Advertisement

ಅಧಿಕಾರದಲ್ಲಿ ಇದ್ದರೂ, ಇಲ್ಲದಿದ್ದರೂ ಜನರ ಸಮಸ್ಯೆಗಳ ಪರಿಹಾರಕ್ಕೆ ನಾನು ಸದಾ ಬದ್ಧ: ಗೋಪಾಲ ಪೂಜಾರಿ

Advertisement

ವರದಿ: ವಿನಾಯಕ ಆಚಾರ್ಯ, ಕೊಲ್ಲೂರು. ಬೈಂದೂರು ವಿಧಾನಸಭಾ ಕ್ಷೇತ್ರದ ಮತದಾರರು ನನ್ನನ್ನು ನಾಲ್ಕು ಬಾರಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದರು. ಹಾಗೆ ಆಯ್ಕೆ ಮಾಡುದ್ದರ ಫಲವಾಗಿ ನಾನು ಈ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿ ಪಡಿಸಲು ಸಾಧ್ಯವಾಯಿತು. ನನ್ನ ರಾಜಕೀಯ ಜೀವನದುದ್ದಕ್ಕೂ ಈ ಕ್ಷೇತ್ರದ ಮತದಾರರ ಋಣ ನನ್ನ ಮೇಲಿದೆ. ಆ ಕಾರಣಕ್ಕಾಗಿ ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಕ್ಷೇತ್ರದ ಮತದಾರರ ಸಮಸ್ಯೆಗಳ ಪರಿಹಾರಕ್ಕೆ ಸದಾ ಬದ್ಧನಾಗಿದ್ದ ಎಂದು ಬೈಂದೂರು ಮಾಜಿ ಶಾಸಕ ಗೋಪಾಲ ಪೂಜಾರಿ ಹೇಳಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದ ಕೊಲ್ಲೂರು ಗ್ರಾಮೀಣ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಅವರ ಶಾಸಕತ್ವದ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಜನರಿಗೆ ಮನವರಿಕೆಯಾಗುವಂತೆ ಕಾರ್ಯಕರ್ತರು ತಿಳಿಸಬೇಕು ಮಾಜಿ ಶಾಸಕರು ತನ್ನ ಅವಧಿಯಲ್ಲಿ ಮಾಡಿದ್ದ ಅಭಿವೃದ್ಧಿ ಕಾರ್ಯಗಳ ವಿವರಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಿ ಪಕ್ಷ ಸಂಘಟನೆಗೆ ಸಹಕರಿಸುವಂತೆ ಮನವಿ ಮಾಡಿದರು. ಇದೇ ಸಂಧರ್ಭದಲ್ಲಿ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ರಾಜು ಪೂಜಾರಿ ಹಾಗೂ ಟಿಎಪಿಸಿಎಂಎಸ್ ನಿರ್ದೇಶಕರಾದ ಪ್ರಭಾಕರ್ ಶೆಟ್ಟಿಯವರನ್ನು ಜಿಲ್ಲಾ ಕಾಂಗ್ರೆಸ್ ಪರವಾಗಿ ಗೌರವಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ ಗೋಪಾಲ್ ಪೂಜಾರಿ , ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎಸ್ ರಾಜು ಪೂಜಾರಿ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮದನ್ ಕುಮಾರ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಎಲ್ ಜೋಸ್ , ಬೈಂದೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಾಗರಾಜ ಗಾಣಿಗ, ಜಿಲ್ಲಾ ಪಂಚಾಯತ್ ಸದಸ್ಯರಾದ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯರಾದ ಜಗದೀಶ್ ದೇವಾಡಿಗ, ಕೊಲ್ಲೂರು ತಾಲೂಕು ಪಂಚಾಯತ್ ಸದಸ್ಯರಾದ ಗ್ರೀಷ್ಮಾ ಗಿರಿಧರ್ ಭಿಢೆ , ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಗಾಣಿಗ ಕೊಲ್ಲೂರು , ಯುವ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಪೂಜಾರಿ, ಪ.ಪಂ ಘಟಕದ ಅಧ್ಯಕ್ಷರಾದ ಮಾಲಿಂಗ ನಾಯ್ಕ , ತಾಲೂಕು ಪಂಚಾಯತ್ ಸದಸ್ಯರಾದ ವಿಜಯಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ಉದಯ್ ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸನತ್ ಬಳೆಗಾರ, ಕಾಂಗ್ರೆಸ್ ಮುಖಂಡರಾದ ನರಸಿಂಹ ಹಳಗೇರಿ ಹಾಗೂ ಇತರರು ಉಪಸ್ಥಿತರಿದ್ದರು. ________________________________ ►►ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►►ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

Advertisement
Advertisement
Recent Posts
Advertisement