Advertisement

ಮೆಡಿಕಲ್ ಕಾಲೇಜ್ PPPಗೆ ಉಡುಪಿ ಮಾದರಿಯಾಗಲಿ: ಹೀಗೊಂದು ಬಹಿರಂಗ ಪತ್ರ

Advertisement

ಬರಹ: ರಾಜಾರಾಂ ತಲ್ಲೂರು (ಲೇಖಕರು ಹಿರಿಯ ಪತ್ರಕರ್ತರು ಹಾಗೂ ಜನಪರ ಚಿಂತಕರು)

 ಜುಲೈ 14 ಬುಧವಾರ ರಾಜ್ಯದ ಆರೋಗ್ಯ ಸಚಿವರು ಉಡುಪಿಯಲ್ಲಿ ಖಾಸಗಿ-ಸಾರ್ವಜನಿಕ ಪಾಲುಗಾರಿಕೆ (PPP)ಮಾದರಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲಿರುವುದಾಗಿ ಪ್ರಕಟಿಸಿದ್ದಾರೆ. ಬಹುದಿನಗಳ ಉಡುಪಿ ಮೆಡಿಕಲ್ ಕಾಲೇಜು ಬೇಡಿಕೆಯನ್ನು ಈಡೇರಿಸಲು ರಾಜ್ಯಸರ್ಕಾರ ಸನ್ನದ್ಧವಾಗಿರುವುದು ಅಭಿನಂದನಾರ್ಹ. ಅದು ಸರಿಯಾದ ಹಾದಿಯಲ್ಲಿ ಸಾಗಿ, ನಿಜ ಅರ್ಥದಲ್ಲಿ ಖಾಸಗಿ-ಸಾರ್ವಜನಿಕ ಪಾಲುಗಾರಿಕೆಯಲ್ಲಿ ಶೀಘ್ರ ನಿರ್ಮಾಣಗೊಳ್ಳಬೇಕು. ಈ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳ ಗಮನವನ್ನು ಸೆಳೆಯಲು ಈ ಬಹಿರಂಗ ಪತ್ರ.

ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಈಗಾಗಲೇ ದೇಶದ ಅತ್ಯಂತ ಪ್ರತಿಷ್ಠಿತ ಖಾಸಗಿ ವೈದ್ಯಕೀಯ ಕಾಲೇಜು ಹೊಂದಿದೆ. ಹಾಗಾಗಿ, ಇಲ್ಲಿ ಅಂತಹದೇ ಮತ್ತೊಂದು ಖಾಸಗಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಪ್ರಸ್ತುತ. ಅದರಿಂದ ಜನಸಾಮಾನ್ಯರಿಗೆ ಸೇವೆಯಲ್ಲಿ, ವೈದ್ಯಕೀಯ ವೆಚ್ಚಗಳಲ್ಲಿ ದೊಡ್ಡ ಬದಲಾವಣೆಯೇನೂ ಸಿಗದು. ಈಗಾಗಲೇ ಗಂಭೀರ ಸ್ವರೂಪ ತಳೆದಿರುವ ದೇಶದ ಸಂಪನ್ಮೂಲಗಳ ಅಸಮತೋಲನವನ್ನು ನೀಗುವ ನಿಟ್ಟಿನಲ್ಲಿ, ಜನಸಾಮಾನ್ಯರು ದೇಶದ ಆರ್ಥಿಕತೆಯ ಮುಖ್ಯವಾಹಿನಿಯಲ್ಲಿ ಒಳಗೊಳ್ಳುವಂತಾಗುವುದಕ್ಕೆ ಸದ್ಯ ಕಾಣುತ್ತಿರುವ ಏಕೈಕ ಪರಿಹಾರ ಸಹಕಾರಿ ರಂಗ. ಸಹಕಾರಿ ರಂಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಉಡುಪಿಯಲ್ಲಿ ಆರಂಭಿಸುವ ಮೂಲಕ ಸಂಪನ್ಮೂಲ ಹಂಚಿಕೆಯಲ್ಲಿ ಹೊಸ ಮಾದರಿಯನ್ನು ರಾಜ್ಯದ ಮುಂದಿಡಬೇಕೆಂದು ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳಲ್ಲಿ ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ. (ಈ ಪತ್ರದ ಪ್ರತಿಯನ್ನು ವೈಯಕ್ತಿಕವಾಗಿಯೂ ಅವರಿಗೆ ತಲುಪಿಸಲಿದ್ದೇನೆ).

ಸಹಕಾರಿ ರಂಗದಲ್ಲಿ ವೈದ್ಯಕೀಯ ಆಸ್ಪತ್ರೆಗಳು, ಕಾಲೇಜುಗಳು ಹೊಸ ಬೆಳವಣಿಗೆಯೇನಲ್ಲ. ದೇಶದಲ್ಲಿ ಈಗಾಗಲೇ 52 ಸಹಕಾರಿ ರಂಗದ ಆಸ್ಪತ್ರೆಗಳು ಯಶಸ್ವಿಯಾಗಿ ಕಾರ್ಯಾಚರಿಸುತ್ತಿವೆ; ನೆರೆಯ ಕೇರಳದಲ್ಲಿ ಹಲವು ಸಹಕಾರಿ ವೈದ್ಯಕೀಯ ಕಾಲೇಜುಗಳು ಯಶಸ್ವಿಯಾಗಿ ಕಾರ್ಯಾಚರಿಸುತ್ತಿವೆ. ದೇಶದ ಸಹಕಾರಿ ರಂಗಕ್ಕೆ ಮಹತ್ತರವಾದ ಕೊಡುಗೆಗಳನ್ನು ನೀಡಿರುವ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆ ಈಗ ಸಹಕಾರಿ ರಂಗದಲ್ಲಿ ಎಲ್ಲ ಪಕ್ಷ ರಾಜಕೀಯಗಳನ್ನು ಬದಿಗಿಟ್ಟು, ನಾಡಿನ ಹಿತಾಸಕ್ತಿಯಿಂದ ಮೆಡಿಕಲ್ ಕಾಲೇಜೊಂದನ್ನು ಸ್ಥಾಪಿಸಲು ಮುಂದಾದರೆ, ತಮ್ಮೆಲ್ಲರ ಹೆಸರುಗಳೂ ಕರಾವಳಿಯಲ್ಲಿ ಅಜರಾಮರವಾಗಲಿವೆ. ಜೊತೆಗೆ, ಯಾರೋ ಹಣವಂತರು, ಕಾರ್ಪೋರೇಟ್ ಶಕ್ತಿಗಳು ಉಡುಪಿ ಜಿಲ್ಲೆಯ ಜನರ ಸುಲಿಗೆ ಅಂಗಡಿ ತೆರೆಯುವುದು ತಪ್ಪಲಿದೆ.

ಸಂತಸದ ಸಂಗತಿ ಎಂದರೆ, ಕೊರೊನಾ ಕಾಲದಲ್ಲಿ ಆರೋಗ್ಯರಂಗಕ್ಕೆ ಸಹಕಾರಿ ಪ್ರವೇಶವನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು “ಆಯುಷ್ಮಾನ್ ಸಹಕಾರ್” ಯೋಜನೆಯನ್ವಯ National Cooperative Development Corporation (NCDC) ಮೂಲಕ ಯೋಜನೆಯ 90% ಹಣಕಾಸನ್ನು ಒದಗಿಸಲು ಸಿದ್ಧ ಎಂದು ಪ್ರಕಟಿಸಿದೆ. ಇದಕ್ಕೆಂದೇ ಕೇಂದ್ರ ಸರ್ಕಾರ 10,000ಕೋಟಿ ರೂ.ಗಳನ್ನು ತೆಗೆದಿರಿಸಿರುವುದಾಗಿ ಕೃಷಿ ಇಲಾಖೆಯ ರಾಜ್ಯ ಸಚಿವರಾಗಿದ್ದ ಪುರುಷೋತ್ತಮ್ ರುಪಾಲಾ ಅವರು ಕಳೆದ ಅಕ್ಟೋಬರ್ ತಿಂಗಳಲ್ಲಿ ಪ್ರಕಟಿಸಿದ್ದರು

►►ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈಗ ಆ ಜಾಗದಲ್ಲಿರುವ ಕೃಷಿ ಸಚಿವರು ಉಡುಪಿಯವರೇ. ಜೊತೆಗೆ, ಸಹಕಾರ ಇಲಾಖೆ ಪ್ರತ್ಯೇಕಗೊಳ್ಳುವ ಹಂತದಲ್ಲಿದೆ. ಹಾಗಾಗಿ, ತಕ್ಷಣ ಉಡುಪಿಯಲ್ಲಿ ಸಹಕಾರಿ ರಂಗದ ಮೂಲಕ ಮೆಡಿಕಲ್ ಕಾಲೇಜು ಸ್ಥಾಪನೆಗೆ ಅಗತ್ಯ ಇರುವ ಪ್ರಯತ್ನಗಳನ್ನು ಕೈಗೊಳ್ಳಲು ಇದು ಸಕಾಲ.

ಉಡುಪಿ ಮೆಡಿಕಲ್ ಕಾಲೇಜಿಗೆ 30 ಎಕರೆ ಜಾಗ ಸಿದ್ಧಪಡಿಸಿಡಲಾಗಿದೆ ಎಂದು ಉಡುಪಿ ಶಾಸಕರು ನಿನ್ನೆ ಹೇಳಿದ್ದಾರೆ.  ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಆಸಕ್ತ ಖಾಸಗಿ ವೈದ್ಯರು ಸುಮಾರು 50-100 ಮಂದಿ, ಹಿರಿಯ ಸಹಕಾರಿಗಳು, ಜನಪ್ರತಿನಿಧಿಗಳು ಮತ್ತು ಅಗತ್ಯ ಬಿದ್ದರೆ ಸಹಕಾರಿ ಹೂಡಿಕೆದಾರರು ಸೇರಿಕೊಂಡು ಆದಷ್ಟು ಶೀಘ್ರವಾಗಿ ಸೂಕ್ತ ಸಹಕಾರಿಯೊಂದನ್ನು ರಚಿಸಿಕೊಂಡು ಅಥವಾ ಹಾಲೀ ಇರುವ ಸಹಕಾರಿಯೊಂದಕ್ಕೆ ಅಗತ್ಯ ಬೈಲಾ ತಿದ್ದುಪಡಿಗಳನ್ನು ಮಾಡಿಕೊಂಡು, ಉಡುಪಿ ಜಿಲ್ಲೆಯಲ್ಲಿ ಸಹಕಾರಿ ರಂಗದ ಮೆಡಿಕಲ್ ಕಾಲೇಜೊಂದನ್ನು ಸ್ಥಾಪಿಸುವ ಕನಸನ್ನು ಸಾಕಾರಗೊಳಿಸಬೇಕು ಮತ್ತು ಅದಕ್ಕೆ ಸಂಬಂಧಿಸಿದಂತೆ ಪ್ರಸ್ತಾಪವನ್ನು ರಾಜ್ಯ ಸರ್ಕಾರದ ಮುಂದಿರಿಸಬೇಕು ಎಂದು ಈ ಮೂಲಕ ಕೈಮುಗಿದು ಕೇಳಿಕೊಳ್ಳುತ್ತೇನೆ.

ಇಂತಹದೊಂದು ವೈದ್ಯಕೀಯ ಕಾಲೇಜು ಉಡುಪಿ ಜಿಲ್ಲೆಯ ಮತ್ತು ಆಸುಪಾಸಿನ ಬಡ, ಮಧ್ಯಮವರ್ಗದ ಜನಸಾಮಾನ್ಯರಿಗೆ ವೈದ್ಯಕೀಯ ಸೇವೆಯನ್ನು ಸುಲಭ ಮತ್ತು ಕೈಗೆಟುಕುವ ದರದಲ್ಲಿ ಒದಗಿಸುವುದು ಸಾಧ್ಯವಾಗಲಿದೆಯಲ್ಲದೇ ಸಾವಿರಾರು ಉದ್ಯೋಗಾವಕಾಶಗಳು ತೆರೆದುಕೊಳ್ಳಲಿವೆ.

ಉಡುಪಿ ಜಿಲ್ಲೆಯ ನಾಗರಿಕರು ತಮ್ಮ ತಮ್ಮ ಕ್ಷೇತ್ರದ ಜನಪ್ರತಿನಿಧಿಗಳಿಗೆ ಈ ನಿಟ್ಟಿನಲ್ಲಿ ಹಕ್ಕೊತ್ತಾಯ ಮಾಡಬೇಕು ಎಂಬ ಪ್ರಾರ್ಥನೆ.

►►ಇದನ್ನೂ ಓದಿ:

►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.

►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?

►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!

►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!

►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!

►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?

►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?

►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.

►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ

►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)

►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?

►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!

►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!

►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?

►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!

►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?

►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.

►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?

►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!

►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.

►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?

►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್

►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ

►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ)

►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ

►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement