ಕೆಪಿಸಿಸಿ ಪ್ಯಾನಲಿಸ್ಟ್ ಆಗಿ ಜನಪರ ಹೋರಾಟಗಾರ ಸುಧೀರ್ ಕುಮಾರ್ ಮುರೊಳ್ಳಿ ನೇಮಕ!
ಕೆಪಿಸಿಸಿ ಪ್ಯಾನಲಿಸ್ಟ್ ಆಗಿ ಜನಪರ ಹೋರಾಟಗಾರ ಸುಧೀರ್ ಕುಮಾರ್ ಮುರೊಳ್ಳಿ ನೇಮಕ!
Advertisement
ಕೆಪಿಸಿಸಿ ಪ್ಯಾನಲಿಸ್ಟ್ ಆಗಿ ಪ್ರಖರ ವಾಗ್ಮಿ, ಪ್ರಗತಿಪರ ಚಿಂತಕ, ಸಮಾಜವಾದಿ ಸುಧೀರ್ ಕುಮಾರ್ ಮುರೊಳ್ಳಿ ಇವರನ್ನು ನೇಮಕ ಮಾಡಿ ಆದೇಶ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರು ಆದೇಶ ಪತ್ರದಲ್ಲಿ 'ಮುರೊಳ್ಳಿಯವರು ಹೊಂದಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ಈ ಹುದ್ದೆಗೆ ನೇಮಕ ಮಾಡಲಾಗಿದೆ' ಎಂದಿದ್ದಾರೆ.
ಕಾಂಗ್ರೆಸ್ ಸಿದ್ದಾಂತ, ಇತಿಹಾಸ ಮತ್ತು ಸಾಧನೆಗಳ ಕುರಿತು ಪಕ್ಷದ ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳಿಗೆ ತರಬೇತಿ ನೀಡುವ ನಿಟ್ಟಿನಲ್ಲಿ ಸ್ಥಾಪಿತಗೊಂಡಿರುವ ಸತೀಶ್ ಜಾರಕಿಹೊಳಿ ಅಧ್ಯಕ್ಷರಾಗಿರುವ 'ಕೆಪಿಸಿಸಿ ನಾಯಕತ್ವ ಮತ್ತು ತರಬೇತಿ ಅಕಾಡೆಮಿ'ಯ ಸದಸ್ಯರಾಗಿ ಇತ್ತೀಚೆಗಷ್ಟೇ ರಾಜ್ಯ ನಾಯಕರಿಂದ ಆಯ್ಕೆಗೊಂಡಿದ್ದ ಮುರೊಳ್ಳಿಯವರು 'ರೈತಸಂಘ' ಮತ್ತು 'ಹಸಿರುಸೇನೆ' ಸಂಘಟನೆಗಳ ಮೂಲಕ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೈತಪರ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಓರ್ವ ರೈತನಾಯಕ.
'ನಮ್ಮಧ್ವನಿ' ಸಂಸ್ಥೆಯ ಮೂಲಕ ರಾಜ್ಯಾದ್ಯಂತ ಸಾಮಾಜಿಕ ಸಾಮರಸ್ಯ ಮೂಡಿಸುವ ಕೆಲಸದಲ್ಲಿ ಅವಿರತವಾಗಿ ತೊಡಗಿಸಿಕೊಂಡಿರುವ ಶ್ರೀಯುತರು ಅದೇ ಸಮಯದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟಕರಾಗಿ ಕೂಡ ಹೆಸರುವಾಸಿಯಾಗಿದ್ದಾರೆ. ಶ್ರೀಯುತರು ವೃತ್ತಿಯಲ್ಲಿ ನ್ಯಾಯವಾದಿಯಾಗಿ ಕೊಪ್ಪ ಹಾಗೂ ಚಿಕ್ಕಮಗಳೂರಿನಲ್ಲಿ ಖ್ಯಾತರಾಗಿದ್ದಾರೆ. ಜೊತೆಗೆ ಕೊಪ್ಪ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಕೂಡ ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವ ನಿಟ್ಟಿನಲ್ಲಿ ಅವಿರತವಾಗಿ ಶ್ರಮಿಸುತ್ತಿದ್ದಾರೆ.
ಉಡುಪಿಯ ವೈಕುಂಠ ಬಾಳಿಗಾ ಲಾ ಕಾಲೇಜಿನಲ್ಲಿ ತನ್ನ ಕಾನೂನು ಪದವಿಯನ್ನು ಮುಗಿಸಿರುವ ಇವರು ಇದೀಗ 'ಸಮೂಹ-ಸಂವಹನ ಹಾಗೂ ಪತ್ರಿಕೋಧ್ಯಮ'ದ ದ್ವಿತೀಯ ವರ್ಷದ ವಿಧ್ಯಾರ್ಥಿಯಾಗಿದ್ದಾರೆ.
ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಓದಿರಿ: www.kannadamedia.com News
ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ಹಾಗೂ E-mail ID: kannadamedia1947@gmail.com ಗೆ ಸಂಪರ್ಕಿಸಿ.