ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಅದ್ಯಕ್ಷೆ ಜಾನಕಿ ಬಿಲ್ಲವ ಕಾಂಗ್ರೆಸ್ ಸೇರ್ಪಡೆ.
ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಅದ್ಯಕ್ಷೆ ಜಾನಕಿ ಬಿಲ್ಲವ ಕಾಂಗ್ರೆಸ್ ಸೇರ್ಪಡೆ.
Advertisement
'ಪಂಚಾಯತ್ ಅಧ್ಯಕ್ಷೆಯಾಗಿದ್ದ ವೇಳೆ ಕಾನೂನು ಬಾಹಿರವಾದ ಕಾಮಗಾರಿಗಳನ್ನು ವಿರೋಧಿಸಿದ ಕಾರಣಕ್ಕಾಗಿ ಮತ್ತು ಜನವಿರೋಧಿ ಯಾಗಿರುವ ರೆಸಾರ್ಟ್ ಗೆ ಅನುಮೋದನೆ ನೀಡುವ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿದ ಕಾರಣಕ್ಕಾಗಿ ನನ್ನನ್ನು ಬಿಜೆಪಿಯಲ್ಲಿ ಮೂಲೆಗುಂಪು ಮಾಡುವ ಪ್ರಯತ್ನಗಳು ನಡೆದವು. ಆ ಕಾರಣಕ್ಕಾಗಿ ಬೇಸತ್ತು ಜನಪರ ಸಿದ್ದಾಂತ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಳ್ಳುತ್ತಿದ್ದೇನೆ' :ಜಾನಕಿ ಬಿಲ್ಲವ
1995ರಿಂದ ಒಟ್ಟು ನಾಲ್ಕು ಅವಧಿಗೆ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿ ಸೇವೆಸಲ್ಲಿಸಿದ್ದ, ಕೋಟೇಶ್ವರ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಜಾನಕಿ ಬಿಲ್ಲವರವರು ಮತ್ತು ಮೂವತ್ತಕ್ಕೂ ಹೆಚ್ಚು ಸ್ಥಳೀಯ ಯುವ ಮುಖಂಡರುಗಳು ಇಂದು ನಡೆದ ದಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಿಧ್ಯುಕ್ತವಾಗಿ ಸೇರ್ಪಡೆಗೊಂಡರು. ಜಾನಕಿ ಬಿಲ್ಲವರವರು 2ಅವಧಿಗೆ ತಾಲೂಕು ಪಂಚಾಯತ್ ಸದಸ್ಯರಾಗಿ, ಎರಡು ಅವಧಿಗೆ ಮೀನುಗಾರರ ಸಹಕಾರಿ ಸಂಘದ ಸದಸ್ಯೆಯಾಗಿ, ಎರಡು ಅವಧಿಗೆ ಗ್ರಾಮ ಪಂಚಾಯತಿ ಸದಸ್ಯರಾಗಿ, ಒಂದು ಅವಧಿಗೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜನಪರ ಸೇವೆ ಸಲ್ಲಿಸಿ, ಸ್ಥಳೀಯವಾಗಿ ಜನಪ್ರಿಯರಾಗಿದ್ದಾರೆ.
ಸೇರ್ಪಡೆ ಕಾರ್ಯಕ್ರಮದ ನಂತರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಜಾನಕಿ ಬಿಲ್ಲವರವರು 'ಪಂಚಾಯತ್ ಅಧ್ಯಕ್ಷೆಯಾಗಿದ್ದ ವೇಳೆ ಕಾನೂನುಬಾಹಿರ ಕಾಮಗಾರಿಗಳನ್ನು ವಿರೋಧಿಸಿದ ಕಾರಣಕ್ಕಾಗಿ ಮತ್ತು ಜನವಿರೋಧಿ ಯಾಗಿರುವ ರೆಸಾರ್ಟ್ ಗೆ ಅನುಮೋದನೆ ನೀಡುವ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿದ ಕಾರಣಕ್ಕಾಗಿ ನನ್ನನ್ನು ಬಿಜೆಪಿಯಲ್ಲಿ ಮೂಲೆಗುಂಪು ಮಾಡುವ ಪ್ರಯತ್ನಗಳು ನಡೆದವು. ಆ ಕಾರಣಕ್ಕಾಗಿ ಬೇಸತ್ತು ಜನಪರ ಸಿದ್ದಾಂತ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಳ್ಳುತ್ತಿದ್ದೇನೆ' ಎಂದವರು ತಿಳಿಸಿದರು.
ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಮತ್ತು ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿಯವರು ಕಾಂಗ್ರೆಸ್ ಪಕ್ಷದ ಬಾವುಟವನ್ನು ಜಾನಕಿ ಬಿಲ್ಲವರವರಿಗೆ ಹಸ್ತಾಂತರ ಮಾಡುವ ಮೂಲಕ ಮತ್ತು ಕಾಂಗ್ರೆಸ್ ಮುಖಂಡ ಬೀಜಾಡಿ ಅಶೋಕ್ ಪೂಜಾರಿಯವರು ಕಾಂಗ್ರೆಸ್ ಶಾಲನ್ನು ತೊಡಿಸುವ ಮೂಲಕ ವಿದ್ಯುಕ್ತವಾಗಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡರು.
ಇದೇ ಸಂದರ್ಭದಲ್ಲಿ ಜಾನಕಿ ಬಿಲ್ಲವ ರವರ ಜೊತೆಯಲ್ಲಿ ಯುವ ಮುಖಂಡರುಗಳಾದ ರೂಪಾ ಪೂಜಾರಿ, ಪ್ರೀತಿ ಪೂಜಾರಿ, ಆನಂದ ಪೂಜಾರಿ, ಮೇಘರಾಜ ಪೂಜಾರಿ, ರಾಜೇಶ್ ಪೂಜಾರಿ, ರೋಹಿತ್ ಪೂಜಾರಿ, ರಾಘವೇಂದ್ರ ಪೂಜಾರಿ, ಸೋಮ ಹಳೆಅಳಿವೆ, ಕರುಣಾಕರ ಪೂಜಾರಿ, ಸುರೇಶ ಪೂಜಾರಿ, ಮಹೇಶ್ ಪೂಜಾರಿ, ಸಂಜಯ ಪೂಜಾರಿ, ರಂಜಿತ್ ಪೂಜಾರಿ ಮಮತಾದವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸೇರ್ಪಡೆಯ ಸಂಪೂರ್ಣ ನೇತೃತ್ವವನ್ನು ಕಾಂಗ್ರೆಸ್ ಹಿರಿಯ ಮುಖಂಡರಾದ ಕೋಡಿ ಶಂಕರ್ ಪೂಜಾರಿ, ಬೀಜಾಡಿ ಅಶೋಕ್ ಪೂಜಾರಿ ಮತ್ತು ಯುವ ಮುಖಂಡ ಕೋಡಿ ಸುನಿಲ್ ಪೂಜಾರಿಯವರು ವಹಿಸಿದ್ದರು.
ಕಾಂಗ್ರೆಸ್ ನಾಯಕರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಹರಿಪ್ರಸಾದ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ವಿಕಾಸ್ ಹೆಗ್ಡೆ, ವಿನೋದ್ ಕ್ರಾಸ್ಟೋ, ಕೋಡಿ ಸುನಿಲ್ ಪೂಜಾರಿ ಮುಂತಾದವರು ಮಾತನಾಡಿ ಜಾನಕಿ ಬಿಲ್ಲವರವರನ್ನು ಪಕ್ಷಕ್ಕೆ ಸ್ವಾಗತಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಮುಖಂಡರಾದ ಅಶೋಕ್ ಸುವರ್ಣ, ಕೇಶವ ಭಟ್, ವಿಜಯದರ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
____________________________________________
►►ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►►ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com