Advertisement

ಮೋದಿಯವರೆ 'ಟೀಕಾ ಉತ್ಸವ್' ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ, ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ: ಸಿದ್ದರಾಮಯ್ಯ ಟ್ವೀಟ್

Advertisement

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ, 'ಟೀಕಾ ಉತ್ಸವ್' ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಟ್ವೀಟ್ ಮಾಡುವ ಮೂಲಕ ಆಗ್ರಹಿಸಿದ್ದಾರೆ. ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರದಾನಿ ಮೋದಿಯವರೆ ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ‌ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ ಎಂದು ಮತ್ತೊಂದು ಟ್ವೀಟ್‌ ಮೂಲಕ ವಿನಂತಿಸಿದ್ದಾರೆ. ಲಸಿಕೆ‌ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಕರ್ನಾಟಕ ಸರ್ಕಾರ, ಅದರ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ. ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ಕರ್ನಾಟಕದ ಬಿಜೆಪಿ ನಾಯಕರು, ಈಗ ಪ್ರಧಾನಿ ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ. ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು‌ ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ ಎಂದವರು ಹೇಳಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ನವರೆ, ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ. ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಕರ್ನಾಟಕದ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು. ಔಷಧಿ,‌ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು‌ ಪ್ರಧಾನಿ ಮೋದಿಯವರನ್ನು ಬೇಡುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಅವರನ್ನು ಕಂಡಾಗ‌ ಕನಿಕರ ಮೂಡುತ್ತಿದೆ. ಕರ್ನಾಟಕದ 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದವರು ಸರಣಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. __________________________________ ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 ( ರೋಶನ್ ಶೆಟ್ಟಿ RG ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ.

Advertisement
Advertisement
Recent Posts
Advertisement