Advertisement

ನರೇಂದ್ರ ಮೋದಿ ಅವರನ್ನು ಹೊಗಳಿದ ಶಾಸಕ ಕು.ಕ.ಸೆಲ್ವಂ ವಿರುದ್ಧ ಡಿಎಂಕೆ ಕ್ರಮ..!

Advertisement

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾದ ಮರುದಿನವೇ ಡಿಎಂಕೆ ಶಾಸಕ ಕು.ಕ.ಸೆಲ್ವಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದ್ದು, ಪಕ್ಷದ ಹುದ್ದೆಗಳಿಂದ ಬಿಡುಗಡೆಗೊಳಿಸಲಾಗಿದೆ.

ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಏಕೆ ತೆಗೆಯಬಾರದು ಎಂಬುದಕ್ಕೆ ವಿವರಣೆ ನೀಡುವಂತೆ ಶಾಸಕರಿಗೆ ನೋಟಿಸ್‌ ಕಳುಹಿಸಲಾಗಿದೆ. 'ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಜೊತೆಗೆ ಪಕ್ಷಕ್ಕೆ ಅಪಖ್ಯಾತಿ ಉಂಟುಮಾಡಿರುವುದರಿಂದ ಸೆಲ್ವಂ ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ, ಅವರ ವಿವರಣೆಯನ್ನು ಕೇಳಲಾಗಿದೆ' ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್‌ ತಿಳಿಸಿದ್ದಾರೆ. ಕಳೆದ ಮಂಗಳವಾರ ದೆಹಲಿಗೆ ಭೇಟಿ ನೀಡಿದ್ದ ಶಾಸಕ ಸೆಲ್ವಂ, ಮೋದಿ ನೇತೃತ್ವದ ಆಡಳಿತಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದರು. ಅಲ್ಲದೇ ರಾಮ ಮಂದಿರ ನಿರ್ಮಿಸುವ ಅವರ ಪ್ರಯತ್ನಗಳಿಗಾಗಿ ಶುಭಾಶಯ ಕೋರಿದ್ದರು. ಇದೇ ವೇಳೆ ಅವರು ನಡ್ಡಾ ಅವರನ್ನು ಭೇಟಿ ಮಾಡಿದ್ದರು.

Advertisement
Advertisement
Recent Posts
Advertisement