ಕೇಂದ್ರದ ಮೋದಿ ಸರ್ಕಾರ ಹಾಗೂ ರಾಜ್ಯದ ಯಡಿಯೂರಪ್ಪ ಸರ್ಕಾರ ಭೂ ಸುಧಾರಣಾ (ತಿದ್ದುಪಡಿ) ಕಾಯ್ದೆ ಮತ್ತು ಎಪಿಎಂಸಿ (ತಿದ್ದುಪಡಿ) ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ದೇಶದ ರೈತರನ್ನು ಉಧ್ಯಮಪತಿಗಳ ಜೀತದಾಳುಗಳನ್ನಾಗಿ ಮಾಡಲು ಹೊರಟಿದೆ. 'ರೈತರಿಗೆ ಮರಣ ಶಾಸನವಾಗಲಿರುವ ಈ ರೈತ, ಕಾರ್ಮಿಕ ವಿರೋಧಿ ಮಸೂದೆಗಳ ವಿರುದ್ಧ' ರೈತ ಸಂಘಗಳು ಹಾಗೂ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸೆಪ್ಟೆಂಬರ್ 28ರ ಬಂದ್ ಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ಘೋಷಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಾಳಿನ ಬಂದ್ ನಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು, ಜನಪ್ರತಿನಿಧಿಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದವರು ಹೇಳಿದ್ದಾರೆ.
ನಿಮಗೆ ಈ ಬರಹ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ.
ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ಹಾಗೂ E-mail ID: kannadamedia1947@gmail.com ಗೆ ಸಂಪರ್ಕಿಸಿ.
ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com