಎದುರು ಪ್ರತಿಭಟನೆ ನಡೆಯಿತು. ಈ ಕುರಿತು ಕಾಂಗ್ರೆಸ್ ಹಿರಿಯ ನಾಯಕ 2013ರ ವಿಧಾನಸಭಾ ಅಭ್ಯರ್ಥಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಮಲ್ಯಾಡಿ ಶಿವರಾಮ ಶೆಟ್ಟಿಯವರ ಮಾತುಗಳನ್ನು ಆಲಿಸಲು ಕನ್ನಡ ಮೀಡಿಯಾ ಡಾಟ್ ಕಾಮ್ ಯೂಟ್ಯೂಬ್ ಚಾನಲ್‌ನ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ: ಈ ಸಂಧರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಬಿ. ಹಿರಿಯಣ್ಣ, ರಾಮಕೃಷ್ಣ ಹೇರ್ಲೆ, ಅಣ್ಣಯ್ಯ ಪುತ್ರನ್, ವಕ್ವಾಡಿ ರಮೇಶ್ ಶೆಟ್ಟಿ, ಕಾಳಾವರ ದೀಪಕ್ ಶೆಟ್ಟಿ, ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ದೇವಾಡಿಗ, ಉಪಾಧ್ಯಕ್ಷ ಸಂಜೀವ ದೇವಾಡಿಗ, ವಿಜಯ ಭಂಡಾರಿ, ಸುರೇಶ್ ಶೆಟ್ಟಿ, ಸತೀಶ್ ದೇವಾಡಿಗ, ಪ್ರೇಮಾ ಮೊಗವೀರ, ಸತೀಶ್ ಬಾರಾಳಿಬೆಟ್ಟು, ಶ್ರೀನಿವಾಸ ಪೂಜಾರಿ, ವಿಎಸ್‌ಎಸ್‌ಎನ್ ನಿರ್ದೇಶಕ ಚಂದ್ರಶೇಖರ ಶೆಟ್ಟಿ, ಯುವ ಮುಖಂಡರಾದ ರಕ್ಷಿತ್ ಶೆಟ್ಟಿ, ಸಲಾಂ, ಶಶಿ ಕಾಂಚನ್, ಬೇಳೂರು ರಾಜೇಂದ್ರ ಶೆಟ್ಟಿ, ಜಯಶೀಲ ಶೆಟ್ಟಿ, ಕೊರವಡಿ ವಿಶ್ವನಾಥ, ತೆಕ್ಕಟ್ಟೆ ವಾದಿರಾಜ ಗಾಣಿಗ, ಸುರೇಶ್ ಚಾತ್ರಬೆಟ್ಟು ಮುಂತಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? 1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? 'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com

Advertisement
Advertisement
Recent Posts
Advertisement