Advertisement

ಯಡಿಯೂರಪ್ಪ ಸರ್ಕಾರ ರಾಜ್ಯವನ್ನು ಸಾಲದ ಹೊರೆಯಲ್ಲಿ ಮುಳುಗಿಸಲು ಹೊರಟಿದೆ!

Advertisement

ಕೇಂದ್ರದಲ್ಲಿ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಆರ್ಥಿಕತೆ ಅಧೋಗತಿ ತಲುಪಿದೆ ಎನ್ನುವುದನ್ನು ಸರ್ಕಾರದ ಅಧಿಕೃತ ದಾಖಲೆಗಳೇ ಹೇಳುತ್ತಿವೆ. ಆರ್ ಬಿ ಐ ಗವರ್ನರ್ ಅವರಿಂದ ಹಿಡಿದು ಆರ್ಥಿಕ ಸಲಹೆಗಾರರ ವರೆಗೆ ದೇಶದ ಪ್ರಖ್ಯಾತ ಆರ್ಥಿಕ ತಜ್ಞರೆಲ್ಲರೂ ದೇಶದ ಆರ್ಥಿಕತೆ ಸಾಗುವ ದಾರಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ : ಸಿದ್ದರಾಮಯ್ಯ. ರಾಜ್ಯದ ವಿತ್ತೀಯ ಕೊರತೆ ನಮ್ಮ ಆಂತರಿಕ ಉತ್ಪನ್ನದ(GSDP) ಶೇಕಡಾ ಮೂರನ್ನು ಮೀರಬಾರದು ಎಂದು ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ ಹೇಳಿದೆ. ಯಡಿಯೂರಪ್ಪ ಸರ್ಕಾರ ಈ ಮಿತಿಯನ್ನು ಶೇಕಡಾ 5ಕ್ಕೆ ಹೆಚ್ಚಿಸಲು ಹೊರಟಿರುವುದು ರಾಜ್ಯದ ಆರ್ಥಿಕತೆಗೆ ಮಾರಣಾಂತಿಕ ಹೊಡೆತ. ಮುಖ್ಯಮಂತ್ರಿಯಾಗಿ ನಾನು ಮಂಡಿಸಿದ್ದ ಆರು ಆಯವ್ಯಯಪತ್ರಗಳಲ್ಲಿ ವಿತ್ತೀಯಕೊರತೆ ಎಂದೂ ಶೇಕಡಾ ಮೂರರ ಮಿತಿಯನ್ನು ಮೀರಿರಲಿಲ್ಲ. ನನ್ನ ಕೊನೆಯ ಬಜೆಟ್ ನಲ್ಲಿ ಈ ಮಿತಿ ಶೇಕಡಾ 2.49ರಷ್ಟಿತ್ತು. ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳಲು ಇದು ಅನಿವಾರ್ಯ. ಯಡಿಯೂರಪ್ಪ ಸರ್ಕಾರ ರಾಜ್ಯವನ್ನು ಆರ್ಥಿಕ ದಿವಾಳಿಗೆ ತಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ವಿತ್ತೀಯ ಹೊಣೆಗಾರಿಕೆ ಅಧಿನಿಯಮದ ಪ್ರಕಾರ ನಮ್ಮ ಸಾಲ 25%ರ ಮಿತಿಯಲ್ಲಿರಬೇಕಾಗುತ್ತದೆ.. ನಾನೆಂದೂ ಈ ಮಿತಿಯನ್ನು ಮೀರಿರಲಿಲ್ಲ. ಆದರೆ ಯಡಿಯೂರಪ್ಪ ಸರ್ಕಾರ ರೂ.53000 ಕೋಟಿ ಸಾಲ ಮಾಡಿದೆ, ಈಗ ಹೆಚ್ಚುವರಿಯಾಗಿ ರೂ.33,000 ಕೋಟಿ ಸಾಲ ಎತ್ತಲು ಹೊರಟಿದೆ. ಈ ಒಟ್ಟು ಸಾಲ ಖಂಡಿತ 25%ರ ಮಿತಿಯನ್ನು ಮೀರಲಿದೆ.2020-21ರ ಆಯವ್ಯಯದಲ್ಲಿ ನಮ್ಮ ಒಟ್ಟು ಆಂತರಿಕ ಉತ್ಪನ್ನ 18 ಲಕ್ಷ ಕೋಟಿ ಎಂದು ಅಂದಾಜು ಮಾಡಲಾಗಿದೆ. ಆದರೆ ಕೊರೊನಾ ಹಾವಳಿ ಮತ್ತು ರಾಜ್ಯ ಸರ್ಕಾರದ ಆರ್ಥಿಕ ಎಡವಟ್ಟುಗಳ ಕಾರಣದಿಂದ ಅದು 12ಲಕ್ಷ ಕೋಟಿಗಿಂತಲೂ ಕೆಳಗಿಳಿಯಬಹುದು. ಆಗ ನಮ್ಮ ಸಾಲದ ಸಾಮರ್ಥ್ಯ ಕೂಡಾ ಕಡಿಮೆಯಾಗಲಿದೆ ಎಂದಿದ್ದಾರೆ. ಸಂವಿಧಾನದ 101ನೇ ತಿದ್ದುಪಡಿ ಮೂಲಕ ಕಾರ್ಯರೂಪಕ್ಕೆ ಬಂದಿರುವ ಜಿಎಸ್ ಟಿ ಕಾಯ್ದೆಯ ಸೆಕ್ಷನ್ 18ರ ಪ್ರಕಾರ 5 ವರ್ಷಗಳ ಕಾಲ ಜಿಎಸ್ ಟಿ ಪರಿಹಾರ ನೀಡಬೇಕಾಗಿರುವುದು ಸಂವಿಧಾನಾತ್ಮಕ ಕರ್ತವ್ಯ. ಈ ಪರಿಹಾರದ ನಿರಾಕರಣೆ ನಮ್ಮ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯಾಗಿದೆ. 2020-2021ರ ಆರ್ಥಿಕ ವರ್ಷದ ಅಂತ್ಯಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಜಿಎಸ್ ಟಿ ಪರಿಹಾರವಾಗಿ ರೂ.30,000 ಕೋಟಿ ನೀಡಬೇಕಾಗುತ್ತದೆ. ಕೇಂದ್ರ ಸರ್ಕಾರದ ಅನ್ಯಾಯವನ್ನು ಪ್ರತಿಭಟಿಸಲಿಕ್ಕಾಗದ ಮುಖ್ಯಮಂತ್ರಿಗಳು ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್.ಬಿ.ಐ ನಿಂದ ಸಾಲ ಪಡೆಯಲು ಹೊರಟು ರಾಜ್ಯವನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ ಎಂದವರು ದೂರಿದರು. ರಾಜ್ಯದ ಹಿತದೃಷ್ಟಿಯಿಂದ ವಿತ್ತೀಯ ಕೊರತೆಯ ಮಿತಿಯನ್ನು 3% ಇಂದ 5% ಗೆ ಏರಿಕೆ ಮಾಡುವುದು ಸರಿಯಲ್ಲ. ಹೆಚ್ಚೆಂದರೆ 3.5 ಕ್ಕೆ ಏರಿಕೆ ಮಾಡಿ, ಮುಂದಿನ ದಿನಗಳಲ್ಲಿ ಮತ್ತೆ ಇಳಿಕೆ ಮಾಡಬೇಕು. 5% ಗೆ ಏರಿಕೆ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ. ಈಗಿನ ಆರ್ಥಿಕ ಸಂಕಷ್ಟದಿಂದ ಪಾರಾಗಬೇಕಾದರೆ ರಾಜ್ಯ ಸರ್ಕಾರ ಬದ್ಧತಾ ವೆಚ್ಚಕ್ಕೆ ಕಡಿವಾಣ ಹಾಕಬೇಕಾಗಿದೆ. ದುಂದು ವೆಚ್ಚಗಳನ್ನು ನಿಲ್ಲಿಸಬೇಕು, ಅನಗತ್ಯ ಹುದ್ದೆಗಳನ್ನು ರದ್ದುಮಾಡಬೇಕು, ತೆರಿಗೆಯೇತರ ಆದಾಯವನ್ನು ಹೆಚ್ಚಿಸಬೇಕು. ಆರ್ಥಿಕ ಶಿಸ್ತನ್ನು ಪಾಲಿಸಬೇಕು ಎಂದರು. 14ನೇ ಹಣಕಾಸು ಆಯೋಗದಲ್ಲಿ 4.71% ಇದ್ದ ರಾಜ್ಯದ ಪಾಲನ್ನು 15ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಸಲಾಗಿದೆ. ಇದರಿಂದ ರಾಜ್ಯಕ್ಕೆ ರೂ.12 ಸಾವಿರ ಕೋಟಿ ನಷ್ಟವಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಆಯೋಗ ಶಿಫಾರಸು ಮಾಡಿದ್ದ ರೂ.5495 ಕೋಟಿ ವಿಶೇಷ ಅನುದಾನವನ್ನು ಹಣಕಾಸು ಸಚಿವೆ ತಿರಸ್ಕರಿಸಿ ರಾಜ್ಯಕ್ಕೆ ದ್ರೋಹ ಬಗೆದಿದ್ದಾರೆ. ಈ ನಿರ್ಮಲಾ ಸೀತಾರಾಮನ್ ನಮ್ಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋದವರು. ಅವರಿಗೆ ರಾಜ್ಯದ ಹಿತ ಬೇಕಿಲ್ಲವೇ? ಮುಖ್ಯಮಂತ್ರಿ ಯಡಿಯೂರಪ್ಪನವರೆ, ನೀವ್ಯಾಕೆ ಇದನ್ನೆಲ್ಲ ಸಹಿಸಿಕೊಂಡು ಕೂತಿದ್ದೀರಿ. ಇದರಲ್ಲಿ ನಾವು ರಾಜಕೀಯ ಮಾಡುತ್ತಿಲ್ಲ, ನೀವೂ ಮಾಡಬೇಡಿ. ರಾಜ್ಯದ ಹಿತ ನಮಗೆ ಮುಖ್ಯ ಎಂದವರು ಕರೆ ನೀಡಿದರು. ರಾಜ್ಯದ ಹಿತರಕ್ಷಣೆಯ ವಿಷಯದಲ್ಲಿ ರಾಜಕೀಯವನ್ನು ಎಳೆದು ತರಬಾರದು. ನಿಮ್ಮ ಪಕ್ಷದ ಸಂಸದರು ದೆಹಲಿಯಲ್ಲಿ ಬಾಯಿ ಬಿಡುತ್ತಿಲ್ಲ. ಸರ್ವಪಕ್ಷಗಳ ನಿಯೋಗವನ್ನಾದರೂ ಕರೆದುಕೊಂಡು ಹೋದರೆ ನಾವೇ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ತಿಳಿಸುತ್ತೇವೆ. ಇದರಲ್ಲಿ ರಾಜಕೀಯ ಬೇಡ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಆರ್ಥಿಕತೆ ಅಧೋಗತಿ ತಲುಪಿದೆ ಎನ್ನುವುದನ್ನು ಸರ್ಕಾರದ ಅಧಿಕೃತ ದಾಖಲೆಗಳೇ ಹೇಳುತ್ತಿವೆ. ಆರ್ ಬಿ ಐ ಗವರ್ನರ್ ಅವರಿಂದ ಹಿಡಿದು ಆರ್ಥಿಕ ಸಲಹೆಗಾರರ ವರೆಗೆ ದೇಶದ ಪ್ರಖ್ಯಾತ ಆರ್ಥಿಕ ತಜ್ಞರೆಲ್ಲರೂ ದೇಶದ ಆರ್ಥಿಕತೆ ಸಾಗುವ ದಾರಿ ಬಗ್ಗೆ ಆತಂಕ ಪಟ್ಟು ಎಚ್ಚರಿಸಿದ್ದಾರೆ ಎಂದವರು ಹೇಳಿದ್ದಾರೆ. ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಓದಿರಿ: www.kannadamedia.com ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ಹಾಗೂ E-mail ID: kannadamedia1947@gmail.com ಗೆ ಸಂಪರ್ಕಿಸಿ.

Advertisement
Advertisement
Recent Posts
Advertisement