Advertisement

ತೆಂಕ ಎರ್ಮಾಳು ರಾಜೀವ್‍ಗಾಂಧಿ ಪೊಲಿಟಿಕಲ್‍ ಎಕಾಡಮಿ ಕಟ್ಟಡದಲ್ಲಿ ಕೋವಿಡ್ ಸೋಂಕು ಪೀಡಿತರ ಶುಶ್ರೂಷೆಗೆ ಉಚಿತ ಅವಕಾಶ: ಅಶೋಕ್ ಕೊಡವೂರು

Advertisement

ಉಡುಪಿ: ಜಿಲ್ಲೆಯಲ್ಲಿಕೋವಿಡ್ 19 ವೈರಸ್ ಸೋಂಕಿನ ಎರಡನೇ ಅಲೆ ಪ್ರಾರಂಭವಾಗಿದ್ದು ಸೋಂಕು ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳ ಕಂಡು ಬರುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಕೆಲವೊಂದು ಸಾವು ಕೂಡಾ ಆಗುತ್ತಿದ್ದು ಪರಿಸ್ಥಿತಿ ಬಿಗಡಾಯಿಸುತ್ತಿರುವುದರಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ತಾ. 6.5.2021 ರಂದು ಜಿಲ್ಲಾ ಕಾಂಗ್ರೆಸ್‍ ಅಧ್ಯಕ್ಷರಾದ ಅಶೋಕ್‍ಕುಮಾರ್‍ ಕೊಡವೂರು ಹಾಗೂ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆ, ಜಿಲ್ಲಾಡಳಿತ ಜನತೆಗೆ ನೀಡುವ ಮುನ್ನೆಚ್ಚರಿಕೆ ಹಾಗೂ ಜಾಗ್ರತಿಕಾರ್ಯಕ್ರಮಗಳು ಶ್ಲಾಘನೀಯವಾದರೂ ದಿನೇ ದಿನೇ ಕೋವಿಡ್ ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ದೇಶದಲ್ಲಿ ರಾಷ್ಟ್ರೀಯ ವಿಪತ್ತು, ಸಾಂಕ್ರಾಮಿಕ ರೋಗಗಳು ಬಂದಾಗ ಜನಜಾಗ್ರತಿ ಮತ್ತು ರಕ್ಷಣೆ, ವೈದ್ಯಕೀಯ ನೆರವು ಆಹಾರದ ವ್ಯವಸ್ಥೆಗಳು ನೀಡಬೇಕಾಗಿರುವುದು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‍ನ ಕರ್ತವ್ಯ ಕೂಡಾ ಆಗಿರುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕೋವಿಡ್ ಪ್ರಥಮ ಅಲೆ ಬಂದಾಗ, ಹಾಗೂ ಈಗ ಎರಡನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದಾಗಲೂ ಆಡಳಿತ ಪಕ್ಷ ಹಾಗೂ ಜನ ಪ್ರತಿನಿಧಿಗಳನ್ನು ಹೊರತು ಪಡಿಸಿ ಸರ್ವ ಪಕ್ಷಗಳ ಮುಖಂಡರ ಸಭೆ ಕರೆಯದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಕೂಡಲೇ ಕಾಂಗ್ರೆಸ್, ಜೆ.ಡಿ.ಎಸ್. ಕಮ್ಯೂನಿಸ್ಟ್ ಪಕ್ಷಗಳ ಮುಖಂಡರನ್ನೊಳಗೊಂಡ ಸರ್ವ ಪಕ್ಷ ಸಭೆಕರೆದು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿಪ್ರಾಯ ಪಡೆದು ಸಮಸ್ಯೆಯನ್ನು ಬಗೆಹರಿಸಬೇಕಾಗಿ ಜಿಲ್ಲಾಧಿಕಾರಿಗಳನ್ನು ವಿನಂತಿಸಿದರು. ಕಾಪು ತಾಲೂಕಿನಲ್ಲಿರುವ ಸರಕಾರಿ ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉನ್ನತ ಮಟ್ಟಕ್ಕೆಏರಿಸುವ ಬಗ್ಗೆ ಹಾಗೂ ಅವಶ್ಯವಿರುವ ವೈದ್ಯಾಧಿಕಾರಿಗಳನ್ನು ಅಲ್ಲದೆ ಸಿಬ್ಬಂದಿಗಳನ್ನು ಕೂಡಲೇ ನೇಮಿಸುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‍ ಅಧ್ಯಕ್ಷರಾದ ಅಶೋಕ್‍ಕುಮಾರ್‍ ಕೊಡವೂರು ಅವರು ಜಿಲ್ಲಾಧಿಕಾರಿಯವರಲ್ಲಿ ಮಾತನಾಡುತ್ತಾ ತೆಂಕ ಎರ್ಮಾಳಿನಲ್ಲಿರುವ ರಾಜೀವ್‍ಗಾಂಧಿ ಪೊಲಿಟಿಕಲ್‍ ಎಕಾಡಮಿಯ ಕಟ್ಟಡದಲ್ಲಿ ಕೋವಿಡ್ ಸೋಂಕು ಪೀಡಿತರ ಶುಶ್ರೂಷೆಗೆ ಉಚಿತವಾಗಿ ಅವಕಾಶ ನೀಡುವುದಾಗಿ ಹೇಳಿದರು.ವ್ಯಾಕ್ಸಿನ್‍ನ ಲಭ್ಯತೆ ಬಗ್ಗೆ ಇರುವ ಗೊಂದಲವನ್ನು ಸರಿಪಡಿಸುವಂತೆ ಒತ್ತಾಯಿಸಿದರು. ಅಲ್ಲದೆ ಆಶಾ ಕಾರ್ಯಕರ್ತೆಯರಿಗೆ ಕೋವಿಡ್ 19 ಸೋಂಕು ಪೀಡಿತರ ಆಕ್ಸಿಜನ್ ಸ್ಯಾಚುರೇಶನ್ ಪರೀಕ್ಷಿಸುವ ಸಾಧನ ಆಕ್ಸಿಮೀಟರ್‍ ಅನ್ನು ನೀಡುವಂತೆ ಆಗ್ರಹಿಸಿದರು. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ.ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎ.ಗಫೂರ್, ಕೆ.ಪಿ.ಸಿ.ಸಿ. ಪ್ಯಾನಲಿಸ್ಟ್ ಶ್ರೀಮತಿ ವೆರೋನಿಕಾ ಕರ್ನೇಲಿಯೋ, ಜಿಲ್ಲಾಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್‍ಜತ್ತನ್ನ, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಡಾ.ಸುನೀತಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾದ ಹರೀಶ್ ಶೆಟ್ಟಿ ಪಾಂಗಾಳ, ಉಡುಪಿ ಬ್ಲಾಕ್‍ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಮೊದಲಾದವರು ಉಪಸ್ಥಿತರಿದ್ದರು. ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG(ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ.

Advertisement
Advertisement
Recent Posts
Advertisement