ರೈತವಿರೋಧಿ ಕರಾಳ ಕೃಷಿ ಕಾಯ್ದೆಗಳ ವಿರುದ್ಧ ಜನವರಿ 20ರಂದು ರಾಜಭವನ ಚಲೋ: ಡಿ.ಕೆ ಶಿವಕುಮಾರ್
ರೈತವಿರೋಧಿ ಕರಾಳ ಕೃಷಿ ಕಾಯ್ದೆಗಳ ವಿರುದ್ಧ ಜನವರಿ 20ರಂದು ರಾಜಭವನ ಚಲೋ: ಡಿ.ಕೆ ಶಿವಕುಮಾರ್
Advertisement
'ರೈತವಿರೋಧಿ ಕರಾಳ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಿರತ ರೈತರಿಗೆ ಬೆಂಬಲ ನೀಡಿ, ಶಕ್ತಿ ತುಂಬಲು ಜನವರಿ 20ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
'ಪ್ರತಿಭಟನಾ ನಿರತ ಒಂದು ತಂಡ ಸ್ವಾತಂತ್ರ್ಯ ಉದ್ಯಾನವನದಿಂದ ಹಾಗೂ ಮತ್ತೊಂದು ತಂಡ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಮೂಲಕ ರಾಜಭವನಕ್ಕೆ ತೆರಳಲಿದೆ. ರಾಜಭವನ ಚಲೋದಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ರೈತ ಸಮುದಾಯಗಳ ಮುಖಂಡರು, ರೈತರು ಪಾಲ್ಗೊಳ್ಳಲಿದ್ದಾರೆ. ರಾಜಭವನಕ್ಕೆ ತೆರಳಿ, ರೈತ ವಿರೋಧಿ ಕರಾಳ ಕೃಷಿ ಕಾಯ್ದೆಗಳನ್ನು ರದ್ದು ಮಾಡುವಂತೆ ಆಗ್ರಹಿಸಿ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದ್ದೇವೆ' ಎಂದವರು ತಿಳಿಸಿದ್ದಾರೆ.
__________________________________
►►ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►►ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com