ಬಿಜೆಪಿ ಆಡಳಿತದ ಉತ್ತರ ಪ್ರದೇಶದಲ್ಲಿ ಹೆಣ್ಣುಮಕ್ಕಳು ಸುರಕ್ಷಿತರಲ್ಲ; ಯೋಗಿ ಆದಿತ್ಯನಾಥರನ್ನು ವಜಾಗೊಳಿಸಿ; ಸಿದ್ದರಾಮಯ್ಯ ಆಗ್ರಹ!
ಬಿಜೆಪಿ ಆಡಳಿತದ ಉತ್ತರ ಪ್ರದೇಶದಲ್ಲಿ ಹೆಣ್ಣುಮಕ್ಕಳು ಸುರಕ್ಷಿತರಲ್ಲ; ಯೋಗಿ ಆದಿತ್ಯನಾಥರನ್ನು ವಜಾಗೊಳಿಸಿ; ಸಿದ್ದರಾಮಯ್ಯ ಆಗ್ರಹ!
Advertisement
ಉತ್ತರ ಪ್ರದೇಶದ ದಲಿತ ಯುವತಿಯ ಅತ್ಯಾಚಾರ ಕೊಲೆ ಮತ್ತು ಮೃತದೇಹವನ್ನು ಪೋಲಿಸರು ತರಾತುರಿಯಿಂದ ಸುಟ್ಟು ಹಾಕಿದ ಪ್ರಕರಣ ಗಮನಕ್ಕೆ ಬರುತ್ತಿದ್ದಂತೆಯೇ ಕಿಡಿಯಾಗಿರುವ ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಯೋಗಿ ಸರ್ಕಾರದ ಆಡಳಿತ ವೈಫಲ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿದ್ದಾರೆ ಮತ್ತು ಈ ಕುರಿತು ಕಾಂಗ್ರೆಸ್ ಪಕ್ಷ ದೇಶಾದ್ಯಂತ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ನೈತಿಕ ಹೊಣೆಯನ್ನು ಸಿಎಂ ಯೋಗಿ ಆದಿತ್ಯನಾಥ್ ಮಾತ್ರವಲ್ಲ, ಅವರನ್ನು ಬೆಂಬಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಸ್ತ ಸಂಘ ಪರಿವಾರ ಕೂಡಾ ಹೊರಬೇಕಾಗುತ್ತದೆ. ತಕ್ಷಣ ಯೋಗಿ ಆದಿತ್ಯನಾಥ್ ಅವರನ್ನು ವಜಾಗೊಳಿಸಿ ಉತ್ತರಪ್ರದೇಶವನ್ನು ರಕ್ಷಿಸಿ. ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ. ಎಂದು ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗ್ರಹಿಸಿದ್ದಾರೆ.
ಪ್ರಕರಣದ ಹಿನ್ನಲೆ: ಸಪ್ಟೆಂಬರ್ 14ರಂದು ನಡೆದ ಈ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿ ದಿಲ್ಲಿಯ ಸಪ್ದರ್‌ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ 19 ವರ್ಷ ಪ್ರಾಯದ ದಲಿತ ಯುವತಿಯ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಲಾಗಿತ್ತು. ಆಕೆ ಪ್ರತಿರೋಧಿಸಿದಾಗ ಭೀಕರವಾಗಿ ಹಲ್ಲೆ ನಡೆಸಿ ಆಕೆಯ ಕತ್ತು ಹಿಸುಕಿ, ನಾಲಗೆ ಕತ್ತರಿಸಲಾಗಿತ್ತು. ಜೀವನ್ಮರಣ ಸ್ಥಿತಿಯಲ್ಲಿ ಪತ್ತೆಯಾದ ಸಂಧರ್ಭದಲ್ಲಿ ಮೊದಲಿಗೆ ಆಕೆಯನ್ನು ಘಟನಾ ಸ್ಥಳಕ್ಕೆ ಹತ್ತಿರವಾಗಿದ್ದ ಅಲಿಗಢ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಗೆ ತಲುಪಿದ ಕಾರಣಕ್ಕಾಗಿ ದಿಲ್ಲಿಯ ಸಪ್ಧರ್ ಜಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಮಂಗಳವಾರ ನಸುಕಿನ ವೇಳೆ ಆಕೆ ಮೃತಪಟ್ಟ ಹಿನ್ನಲೆಯಲ್ಲಿ ಆಕೆಯ ಮೃತದೇಹವನ್ನು ಕುಟುಂಬದ ವಿರೋಧದ ನಡುವೆಯೂ ಪೋಲಿಸರು ತರಾತುರಿಯಿಂದ ಅಂತ್ಯಸಂಸ್ಕಾರ ಮಾಡಿದ್ದರು. ಇದನ್ನು ಅಖಿಲ ಭಾರತ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ ಮತ್ತು ಉ.ಪ್ರದೇಶ ರಾಜ್ಯಾದ್ಯಂತ ಅತ್ಯಾಚಾರಿಗಳ ಮತ್ತು ಪೊಲೀಸರ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿದೆ.
ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ.
ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ಹಾಗೂ E-mail ID: kannadamedia1947@gmail.com ಗೆ ಸಂಪರ್ಕಿಸಿ.
ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com