Advertisement

ಪತ್ರಕರ್ತರೇ ಎಚ್ಚರ: ಮೋದಿ ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಹುಷಾರ್!

Advertisement

ಬರಹ: ಕಮಲಾಕರ ಕಾರಣಗಿರಿ ಕೊರೊನಾ ಎರಡನೆಯ ಅಲೆಯ ವೇಳೆಯಲ್ಲಿನ ಕೇಂದ್ರ ಸರಕಾರದ ಅದಕ್ಷತೆಯ ನೈಜ ಚಿತ್ರಣವನ್ನು ಪ್ರಸಾರ ಮಾಡಿದ ತಪ್ಪಿಗಾಗಿ (ಗುರುವಾರ ಜುಲೈ 22 ರಂದು) ಉತ್ತರ ಪ್ರದೇಶ ಮೂಲದ 'ದೈನಿಕ್ ಭಾಸ್ಕರ್' ಮತ್ತು 'ಭಾರತ್ ಸಮಾಚಾರ್' ಎಂಬ ಎರಡು ಸುದ್ದಿವಾಹಿನಿಗಳ ಅಹಮದಾಬಾದ್, ನೋಯ್ಡಾ, ಭೂಪಾಲ್, ಜೈಪುರ್ ನ ಕಚೇರಿಗಳ ಮೇಲೆ ಐ.ಟಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿರುವ ಕುರಿತು ವರದಿಯಾಗಿದೆ. ದೇಶದಾದ್ಯಂತ ಹಣದ ಅಮಿಷ ಒಡ್ಡಿ, ಐ.ಟಿ, ಸಿಬಿಐ, ಈ.ಡಿ ಮುಂತಾದ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸಿ ಆ ಮೂಲಕ ಬೆದರಿಕೆ ಒಡ್ಡಿ ಇಲ್ಲವೇ ವಿವಿಧ ಪಕ್ಷಗಳ ನಾಯಕರುಗಳ ಖಾಸಗಿ ದೃಶ್ಯಗಳ ಸಿ.ಡಿಯನ್ನು ಸೃಷ್ಟಿಸಿ ಬಿಜೆಪಿಯೇತರ ಸರ್ಕಾರಗಳನ್ನು ಪತನಗೊಳಿಸಿ ಬಿಜೆಪಿ ಪಕ್ಷ ಹಲವು ರಾಜ್ಯಗಳಲ್ಲಿ ಸರ್ಕಾರ ರಚಿಸಿರುವ ಘಟನೆಗಳನ್ನು ನೀವು ಕಂಡಿರುತ್ತೀರಿ. ಹಾಗೆಯೇ ಮುದ್ರಣ, ದೃಶ್ಯ ಹಾಗೂ ಜಾಲತಾಣ ಮಾಧ್ಯಮಗಳನ್ನು ಕೂಡ ಇಂತಹದ್ದೆ ಅಮಿಷ ಮತ್ತು ಬೆದರಿಕೆಗಳ ಮೂಲಕ ನಿಯಂತ್ರಿಸುತ್ತಿರುವ ವಿಚಾರಗಳನ್ನು ಅಂತಹ ಮಾಧ್ಯಮಗಳಲ್ಲಿ ಪ್ರಕಟಗೊಳ್ಳುವ ಬಾಲಿಷವಾದ, ಜನಪರವಲ್ಲದ ಸುದ್ದಿಗಳನ್ನು ಓದಿದ ಜನಸಾಮಾನ್ಯರು ಹಾದಿ ಬೀದಿಯಲ್ಲಿ ಮಾತನಾಡುವುದನ್ನು ಕೂಡ ನೀವು ಕೇಳಿರುತ್ತೀರಿ. ಬಹುಶಃ ಇದಕ್ಕೆ ಹೊರತಾಗಿಯೂ ಆಡಳಿತ ಪಕ್ಷ ಬಿಜೆಪಿಯ ಯಾವುದೇ ಅಮಿಷ ಯಾ ಬೆದರಿಕೆಗಳಿಗೆ ಬಗ್ಗದೆ ಪ್ರಜಾಪ್ರಭುತ್ವದ ಮಾದರಿಯಲ್ಲಿ ಜನಪರವಾಗಿ ಸುದ್ದಿಗಳನ್ನು ಪ್ರಕಟಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ನೂರಾರು ಮುದ್ರಣ, ದೃಶ್ಯ, ಸಾಮಾಜಿಕ ಜಾಲತಾಣ ಮಾಧ್ಯಮಗಳು ದೇಶಾದ್ಯಂತ ಇರುವುದು ಕೂಡ ಸತ್ಯವಾದ ವಿಚಾರವಾಗಿದೆ. ಆದರೆ, ಸರ್ಕಾರದ ವೈಫಲ್ಯಗಳ ವಿರುದ್ಧ ಬರೆದ ಮಾಧ್ಯಮಗಳ ಮೇಲಿನ ದಾಳಿಯಂತಹ ಘಟನೆಗಳು ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ವಿರುದ್ಧವಾದುದಾಗಿದೆ. ಇದು ಹೀಗೆಯೇ ಮುಂದುವರೆದರೆ ಈ ದೇಶ ಕೇವಲ ಒಂದೆರಡು ತಲೆಮಾರುಗಳಲ್ಲಿ ಶಿಲಾಯುಗದ ಕಾಲಕ್ಕೆ ಮರಳುವ ಅಪಾಯ ಖಂಡೀತವಾಗಿಯೂ ಇದೆ. ಇದಕ್ಕೆ ಉದಾಹರಣೆಯಾಗಿ ಮೋದಿ ಆಡಳಿತಾವಧಿಯ ಪೂರ್ವಸಿದ್ಧತೆ ಇಲ್ಲದ ನೋಟು ಬ್ಯಾನ್, ಅವೈಜ್ಞಾನಿಕವಾದ ಜಿಎಸ್‌ಟಿ, ಅನಗತ್ಯವಾಗಿ ಹೇರಿದ್ದ ಲಾಕ್‌ಡೌನ್ ಮುಂತಾದ ಅನರ್ಥಕಾರಿ ಆರ್ಥಿಕ ನೀತಿಯ ಪರಿಣಾಮವಾಗಿ ಅವರ ಕೇವಲ ಏಳು ವರ್ಷಗಳ ಆಡಳಿತದಲ್ಲಿ ದೇಶದ ಜಿಡಿಪಿ ಮೈನಸ್ 23.9% ಗೆ ಕುಸಿತ ಕಂಡದ್ದು ಇದೇ ಜಿಡಿಪಿ ಮನಮೋಹನ್ ಸಿಂಗ್ ಆಡಳಿತಾವಧಿಯ ಕೊನೆಯಲ್ಲಿ ಬರೋಬ್ಬರಿ 10.8% ತನಕ ಏರಿಕೆ ಕಂಡಿದ್ದದ್ದು, ದೇಶದ ಐದು ಲಕ್ಷಕ್ಕೂ ಹೆಚ್ಚು ಸಣ್ಣ ಮತ್ತು ಗಾತ್ರದ ಕಂಪನಿಗಳು ಬಾಗಿಲು ಮುಚ್ಚುವಂತಾದುದು ಆ ಮೂಲಕ ದೇಶದ ನಿರುದ್ಯೋಗದ ಮಟ್ಟ ಕಳೆದ 47 ವರ್ಷಗಳ ಹಿಂದಿನ ಮಟ್ಟಕ್ಕೆ ಕುಸಿತ ಕಂಡದ್ದು, ಆ ಕಂಪೇನಿಗಳಿಗೆ ಸಾಲ ಕೊಟ್ಟ ಬ್ಯಾಂಕುಗಳು ದಿವಾಳಿಯಾದದ್ದು. ಇಂತಹ ಕೆಟ್ಟ ಪರಿಸ್ಥಿತಿಯಲ್ಲೂ ದೇಶದ ಕೆಲವೇ ಕೆಲವು ಬೆರಳೆಣಿಕೆಯ ಉಧ್ಯಮಿಗಳ ಸುಮಾರು ಮೂರು ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದು ಮತ್ತು ಅದಕ್ಕೆ ತದ್ವಿರುದ್ಧವಾಗಿ ಅದೇ ಉಧ್ಯಮಿಗಳಿಗೆ ಸರ್ಕಾರಿ ವಿಮಾನಗಳನ್ನು, ನಿಲ್ದಾಣಗಳನ್ನು, ರೈಲ್ವೆ ಮುಂತಾದ ಸುಮಾರು 23ಕ್ಕೂ ಹೆಚ್ಚು ಸರ್ಕಾರಕ್ಕೆ ಆದಾಯ ತರುತ್ತಿದ್ದ ಆಸ್ತಿಗಳನ್ನು ಚಿಲ್ಲರೆ ಕಾಸಿಗೆ ಮಾರಾಟ ಮಾಡಿದ್ದನ್ನು ನೀವು ಮರೆತಿರಲಾರಿರಿ. ಪತ್ರಕರ್ತರೇ ಎಚ್ಚರ: ಸರ್ಕಾರದ ವೈಫಲ್ಯಗಳ ವಿರುದ್ದ ಬರೆದರೆ ಐಟಿ ದಾಳಿ ನಡೆಯಲಿದೆ ಮತ್ತು ಕಿರುಕುಳ ನೀಡಲಾಗುತ್ತದೆ. ಒಂದೋ ಅದನ್ನು ಎದುರಿಸಲು ಸಿದ್ದರಾಗಿ. ಅಥವಾ ಅಂತಹ ರಗಳೆಗಳು ಬೇಡ ಎಂದಾದರೆ ಪಂಚೇಂದ್ರಿಯಗಳನ್ನು ಮುಚ್ಚಿಕೊಂಡು ಮೋದಿ ಸರ್ಕಾರವನ್ನು ಹೊಗಳಿ ಉಬ್ಬಿಸಿ ಬರೆಯಿರಿ‌ ಮತ್ತು ಅವರುಗಳು ಎಸೆವ ಚಿಲ್ಲರೆ ಕಾಸು ಪಡೆದು ಶ್ರೀಮಂತರಾಗಿ ಮತ್ತು ನಿಶ್ಚಿಂತರಾಗಿ ಬದುಕಿ. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement