ಆರೋಪಿಗಳಿಗೆ ಸಹಕರಿಸಿದ ಮತ್ತು ಮೃತದೇಹವನ್ನು ಸಂತ್ರಸ್ತರಿಗೆ ಹಸ್ತಾಂತರಿಸದೆ ರಾತ್ರೋರಾತ್ರಿ ಸುಟ್ಟು ಹಾಕಿರುವಂತಹ ಗಂಭೀರವಾದ ಆರೋಪ ಎದುರಿಸುತ್ತಿರುವ ಮತ್ತು ಅತ್ಯಾಚಾರಕ್ಕೊಳಗಾದ ದಲಿತ ಯುವತಿಯ ಕುಟುಂಬದವರೊಂದಿಗೆ ಅಮಾನವೀಯವಾಗಿ ನಡೆದುಕೊಂಡಿರುವ ಆರೋಪಿತ ಜಿಲ್ಲಾಧಿಕಾರಿಯೊಬ್ಬರು ಜಿಲ್ಲೆಯಲ್ಲೆ ಇದ್ದಾಗ, ನಿಷ್ಪಕ್ಷಪಾತವಾದ ಪ್ರಾಮಾಣಿಕವಾದ ತನಿಖೆ ಹೇಗೆ ಸಾಧ್ಯವಾಗುತ್ತದೆ? ಅಂತಹ ಅಧಿಕಾರಿಯಿಂದ ನ್ಯಾಯದ ನಿರೀಕ್ಷೆ ಶುದ್ದ ಮೂರ್ಖತನ! ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಯುವತಿಯ ಕುಟುಂಬದವರಿಗೆ ಹಾಥ್ರಸ್ ಜಿಲ್ಲಾಧಿಕಾರಿ ಬೆದರಿಕೆ ಹಾಕುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದ್ದರೂ, ರಾಜ್ಯದ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ಮೌನವಾಗಿರುವುದರ ಹಿಂದಿನ ರಹಸ್ಯವಾದರೂ ಏನು? ನಿಮಗೆ ಪ್ರಾಮಾಣಿಕತೆ ಇದ್ದರೆ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಿ ಮತ್ತು ಇಡೀ ಪ್ರಕರಣದಲ್ಲಿ ಅವರ ಪಾತ್ರವಿರುವ ಕುರಿತಾಗಿ ತನಿಖೆ ನಡೆಸಿ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಉತ್ತರ ಪ್ರದೇಶದ ಉಸ್ತುವಾರಿ ಪ್ರಿಯಾಂಕಾ ವಾದ್ರಾ ಮೋದಿ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.