ರೈತನಾಯಕ ಟಿಕಾಯತ್ ವಿರುದ್ಧದ ಪ್ರಕರಣ ಹಿಂತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ.
ರೈತನಾಯಕ ಟಿಕಾಯತ್ ವಿರುದ್ಧದ ಪ್ರಕರಣ ಹಿಂತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ.
Advertisement
ರೈತನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ಶಿವಮೊಗ್ಗ ಮತ್ತು ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿರುವುದು ಖಂಡನೀಯ. ತಾನೊಬ್ಬ ರೈತನಾಯಕನೆಂದು ಬಿಂಬಿಸುತ್ತಾ ಮುಖ್ಯಮಂತ್ರಿ ಪಟ್ಟಕ್ಕೇರಿರುವ ಯಡಿಯೂರಪ್ಪ ನವರ ಅಸಲಿ ಮುಖ ಇದೀಗ ಮತ್ತೊಮ್ಮೆ ಅನಾವರಣಗೊಂಡಿದೆ. ತಕ್ಷಣ ಈ ಪ್ರಕರಣವನ್ನು ಹಿಂದೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ನಾನು ಈ ಮೂಲಕ ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ನವರು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
ರೈತವಿರೋಧಿ ಬಿಜೆಪಿ ಸರ್ಕಾರಕ್ಕೆ ಕರಾಳ ಕೃಷಿಕಾಯ್ದೆಯನ್ನು ವಿರೋಧಿಸುವವರು ಅಪರಾಧಿಗಳಂತೆ ಕಾಣುವುದು ಸಹಜವೇ ಆಗಿದೆ. ಆದರೆ ದೇಶದ ಜನತೆಗೆ ನಿಜವಾದ ಅಪರಾಧಿಗಳು ಯಾರೆಂದು ಗೊತ್ತಾಗಿದೆ. ಪೊಲೀಸ್ ಬಲಪ್ರಯೋಗದಿಂದ ರೈತಶಕ್ತಿಯನ್ನು ಹಣಿಯಬಹುದೆಂದು ರಾಜ್ಯದ ಬಿಜೆಪಿ ಸರ್ಕಾರ ಅಂದುಕೊಂಡಿದ್ದರೆ ಅದು ಅವರ ಭ್ರಮೆ ಎಂದವರು ಮತ್ತೊಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
__________________________________
►► ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ RG-) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►► ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com