Advertisement

ಆಂದ್ರಪ್ರದೇಶ, ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ದುಡಿಯುವ ವರ್ಗ ಹಾಗೂ ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿದ್ದರಾಮಯ್ಯ

Advertisement

ಆಂದ್ರಪ್ರದೇಶ, ಕೇರಳದಲ್ಲಿ ವಿಶೇಷ ನೆರವಿನ ಪ್ಯಾಕೇಜ್ ನೀಡಿದ್ದಾರೆ, ಅದೇ ರೀತಿ ನಮ್ಮ ರಾಜ್ಯದಲ್ಲೂ ಲಾಕ್ ಡೌನ್ ಅವಧಿಯಲ್ಲಿ ದುಡಿಯುವ ವರ್ಗ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ. ಸೋಂಕು ಪರೀಕ್ಷೆ ಹೆಚ್ಚಾದರೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತದೆ, ಆಗ ಅವರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಕರ್ನಾಟಕದ ಬಿಜೆಪಿ ಸರ್ಕಾರ ಪರೀಕ್ಷೆ ಪ್ರಮಾಣ ಕಡಿಮೆ ಮಾಡಿದೆ. ಇದು ಸರ್ಕಾರವೇ ಜನರನ್ನು ಸಾವಿನ ದವಡೆಗೆ ತಳ್ಳಿದಂತೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿನಿತ್ಯ 50,000 ಕೊರೊನಾ ಪಾಸಿಟಿವ್ ಕೇಸ್ ಗಳು ರಾಜ್ಯದಾದ್ಯಂತ ದಾಖಲಾಗ್ತಿವೆ. ಹೀಗಾಗಿ ಎರಡು ವಾರ ಸಂಪೂರ್ಣ ಲಾಕ್ ಡೌನ್ ಮಾಡಬೇಕು. ಜನರಿಗೆ ಆರ್ಥಿಕ ನೆರವು ಮತ್ತು ಅಗತ್ಯ ದಿನಸಿ ವಸ್ತುಗಳನ್ನು ಸರ್ಕಾರ ಕೂಡಲೇ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸುತ್ತೇನೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಆದೇಶ ನೀಡಿದರೂ ಈ ವರೆಗೆ ನಮ್ಮ ರಾಜ್ಯಕ್ಕೆ ಅಗತ್ಯ ಪ್ರಮಾಣದ ಆಕ್ಸಿಜನ್ ಅನ್ನು ಕೇಂದ್ರದ ಮೋದಿ ಸರ್ಕಾರ ನೀಡುತ್ತಿಲ್ಲ. ಕೇಂದ್ರ ಸರ್ಕಾರ ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಕೊವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾದ ಬಳಿಕ ಕೋರ್ಟ್ ಮಧ್ಯೆ ಪ್ರವೇಶಿಸಿದೆ, ಅಂದರೆ ದೇಶದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ ಎಂದರ್ಥ. ಈ ವರೆಗೆ ಸಂಭವಿಸಿರುವ ಸಾವು, ನೋವುಗಳಿಗೆ ಮೋದಿ ಸರ್ಕಾರವೇ ನೇರಹೊಣೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು. ನಾನು ಕಾಂಗ್ರೆಸ್ ಶಾಸಕರೊಂದಿಗೆ ಚರ್ಚಿಸಿದ್ದೇನೆ. ಕೆಲವರು ವೈದ್ಯಕೀಯ ನೆರವು ನೀಡುತ್ತಿದ್ದಾರೆ, ಇನ್ನು ಕೆಲವರು ಆಹಾರ ಧಾನ್ಯ, ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಸರ್ಕಾರಕ್ಕೆ ನಮ್ಮ ಸಹಕಾರ ಸದಾ ಇರುತ್ತೆ. ಆದರೆ ಆಸ್ಪತ್ರೆ, ಅಂಬುಲೆನ್ಸ್, ಆಕ್ಸಿಜನ್ ಒದಗಿಸುವುದು ಕರ್ನಾಟಕ ಸರ್ಕಾರದ ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ. __________________________________ ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG(ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ.

Advertisement
Advertisement
Recent Posts
Advertisement