ಶಿರಾ ಉಪಚುನಾವಣೆ: ಪಕ್ಷ ತೊರೆದು ತಂಡೋಪತಂಡವಾಗಿ ಕಾಂಗ್ರೆಸ್ ಸೇರುತ್ತಿರುವ ಜೆಡಿಎಸ್, ಬಿಜೆಪಿ ನಾಯಕರು

ಬಿಜೆಪಿ ನಗರ ಘಟಕದ ಮಾಜಿ ಅಧ್ಯಕ್ಷರಾದ ಪಡಿ ರಮೇಶ್ ಅವರು ಮಾಜಿ ಸಚಿವ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರರವರ ಪುತ್ರ ಸಂತೋಷ್ ಜಯಚಂದ್ರ ಅವರ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಶಿರಾ ತಾಲೂಕಿನ ಗುಳಿಗೇನಹಳ್ಳಿ ಗ್ರಾಮದ 30ಕ್ಕೂ ಅಧಿಕ ಜೆಡಿಎಸ್ ಮುಖಂಡರು ಪಕ್ಷ ತೊರೆದು ಟಿ.ಬಿ ಜಯಚಂದ್ರ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಂದು ಸೇರ್ಪಡೆಯಾದರು. ರತ್ನಸಂದ್ರ ಗ್ರಾಮಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಯರಗುಂಟೆ ರಾಜಕುಮಾರ್ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಜೆಡಿಎಸ್ ತೊರೆದು ಟಿ ಬಿ ಜಯಚಂದ್ರ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು ಈ ಸಂದರ್ಭದಲ್ಲಿ ಕಲ್ಕೆರೆ ರವಿಕುಮಾರ್ ಹಾಗೂ ಅರೇಹಳ್ಳಿ ರಮೇಶ, ದೊಡ್ಡಗುಳ ರಾಮಚಂದ್ರಪ್ಪ ಮುಂತಾದ ಮುಖಂಡರು ಇದ್ದರು. ►► ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►► ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com