Advertisement

ಬೆಳಗಾವಿ ಲೋಕಸಭಾ ಉಪಚುನಾವಣೆ: ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

Advertisement

ಬೆಳಗಾವಿ ಲೋಕಸಭಾ ಉಪಚುನಾವಣೆ- ಸತೀಶ್ ಜಾರಕಿಹೊಳಿಯಂತಹ ಸೈದ್ಧಾಂತಿಕ ಬದ್ಧತೆಯ ಸರಳ ಸಜ್ಜನ ಸಂಸದ ಸಂಸತ್ತಿನಲ್ಲಿ ಇರಬೇಕು. ಬೆಳಗಾವಿ ಉಪ ಚುನಾವಣೆಗೆ ಒಮ್ಮತದ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಿದ್ದೇವೆ. ಸೇವಾ ಮನೋಭಾವ, ಎಲ್ಲ ವರ್ಗಗಳ ಬಗ್ಗೆ ಅಪಾರ ಕಾಳಜಿ ಇರುವ ಸೌಮ್ಯ ಸ್ವಭಾವದ ಸಜ್ಜನ ಅಭ್ಯರ್ಥಿಯನ್ನ ಕಣಕ್ಕಿಳಿಸಿದ್ದೇವೆ. ಬೆಳಗಾವಿಯ ಮತದಾರರು ಅವರನ್ನು ಆಶೀರ್ವದಿಸಿ ಸಂಸತ್ತಿಗೆ ಕಳುಹಿಸಿಕೊಡಬೇಕೆಂದು ಮನವಿ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದಿಂದ 25 ಮಂದಿ ಬಿಜೆಪಿ ಸಂಸದರಿದ್ದರೂ, ಒಂದು ದಿನವೂ ರಾಜ್ಯದ ಪರವಾಗಿ ಅವರು ಧ್ವನಿ ಎತ್ತಲಿಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನವನ್ನೂ ಕೇಳುತ್ತಿಲ್ಲ.‌ ಅವರಿಂದ ಯಾವುದೇ ‌ಪ್ರಯೋಜನ ಆಗುತ್ತಿಲ್ಲ. ರಾಜ್ಯದ ಜನರ ಪ್ರತಿಧ್ವನಿಯಾಗಿ ಸಂಸತ್ತಿನಲ್ಲಿ ರಾಜ್ಯವನ್ನು ಪ್ರತಿನಿಧಿಸಲು ಸತೀಶ್ ಜಾರಕಿಹೊಳಿ ಅವರನ್ನು ಗೆಲ್ಲಿಸಿ ಕಳುಹಿಸೋಣ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ವಿಡಿಯೋ ನೋಡಿ: ಕನ್ನಡ ಮೀಡಿಯಾ ಯೂಟ್ಯೂಬ್ ಚಾನೆಲ್ subscribe ಮಾಡಿ. ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಯವರು ಇಂದು ನಾಮಪತ್ರ ಸಲ್ಲಿಸಿದರು.‌ ಈ ಸಂಧರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತರಿದ್ದರು. __________________________________ ►► ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ RG ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►► ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

Advertisement
Advertisement
Recent Posts
Advertisement