Advertisement

ಕಾರ್ಕಳ ಪ್ರಕರಣ :ಸುಳ್ಳು ಆರೋಪ, ಸೂಕ್ತ ತನಿಖೆ ನಡೆಸದಿದ್ದರೆ ಬೀದಿಗಿಳಿದು ಹೋರಾಟ : ಅಶೋಕ್‍ ಕುಮಾರ್‍ ಕೊಡವೂರು

Advertisement

ಹಿರ್ಗಾನ ರಾಧಕೃಷ್ಣ ನಾಯಕ್‍ ರವರು, ತನ್ನ ಹೆಸರಿನ ಫೇಸ್‍ಬುಕ್‍ ಖಾತೆಯನ್ನು ನಕಲಿ ಸೃಷ್ಟಿಸಿ ಸೈನಿಕರನ್ನು ಅವಮಾನಿಸಿ ದೇಶದ್ರೋಹದ ಪೋಸ್ಟ್ ಮಾಡಲಾಗಿದೆ ಎಂದು, ಈ ಬಗ್ಗೆ ಬೆಂಗಳೂರು ಉತ್ತರ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದರೂ, ನಕಲಿ ಖಾತೆ ಸೃಷ್ಟಿಸಿ ಸೈನಿಕರ ಅವಹೇಳನದ ಪೋಸ್ಟ್ ಮಾಡಿದ ದೇಶದ್ರೋಹಿಗಳನ್ನು ಹಿಡಿಯುವ ಪ್ರಯತ್ನ ಮಾಡದೆ ಪೂರ್ವದ್ವೇಷದಿಂದ ರಾಧಾಕೃಷ್ಣ ನಾಯಕ್‍ರವರ ಮೇಲೆಯೇ ಕಾರ್ಕಳ ಎಸ್.ಐ.ರವರು ಮಾಡಿದ ಹಲ್ಲೆ ಅಮಾನುಷವಾದದ್ದು. ಹಿರ್ಗಾನ ಅವರ ಮೇಲಿನ ಈ ಬಿಜೆಪಿ ಪ್ರಾಯೋಜಿತ ಪೋಲಿಸ್‍ ದೌರ್ಜನ್ಯ ಖಂಡನೀಯ. ಕ್ಷೇತ್ರದ ಶಾಸಕರ ಜನವಿರೋಧಿ ಕಾರ್ಯವೈಖರಿಯ ವಿರುದ್ಧ ಪೋಸ್ಟ್ ಹಾಕುತಿದ್ದರು ಎಂಬ ಕಾರಣಕ್ಕೆ ಪೋಲಿಸ್ ಇಲಾಖೆಯನ್ನು ದುರುಪಯೋಗಪಡಿಸಿ ಈ ಸಂಚು ರೂಪಿಸಲಾಗಿದೆ. ಕಾರ್ಕಳ ಶಾಸಕರ ಒತ್ತಾಸೆಯಿಂದಾಗಿಯೇ ಹಳೆಯ ಪ್ರಕರಣವನ್ನು ಕೆಣಕಿ ಠಾಣೆಯಲ್ಲಿ ಎಸ್.ಐ.ಯವರಿಂದ ಒದೆತಿಂದ ಹಿನ್ನಲೆಯಲ್ಲಿ ರಾಧಾಕೃಷ್ಣ ನಾಯಕ್‍ರವರನ್ನು ಆಸ್ಪತ್ರೆಗೆ ಸೇರ್ಪಡೆ ಗೊಳ್ಳುವಂತಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‍ ಅಧ್ಯಕ್ಷರಾದ ಅಶೋಕ್‍ ಕುಮಾರ್‍ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ದೇಶದರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಯಾರಿಂದಲೂ ದೇಶಪ್ರೇಮದ ಪಾಠ ಹೇಳಿಸಿಕೊಳ್ಳುವ ಅಗತ್ಯತೆ ಇಲ್ಲ. ಹಿರ್ಗಾನ ರಾಧಾಕೃಷ್ಣ ನಾಯಕ್‍ರವರು ತಮ್ಮ ನಕಲಿ ಖಾತೆಯ ಬಗ್ಗೆ ಸೂಕ್ತ ತನಿಖೆ ನಡೆಸಲು ವರ್ಷಗಳ ಹಿಂದೆಯೇ ದೂರು ದಾಖಲಿಸಿರುವುದು ಗಮನಕ್ಕೆ ಬಂದಿದೆ. ಹಳೇ ಸುಳ್ಳು ಕೇಸ್ ಆಧರಿಸಿ ಹೃದ್ರೋಗ ದಂತಹ ಅನಾರೋಗ್ಯವನ್ನೂ ಲೆಕ್ಕಿಸದೆ ರಾಧಾಕೃಷ್ಣ ನಾಯಕ್ ಮೇಲೆ ಪೋಲಿಸರು ದೌರ್ಜನ್ಯ ನಡೆಸಿದ್ದಾರೆ. ಈ ಬಗ್ಗೆ ಪೋಲಿಸ್ ವರಿಷ್ಠಾಧಿಕಾರಿಗಳು ಸೂಕ್ತ ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕೆಂಬುದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರ ಆಗ್ರಹವಾಗಿದೆ. ನಕಲಿ ಫೇಸ್‍ಬುಕ್‍ ಖಾತೆಯ ಬಗ್ಗೆ ತನಿಖೆ ಮಾಡದೆ ಅದಕ್ಕೆ ಬದಲಾಗಿ ಸಿದ್ಧರಾಮಯ್ಯನವರ ಆ ತನಿಖೆಯ ಬೇಡಿಕೆಯನ್ನೇ ನೆಪವಾಗಿರಿಸಿಕೊಂಡು ಜಿಲ್ಲಾ ಬಿಜೆಪಿ ಅಧ್ಯಕ್ಷರು, ಸಿದ್ಧರಾಮಯ್ಯನವರು ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಾರೆ ಎಂದು ಆರೋಪ ಹೊರಿಸಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿರುವುದು ಹಾಸ್ಯಾಸ್ಪದವಾದ ವಿಚಾರವಾಗಿದೆ. ಎಂದವರು ಹೇಳಿದರು. ಸತ್ಯದ ಅನ್ವೇಷಣೆಗೆ ಕಾಂಗ್ರೆಸ್ ಪಕ್ಷ ಟೊಂಕಕಟ್ಟಿ ನಿಂತಿದೆ. ಈ ದ್ವೇಷದ ಪ್ರಕರಣ ತಮಗೆ ತಿರುಗು ಬಾಣವಾಗಬಹುದು ಎಂಬ ಸೂಚನೆ ದೊರಕಿ ಬಿಜೆಪಿ ಇದೀಗ ಇಂತಹ ಅರ್ಥಹೀನ ಕೃತ್ಯಕ್ಕೆ ಮುಂದಾಗಿದೆ. ನಾಯಕ್‍ ರವರು ದೇಶದ್ರೋಹದ ಪೋಸ್ಟ್ ಹಾಕಿದ್ದರೆ ಅವರ ಮೇಲೆ ಆರೋಪ ಹೊರಿಸುವುದರಲ್ಲಿ ತಪ್ಪಿಲ್ಲ ಆದರೆ ಅವರ ದೂರಿನಂತೆ ನಕಲಿ ಪೋಸ್ಟ್ ‌ನ ಬಗ್ಗೆ ತನಿಖೆ ಮಾಡದೆ ಸ್ವತಃ ದೂರುದಾರರಾದ ಹಿರ್ಗಾನರವರೇ ತಪ್ಪೆಸಗಿದ್ದಾರೆ ಎಂಬ ನಿರ್ಣಯಕ್ಕೆ ಬರಲು ಪೋಲಿಸರಿಗೆ ಹೇಗೆ ಸಾಧ್ಯ? ಸೈನಿಕರ ಬಗ್ಗೆ ಹಿಂದೂಗಳ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಬಿಜೆಪಿ ಪುಲ್ವಾಮ ದಾಳಿಯಲ್ಲಿ 44 ಜನ ಅಮಾಯಕ ಸೈನಿಕರು ಉಗ್ರರಿಂದ ಹತರಾದಾಗ ಅದಕ್ಕೆ ಕಾರಣವಾದ ಭದ್ರತಾ ವೈಫಲ್ಯವನ್ನು ಪ್ರಶ್ನಿಸಿಲ್ಲವೇಕೆ ? ಎಡಮೊಗೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದಲೇ ಹಿಂದೂ ವ್ಯಕ್ತಿಯ ಹತ್ಯೆಯಾದಾಗ ಜಾಣ ಮೌನ ಮೆರೆದ ಉದ್ದೇಶವೇನು? ಬಿಜೆಪಿ ಧರ್ಮ ಹಾಗೂ ಸೈನಿಕರನ್ನು ಮುಂದಿಟ್ಟುಕೊಂಡು ದೇಶದ ನೈಜ ಸಮಸ್ಯೆಯನ್ನು ಮರೆಮಾಚುವ ಪ್ರಯತ್ನದಲ್ಲಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು. ಸಂಬಂಧಿಸಿದ ಸುದ್ದಿಗಳು: ►►ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಸೈನಿಕರ ವಿರುದ್ಧ ಪೋಸ್ಟ್ ಮಾಡಿದ್ದು ನಿಜವೇ? ಇಲ್ಲಿದೆ ಸತ್ಯಾಂಶ! ►►ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಪೋಲಿಸ್ ದೌರ್ಜನ್ಯ ಖಂಡನೀಯ: ಕೊಡವೂರು ►►ಕಾಂಗ್ರೆಸ್ ಕಾರ್ಯಕರ್ತನ ಹೆಸರಿನಲ್ಲಿ ಸೃಷ್ಟಿಸಲಾದ ಸೈನಿಕರ ವಿರುದ್ಧದ ಪೋಸ್ಟ್‌ ನ ರೂವಾರಿ ಕಾರ್ಕಳ ಶಾಸಕರೇ? ►►ರಾಧಾಕೃಷ್ಣ ನಾಯಕ್ ಹಿರ್ಗಾನ ಪತ್ರಿಕಾಗೋಷ್ಠಿ: ಕಾರ್ಕಳ ಶಾಸಕರ ವಿರುದ್ದ ಮಾನನಷ್ಟ ಮೊಕದ್ದಮೆ! ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement