Advertisement

ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಸೈನಿಕರ ವಿರುದ್ಧ ಪೋಸ್ಟ್ ಮಾಡಿದ್ದು ನಿಜವೇ? ಇಲ್ಲಿದೆ ನೋಡಿ ಸತ್ಯಾಂಶ!

Advertisement

ಕಳೆದ ವರ್ಷ ಸೆಪ್ಟೆಂಬರ್ ಹೊತ್ತಿಗೆ ಭಾರತೀಯ ಸೈನ್ಯ ಮತ್ತು ಸೈನಿಕರ ವಿರುದ್ಧ ಫೇಸ್‌ಬುಕ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ ಎಂಬ ಅಪಾದನೆಯ ಮೇಲೆ ಶುಕ್ರವಾರ ಕಾರ್ಕಳ ಪೋಲಿಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಹಿರ್ಗಾನ ರವರ ಮೇಲೆ ಪೋಲಿಸರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಅಪಾದಿಸಲಾಗಿತ್ತು ಹಾಗೂ ಆರೋಗ್ಯ ಬಿಗಡಾಯಿಸಿದ ಹಿನ್ನಲೆಯಲ್ಲಿ, ಹೃದ್ರೋಗಿಯಾಗಿರುವ ರಾಧಾಕೃಷ್ಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂಧರ್ಭದಲ್ಲಿ ಕ್ಲಬ್‌ಹೌಸ್ ನಲ್ಲಿ ಸಮಾನ ಮನಸ್ಕರಿಂದ ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಬೇರೆಬೇರೆ ಆಯಾಮದಲ್ಲಿ ಚರ್ಚೆ ನಡೆದಿತ್ತು ಮತ್ತು ಅಪಾದನೆ ಏನೇ ಇರಲಿ, ದೂರು ನೀಡಿ ವರ್ಷ ಕಳೆದರೂ ಆ ಕುರಿತು ತನಿಖೆ ನಡೆಸದೆ ದೂರುದಾರರನ್ನೆ ಠಾಣೆಗೆ ಕರೆಸಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಅಮಾನವೀಯ, ಮಾನವ ಹಕ್ಕುಗಳ ಉಲ್ಲಂಘನೆ ಎಂಬ ನಿರ್ಣಯಕ್ಕೆ ಬರಲಾಗಿತ್ತು. ಆ ಸಂಧರ್ಭದಲ್ಲಿ ಹಲ್ಲೆಯ ಕುರಿತು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಆ ನಂತರದ ಬೆಳವಣಿಗೆಯಲ್ಲಿ ಹಲ್ಲೆ ನಡೆಸಿದ ಪೋಲಿಸ್ ಅಧಿಕಾರಿಯ ಅಮಾನತು ಮಾಡುವಂತೆ ಒತ್ತಾಯಿಸಿ ರಾಜ್ಯಾದ್ಯಂತ #SuspendKarkalaPSImadhu ಎಂಬ ಹ್ಯಾಶ್​ಟ್ಯಾಗ್‌ ನಡಿಯಲ್ಲಿ ಟ್ವಿಟರ್ ಟ್ರೆಂಡ್ ನಡೆದಿತ್ತು. ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಜನ ಅದರಲ್ಲಿ ಭಾಗವಹಿಸಿದ್ದರು. ಈ ನಡುವೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತಿತರ ಮುಖಂಡರು ಹಲ್ಲೆಯನ್ನು ವಿರೋಧಿಸಿ ಟ್ವೀಟ್ ಮಾಡಿದ್ದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಕೂಡ ಹಲ್ಲೆಯನ್ನು ಖಂಡಿಸಿ ಪತ್ರಿಕೆಗಳಿಗೆ ಹೇಳಿಕೆಯನ್ನು ಬಿಡುಗಡೆ ಮಾಡಿದ್ದರು. ಈ ಬೆಳವಣಿಗೆಯ ನಂತರ ಬಿಜೆಪಿ ಪರ ಫೇಸ್‌ಬುಕ್‌ ಪೇಜ್ ಆದ Post card Kannada ಹಾಗೂ ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ತನ್ನ ಫೇಸ್‌ಬುಕ್‌ ಮತ್ತು ಟ್ವಿಟರ್ ನಲ್ಲಿ ರಾಧಾಕೃಷ್ಣ ಅವರು 2020ರಲ್ಲಿ ನೀಡಿದ ಪೋಲಿಸ್ ದೂರಿನಲ್ಲಿ ಉಲ್ಲೇಖಿಸಿದ ಪೋಸ್ಟ್ ನ ಸ್ಕ್ರೀನ್ ಶಾಟ್ ಹಾಗೂ ಸಿದ್ದರಾಮಯ್ಯ ನವರು ಹಲ್ಲೆಯನ್ನು ಖಂಡಿಸಿ ಮಾಡಿರುವ ಪೋಸ್ಟ್ ಗಳನ್ನು ಕೊಲಾಜ್ ಮಾಡಿ 'ದೇಶದ್ರೋಹಿಗಳಿಗೆ ಸಿದ್ದರಾಮಯ್ಯ ಸಮರ್ಥನೆ' ಎಂಬ ತಲೆಬರಹದಲ್ಲಿ ಪ್ರಕಟಿಸಿದ್ದರು. ಶಾಸಕ ಸುನಿಲ್ ರವರ ಆ ಪೋಸ್ಟ್ ವಿರೋಧಿಸಿ ನೂರಾರು ಜನ ಕಾಮೆಂಟ್ ಮಾಡಿದ್ದರು ಮತ್ತು ಬೆರಳೆಣಿಕೆಯಷ್ಟು ಜನ ಮಾತ್ರವೇ ಶಾಸಕರನ್ನು ಬೆಂಬಲಿಸಿದ್ದರು. ಕೆಲವರು ಶಾಸಕ ಸುನಿಲ್ ರನ್ನು ಆ ವಿವಾದಾತ್ಮಕ ಪೋಸ್ಟ್ ನ ಮೂಲವನ್ನು ಪುರಾವೆ ಸಮೇತ ಸಾಭೀತುಪಡಿಸುವಂತೆ ಮತ್ತು ದೂರಿನಲ್ಲಿ ನಮೂದಿಸಲಾದ ವಿವಾದಾತ್ಮಕ ಪೋಸ್ಟನ್ನು ದೂರುದಾರರ ಹೆಸರಿನ ಸಮೇತ ಪ್ರಕಟಿಸುವುದು ಶಿಕ್ಷಾರ್ಹ ಅಪರಾಧ ಎಂಬ ಅರಿವು ಇದೆಯೇ ಎಂದು ಪ್ರಶ್ನೆ ಮಾಡಿದ್ದರು. *ಘಟನೆಯ ಹಿನ್ನಲೆ:* ರಾಧಾಕೃಷ್ಣ ರವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದು ಬೆಂಗಳೂರಿನಲ್ಲಿ ಸಣ್ಣ ಉದ್ಯೋಗವೊಂದನ್ನು ಮಾಡಿಕೊಂಡಿದ್ದರು. 2020 ಸೆಪ್ಟೆಂಬರ್ 25ರಂದು ರಾಧಾಕೃಷ್ಣ ಅವರು ತನ್ನ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿಸಿ ಭಾರತೀಯ ಸೈನ್ಯದ ವಿರುದ್ಧ ಹಾಗೂ ಪಾಕಿಸ್ತಾನದ ಪರ ಪೋಸ್ಟ್ ಒಂದನ್ನು ಮಾಡಲಾಗಿದೆ ಆ ಕುರಿತು ತನಿಖೆ ನಡೆಸಿ ನನಗೆ ರಕ್ಷಣೆ ನೀಡಬೇಕು ಎಂದು ಕೋರಿ ಬೆಂಗಳೂರು ಉತ್ತರ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ನಂತರ ಆ ದೂರಿನ ವಿವರಗಳು ಗೊಂದಲಕಾರಿಯಾಗಿವೆ, ಮತ್ತಿತರ ಕಾರಣಕ್ಕಾಗಿ ನವೆಂಬರ್ 9 ರಂದು ಮತ್ತೊಮ್ಮೆ ದೂರು ದಾಖಲಿಸಿದ್ದರು. ಆದರೆ ಈ ತನಕವೂ ಸಂಬಂದಿಸಿದ ಪೋಲಿಸರು ತನಿಖೆಯ ಕುರಿತಾಗಿ ಯಾವುದೇ ವಿವರಗಳನ್ನು ದೂರುದಾರರಾದ ರಾಧಾಕೃಷ್ಣ ನಾಯಕ್ ಅವರಿಗೆ ನೀಡಿರಲಿಲ್ಲ ಎನ್ನಲಾಗಿದೆ. ಆದರೆ, ಶುಕ್ರವಾರ ತಾರೀಖು 09 ಜುಲೈ ಏಕಾಏಕಿ ಕಾರ್ಕಳದ ಪೋಲಿಸರು ಠಾಣೆಗೆ ಕರೆಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಹಿರ್ಗಾನ ಮೇಲಿನ ಪೋಲಿಸ್ ದೌರ್ಜನ್ಯ ವಿರೋಧಿಸಿ ನಡೆದ ಪ್ರತಿಭಟನೆ! ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ, ಹಿರಿಯ ಮುಖಂಡ ಕಿಶನ್ ಹೆಗ್ಡೆ ಕೊಳ್ಳೆಬೈಲು ಮಾತನಾಡಿದರು. ಪುರಸಭಾ ಕಾಂಗ್ರೆಸ್ ಸದಸ್ಯ, ಯುವ ಮುಖಂಡ ಶುಭದ್ ರಾವ್ ಮಾತನಾಡಿದರು ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement