Advertisement

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ 100 ಕಿ.ಮೀಟರ್ ಪಾದಯಾತ್ರೆಯ ಸಮಾರೋಪ

Advertisement

ಕೇಂದ್ರದ ನರೇಂದ್ರ ಮೋದಿ ಹಾಗೂ ರಾಜ್ಯದ ಯಡಿಯೂರಪ್ಪ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ವಿರುದ್ಧ ಹಾಗೂ ರೈತವಿರೋಧಿ ಕೃಷಿ ಮಸೂದೆಗಳ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಪು ವಿಧಾನಸಭಾ ವ್ಯಾಪ್ತಿಯ ಹೆಜಮಾಡಿ ಯಿಂದ ಬೈಂದೂರಿನವರೆಗೆ ನಡೆದ 'ಜನಧ್ವನಿ' ಪಾದಯಾತ್ರೆಯ ಸಮಾರೋಪ ಸಮಾರಂಭ. ಈ ಸಮಾರಂಭವು ಫೆಬ್ರವರಿ 27ರಂದು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯಿತು. ಆರು ದಿನಗಳ ಕಾಲ ನಿರಂತರವಾಗಿ ನಡರದ ಈ 100 ಕಿ.ಮೀಟರ್ ಪಾದಯಾತ್ರೆಯನ್ನು ಫೆಬ್ರವರಿ22 ರಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನವರು ಉದ್ಘಾಟಿಸಿದ್ದರು. ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಸಚಿವರುಗಳಾದ ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ ಗಫೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮುಂತಾದವರು ಭಾಗವಹಿಸಿದ್ದರು. ವಿಡಿಯೋ ಗಾಗಿ ಕನ್ನಡ ಮೀಡಿಯಾ ಯೂಟ್ಯೂಬ್ ಚಾನಲ್ ನ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಮತ್ತು ಚಾನಲ್ subscribe ಮಾಡಿ. __________________________________ ►►ನಿಮಗೆ ಈ ಬರಹ / ಸುದ್ದಿ ಇಷ್ಟವಾಗಿದ್ದರೆ ಅಗತ್ಯವಾಗಿ Like ಮಾಡಿ ಹಾಗೂ Share ಮಾಡಿ. ►►ನಿಮ್ಮ ಭಾಗದ ಸುದ್ದಿಗಳು ಹಾಗೂ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; 9844002593 ( ಜಾಹೀರಾತು ವಿಭಾಗ) ಹಾಗೂ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. ►►ಸಾಮಾಜಿಕ ಕಾಳಜಿಯ, ಜನಪರ ಸುದ್ದಿಗಳಿಗಾಗಿ ಸದಾ ಓದಿರಿ: www.kannadamedia.com

Advertisement
Advertisement
Recent Posts
Advertisement