Advertisement

ಅಂಬೇಡ್ಕರ್ ಸಂವಿಧಾನದ ವಿರೋಧಿಗಳು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದೇಶದ ಭವಿಷ್ಯಕ್ಕೆ ಬಹು ಅಪಾಯಕಾರಿ.

Advertisement

ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು. ಬಿಜೆಪಿಯ ಕೆಲವು ಸಚಿವರು, ಸಂಸದರು, ಶಾಸಕರೇ ಸಂವಿಧಾನ ವಿರೋಧಿಸುತ್ತಾರೆ. ಸಂವಿಧಾನ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸುತ್ತಾರೆ. ನನ್ನ ದೃಷ್ಟಿಯಲ್ಲಿ ಅಂಥವರು ಜನಪ್ರತಿನಿಧಿಗಳಾಗಲು ಯೋಗ್ಯರೇ ಅಲ್ಲ. ವಿದ್ಯಾವಂತರಾದವರು ವೈಚಾರಿಕತೆ, ಜಾತ್ಯಾತೀತ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ವಿದ್ಯಾವಂತರು ಎನಿಸಿಕೊಂಡವರು ಕನಿಷ್ಠ ಸಂವಿಧಾನದ ಮೂಲ ಆಶಯಗಳನ್ನಾದರೂ ಓದಿಕೊಳ್ಳಬೇಕು. ಮನುವಾದಿಗಳು, ಅಂಬೇಡ್ಕರ್ ಸಂವಿಧಾನದ ವಿರೋಧಿಗಳಾದ ಕಾರಣ ಸಂವಿಧಾನ ಬದಲಾವಣೆ ಆಗಬೇಕು ಎನ್ನುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ನೀಡಬೇಕು ಎಂದು ಸಂವಿಧಾನ ಹೇಳಿದೆ. ಸಾಮಾಜಿಕ ಮತ್ತು ಆರ್ಥಿಕವಾಗಿ ನಮ್ಮಲ್ಲಿ ತಾರತಮ್ಯವಿದೆ. ಮನುಸ್ಮೃತಿ, ಶಾಸ್ತ್ರದಿಂದ ನಿರ್ಮಾಣವಾಗಿರುವ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇನ್ನೂ ಮುಂದುವರಿದಿದೆ. ನಮ್ಮ ದೇಶದ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯನ್ನು ಅಂಬೇಡ್ಕರ್ ಅವರಷ್ಟು ಅರ್ಥ ಮಾಡಿಕೊಂಡವರು ಬೇರೆ ಯಾರೂ ಇಲ್ಲ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಅವರು ಸಂವಿಧಾನ ರಚಿಸುವ ಕೆಲಸ ಮಾಡುವುದರ ಜೊತೆಗೆ ಸಮಸ್ಯೆಗಳಿಗೆ ಪರಿಹಾರ ನೀಡುವ ಪ್ರಯತ್ನ ಮಾಡಿದ್ದರು ಎಂದವರು ಹೇಳಿದರು. ಸಂವಿಧಾನ ಉತ್ತಮವೇ ಅಲ್ಲವೇ ಎಂಬುದು ದೇಶದ ಆಡಳಿತದ ಚುಕ್ಕಾಣಿ ಹಿಡಿದವರಲ್ಲಿ ಅದನ್ನು ಜಾರಿ ಮಾಡುವ ಬದ್ಧತೆ ಇದ್ದಾಗ ಗೊತ್ತಾಗುತ್ತದೆ ಎಂದು ಅಂಬೇಡ್ಕರ್ ಅವರು ಹೇಳಿದ್ದರು. ಜನರಿಗೆ ಮತದಾನದ ಹಕ್ಕಿನ ಜೊತೆಗೆ ಆರ್ಥಿಕ, ಸಾಮಾಜಿಕ ಪ್ರಜಾಪ್ರಭುತ್ವ ಸಹ ಇರಬೇಕಾಗುತ್ತದೆ. ಅವಕಾಶಗಳಿಂದ ವಂಚಿತರಾದ ಜನತೆಗೆ ಸಾಮಾಜಿಕ, ಆರ್ಥಿಕ ಶಕ್ತಿ ತುಂಬದಿದ್ದರೆ ಸಮಾನತೆಯ ಸಮಾಜ ನಿರ್ಮಾಣವಾಗುವುದಿಲ್ಲ. ಮುಂದುವರಿದ ಜಾತಿಯಲ್ಲಿರುವ ಬಡವರಿಗೆ ಮೀಸಲಾತಿಯಲ್ಲ, ಆರ್ಥಿಕ, ಸಾಮಾಜಿಕ ಸಬಲೀಕರಣ ಕಾರ್ಯಕ್ರಮಗಳನ್ನು ರೂಪಿಸಬೇಕು. ಅದನ್ನು ನಾನು ಯಾವತ್ತೂ ವಿರೋಧಿಸಿಲ್ಲ, ವಿರೋಧಿಸುವುದೂ ಇಲ್ಲ ಎಂದು ಸಿದ್ದರಾಮಯ್ಯ ನವರು ವಿವರಿಸಿದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಮಕ್ಕಳಿಗಾಗಿ ಕ್ಷೀರಭಾಗ್ಯ, ಹಸಿದವರಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ಆ ಯೋಜನೆಯಲ್ಲಿ ಎಲ್ಲಾ ಜಾತಿ, ಧರ್ಮ ಹಾಗೂ ವರ್ಗದ ಬಡವರು ಸೇರಿದ್ದರು. ಅದೇ ರೀತಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದು ಮುಂದುವರಿದ ವರ್ಗಗಳ ಬಡವರಲ್ಲಿ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ. ಅಂಬೇಡ್ಕರ್ ಅವರಿಗೆ ಇದ್ದ ದೂರದೃಷ್ಟಿಯೇ ಬೇರೆ. ಅವರೊಂದಿಗೆ ಬೇರೆಯವರನ್ನು ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ಬಸವಣ್ಣನವರಂತೆ ಅಂಬೇಡ್ಕರ್ ಅವರ ವಿಚಾರಧಾರೆ ಇಂದಿಗೂ ಪ್ರಸ್ತುತ. ಅದು ಸರ್ವಕಾಲಿಕ ಮತ್ತು ಸರ್ವ ಜನರಿಗೆ ಅನ್ವಯ. ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ. ಆದರೆ ಹಿಂದೂಗಳಲ್ಲೇ ಇರುವ ಬಡತನ, ತಾರತಮ್ಯ, ಅಸ್ಪೃಶ್ಯತೆ ನಿವಾರಣೆ ಬಗ್ಗೆ ಬಿಜೆಪಿ ನಾಯಕರು ಎಂದಾದರೂ ಮಾತನಾಡುವರೇ? ಅದನ್ನು ಹೇಳಿದರೆ ಸಿದ್ದರಾಮಯ್ಯ ಹಿಂದೂ ವಿರೋಧಿ, ಮೇಲ್ಜಾತಿಯವರ ವಿರೋಧಿ ಎಂದು ಅಪಪ್ರಚಾರ ಮಾಡುತ್ತಾರೆ ಎಂದವರು ಆರೋಪಿಸಿದರು. ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಏಳು ವರ್ಷಗಳಲ್ಲಿ ಒಂದು ದಿನವೂ ವಿಶ್ಲೇಷಣೆ ಮಾಡಿಲ್ಲ. ಜಿ.ಡಿ.ಪಿ ಬೆಳವಣಿಗೆ, ನಿರುದ್ಯೋಗ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು, ಅವರಲ್ಲಿ ಶಕ್ತಿ ತುಂಬುವುದು ಹೇಗೆ ಎಂಬ ಬಗ್ಗೆ ಎಂದಾದರೂ ಚರ್ಚೆ ಆಗಿದೆಯೇ? ಯಾವುದೇ ಪತ್ರಕರ್ತ, ವರದಿಗಾರನ ವೃತ್ತಿ ಬದುಕು ಸಾರ್ಥಕ ಆಗಬೇಕಾದರೆ ಆತನ ಬರವಣಿಗೆ ಜನರನ್ನು ತಲುಪಬೇಕು. ಟಿವಿ ಮಾಧ್ಯಮ ಬಂದ ಬಳಿಕ ಪತ್ರಿಕೆ ಓದುವ ಹವ್ಯಾಸ ಕಡಿಮೆಯಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಟಿವಿಗಳಲ್ಲಿ ಅತಿ ರಂಜಿತ ವರದಿಗಳ ಪ್ರಸಾರವಾಗುವುದು ಇದಕ್ಕೆ ಕಾರಣ. ನಿತ್ಯವೂ ನಾನು ಒಂದು ಗಂಟೆ ಕಾಲ ಪತ್ರಿಕೆಗಳನ್ನು ಓದುತ್ತೇನೆ. ಮಾಧ್ಯಮ ಈಗ ವ್ಯಾಪಾರೀಕರಣಕ್ಕೆ ಒಳಗಾಗಿದೆ. ವಾಸ್ತವವನ್ನು ಬಿಚ್ಚಿಡುವ, ಪ್ರಸ್ತುತ ಸಮಸ್ಯೆಗಳ ಬಗ್ಗೆ ವರದಿ ಮಾಡುವ ಕಾರ್ಯಕ್ಕಿಂತ ಜನರ ಅಭಿರುಚಿಗೆ ಅನುಗುಣವಾದ ಸುದ್ದಿ ಬಿತ್ತರವಾಗುತ್ತಿದೆ. ಸಾಮಾಜಿಕ, ಆರ್ಥಿಕ ಸ್ಥಿತಿ ಮತ್ತು ನಮ್ಮ ಬದುಕನ್ನು ಸರಿಯಾಗಿ ಬಿಂಬಿಸುವ ಕೆಲಸ ಮಾಧ್ಯಮದಿಂದ ಆಗುತ್ತಿಲ್ಲ. ಸಮಾಜದ ಅಂಕುಡೊಂಕು ತಿದ್ದುವ, ಬದಲಾವಣೆ ತರುವ ಕೆಲಸವನ್ನು ಮಾಧ್ಯಮಗಳು ದಿಟ್ಟತನದಿಂದ ಮಾಡಬೇಕು ಎಂದವರು ಹೇಳಿದರು. ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement