Advertisement

ಬಿಜೆಪಿಗರೆ, ಕೊರೊನಾ ನಿರ್ವಹಣೆಯಲ್ಲಿನ ನಿಮ್ಮ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಈ ನೆಲದ ಕೋಮು ಸಾಮರಸ್ಯವನ್ನು ಏಕೆ ಕೆಡಿಸುತ್ತೀರಿ?

Advertisement

ಬಿಬಿಎಂಪಿ ಬೆಂಗಳೂರು ದಕ್ಷಿಣ ಕೋವಿಡ್ ವಾರ್ ರೂಮ್ ಮೂಲಕ ನಡೆಯುತ್ತಿದೆ ಎನ್ನಲಾದ 'ಬೆಡ್ ಬ್ಲಾಕಿಂಗ್' ಪ್ರಕರಣದ ಕುರಿತು ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಮತ್ತಿತರ ಸ್ಥಳೀಯ ಶಾಸಕರುಗಳು ಆರೋಪಿಸಿದ ಹಿನ್ನಲೆಯಲ್ಲಿ ನಿನ್ನೆ ಜಯನಗರ ಠಾಣೆ ಪೋಲಿಸರು 'ರೋಹಿತ್' ಮತ್ತು 'ನೇತ್ರಾ' ಎಂಬ ಇಬ್ಬರು ಆರೋಪಿಗಳನ್ನು ಬಂದಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿರುವ ಕುರಿತು ವರದಿಯಾಗಿದೆ. ಆದರೆ ಮೇಲೆ ಹೆಸರಿಸಿದ ಸಂಸದ ಮತ್ತು ಶಾಸಕರುಗಳು 'ಆ ವಾರ್ ರೂಮ್ ನಲ್ಲಿ ಒಂದೇ ಸಮುದಾಯದ 17 ಮಂದಿಯನ್ನು ನೇಮಕ ಮಾಡಿರುವ ಕುರಿತು ಮತ್ತು ಹಾಗೆ ನೇಮಕ ಮಾಡಿದ ಏಜೆನ್ಸಿ ವಿರುದ್ದ ಕೂಡಲೇ ಕ್ರಮ ಕೈಗೊಳ್ಳ ಬೇಕು' ಎಂದು ಆಗ್ರಹಿಸಿದ್ದರು. ಸಂಸದ ಮತ್ತು ಶಾಸಕರುಗಳ ಈ ಆರೋಪದ ಹಿನ್ನಲೆಯಲ್ಲಿ ಬಿಜೆಪಿ ಐಟಿ ಸೆಲ್ ಸಾಮಾಜಿಕ ಜಾಲತಾಣದ ಮೂಲಕ ಒಂದು ಸಮುದಾಯಕ್ಕೆ ಸೇರಿದ 17ಜನರ ಹೆಸರುಗಳ ಪಟ್ಟಿಯನ್ನು ಹರಿಯಬಿಟ್ಟಿದೆ. ಇದು ಕೊರೊನಾ ನಿರ್ವಹಣೆಯಲ್ಲಿನ ಸರ್ಕಾರದ ವೈಫಲ್ಯವನ್ನು ಮತ್ತು ಮೊನ್ನೆಯಷ್ಟೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24ಜನರ ಸಾವಿಗೆ ಕಾರಣವಾದ ಘಟನೆಯನ್ನು ಮುಚ್ಚಿಹಾಕಲು ಬಿಜೆಪಿ ನಡೆಸುತ್ತಿರುವ ಷಢ್ಯಂತ್ರವಾಗಿದೆ. ಬಿಜೆಪಿ, ತನ್ನ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಈ ನೆಲದ ಕೋಮು ಸಾಮರಸ್ಯ ಕೆಡಿಸಲು ಪ್ರಯತ್ನಿಸುತ್ತಿರುವುದು ಅಕ್ಷಮ್ಯ. ಈ ಕುರಿತು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಇಂದು ಸಂಸದ ಮತ್ತು ಶಾಸಕರುಗಳಿಗೆ ಟ್ವೀಟ್ ಮಾಡಿದ್ದು, ಅದರ ಪೂರ್ಣಪಾಠ ಇಲ್ಲಿದೆ. ಸಂಸದ ತೇಜಸ್ವಿ ಸೂರ್ಯರವರೆ , ಶಾಸಕರುಗಳಾದ ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ, ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು BBMPಯ ಅಧಿಕಾರಿಗಳ ವಿರುದ್ಧವಲ್ಲ. ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ,‌ ಸಚಿವರು ಮತ್ತು ಬಿಜೆಪಿಯ ಶಾಸಕರು‌, ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾಗಿಯೋ ಹೇಗೆ? ಕೋವಿಡ್ ಆರಂಭಗೊಂಡ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ‌ ಹೈಕೋರ್ಟ್ ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಲು ಕರ್ನಾಟಕದ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ. ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯರವರೇ? 'ಬೆಡ್ ಬ್ಲಾಕಿಂಗ್' ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು ತೇಜಸ್ವಿ ಸೂರ್ಯರವರೆ? ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯರವರೇ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳಿ. ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯರವರೇ, ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ 'ಯಥಾ ರಾಜಾ ತಥಾ‌ ಮಂತ್ರಿ'. 'ಮೈ ಬೀ ಕಾವೂಂಗಾ, ತುಮ್ ಬಿ ಕಾವೋ' ಎನ್ನುವುದೇ ನಿಮ್ಮ ನರೇಂದ್ರ ಮೋದಿಯವರ ನಿಜವಾದ ಘೋಷಣೆ.‌ ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ ಅಲ್ಲವೇ? ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪ‌ಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ- ಸಿಬ್ಬಂದಿಗಳನ್ನು‌ ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ ಕೋವಿಡ್ ನಿರ್ವಹಣೆಯಲ್ಲಿ‌ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದು ಕಟ್ಟೆ ಹಾಕಿದೆ‌‌ ಅದನ್ನೂ ರಾಜ್ಯದ ಜನತೆಗೆ ತಿಳಿಸಿ. ಸ್ಮಶಾನದಲ್ಲಿ‌ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ನರೇಂದ್ರ ಮೋದಿಯವರ ಅವರ ಅಚ್ಚೇ ದಿನ್? ಕೇಂದ್ರ ಮತ್ತು ರಾಜ್ಯದಲ್ಲಿ‌ ಎರಡೂ ಕಡೆ ಬಿಜೆಪಿ ಅಧಿಕಾರದಲ್ಲಿ ಇದ್ದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ,‌ ಸ್ಮಶಾನದಲ್ಲಿ‌ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ನರೇಂದ್ರ ಮೋದಿಯವರ ಅವರ ಅಚ್ಚೇ ದಿನ್? ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು‌ ಹಣ ಸಂದಾಯವಾಗಿದೆ? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ರಾಜ್ಯಕ್ಕೆ ವೆಂಟಿಲೇಟರ್,‌ ಐಸಿಯು,‌ ಆಕ್ಸಿಜನ್ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ ನರೇಂದ್ರ ಮೋದಿಯವರು ರಕ್ಷಿಸುತ್ತಿರುವುದು ಯಾರನ್ನು ತಮ್ಮನ್ನೋ? ಅಥವಾ ಅಧಿಕಾರಿಗಳನ್ನೋ? ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ,‌ ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನವರು ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ನರೇಂದ್ರ ಮೋದಿ ಎದುರು ಇಲಿಗಳಾಗಿ ಇರುವುದು ಯಾಕೆ? ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG(ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ.

Advertisement
Advertisement
Recent Posts
Advertisement