Advertisement

ಭದ್ರಾವತಿ ನಗರಸಭೆ ಚುನಾವಣೆ: ಕಾಂಗ್ರೆಸ್ ಗೆ ಭರ್ಜರಿ ಜಯ

Advertisement

ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಜಯಗಳಿಸಿದೆ. ನಗರಸಭೆಯ ಒಟ್ಟು 34 ವಾರ್ಡ್‌ಗಳಲ್ಲಿ ಕಾಂಗ್ರೆಸ್ 18, ಜೆಡಿಎಸ್ 11 ಹಾಗೂ ಬಿಜೆಪಿ ಕೇವಲ 4, ಪಕ್ಷೇತರ 1ಸ್ಥಾನಗಳಿಸಿದೆ. ಈ ಮೂಲಕ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿ ನಾಯಕರುಗಳಾದ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಹಾಗೂ ಹಲವು ನಿಗಮ ಮಂಡಳಿಗಳ ಅಧ್ಯಕ್ಷರುಗಳು ಮತ್ತಿತರ ಬಿಜೆಪಿ ನಾಯಕರುಗಳು ಭದ್ರಾವತಿ ಯಲ್ಲಿ ಹಲವು ದಿನಗಳ ಕಾಲ ಠಿಕಾಣಿ ಹೂಡಿ ನಗರಸಭೆಯ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂಬ ನಿಟ್ಟಿನಲ್ಲಿ ಭರ್ಜರಿಯಾದ ಮನೆಮನೆ ಪ್ರಚಾರ ನಡೆಸಿದ್ದರು. ಈ ಹಿಂದಿನ ಅವಧಿಯಲ್ಲಿ 23 ಸ್ಥಾನಗಳಿಸಿದ್ದ ಜೆಡಿಎಸ್‌ಗೆ ಈ ಬಾರಿ ಕೇವಲ 11 ಸ್ಥಾನಗಳು ದೊರಕಿವೆ. ಬಿಜೆಪಿ ಒಂದಂಕಿಯ (4) ಸ್ಥಾನ ಪಡೆಯುವ ಮೂಲಕ ಹೀನಾಯ ಸೋಲು ಕಂಡಿದೆ.

Advertisement
Advertisement
Recent Posts
Advertisement