ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕೋವಿಡ್-19 ಸಂಕಷ್ಟದ ನಡುವೆಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಏರಿಕೆ ಮಾಡುವ ಮೂಲಕ ಜನಸಾಮಾನ್ಯರನ್ನು ಹಗಲು ದರೋಡೆ ಮಾಡುತ್ತಿದೆ. ತಾವು ಅಧಿಕಾರಕ್ಕೆ ಬಂದರೆ 'ಅಚ್ಛೇ ದಿನ್' ಬರುತ್ತದೆ ಎಂಬ ಹಸಿ ಸುಳ್ಳಿನ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಸರ್ಕಾರ ಇದೀಗ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಜನರ ಬದುಕು ದುಸ್ತರವಾಗಿಸಿದೆ . ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ತೈಲ ಬೆಲೆ ಇಳಿಕೆ ಆಗಲಿದೆ ಎಂದು ಜನರನ್ನು ನಂಬಿಸಿ ಅಧಿಕಾರಕ್ಕೆ ಬಂದು ಇದೀಗ ಪೆಟ್ರೋಲ್ ಬೆಲೆ ನೂರರ ಗಡಿಯನ್ನು ದಾಟಿಸಿ ಐತಿಹಾಸಿಕವಾದ ದಾಖಲೆಯನ್ನು ಮಾಡಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್ ಆರೋಪಿಸಿದ್ದಾರೆ.
ಅವರು ಇಂದು 'ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮತ್ತು ಆ ಮೂಲಕ ಸಾಗಾಟ ವೆಚ್ಚ ಹೆಚ್ಚಳಗೊಂಡು ಆದ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ' ಕುವೆಂಪು ರಸ್ತೆಯ ನಂದಿ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.
ಬಿಜೆಪಿ ಸರ್ಕಾರ ಜನರ ನಂಬಿಕೆಗಳನ್ನು ದುರ್ಭಳಕೆ ಮಾಡಿಕೊಂಡು ತೈಲ ಬೆಲೆ ನಿರಂತರವಾಗಿ ಏರಿಕೆ ಮಾಡುವ ಮೂಲಕ ದೇಶದ ಜನರನ್ನು ಸಂಕಷ್ಟಕ್ಕೆ ದೂಡಿದೆ .ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅದಿಕಾರದಲ್ಲಿದ್ದಾಗ ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಈಗಿನ ಬೆಲೆಗಿಂತ ಮೂರುಪಟ್ಟು ಹೆಚ್ಚಿದ್ದರೂ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 60 ರ ಆಸುಪಾಸಿನಲ್ಲಿತ್ತು . ಆದರೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅದಿಕಾರಕ್ಕೆ ಬಂದ ನಂತರ ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬಾರೀ ಪ್ರಮಾಣದಲ್ಲಿ ಇಳಿಕೆ ಆಗಿದ್ದರೂ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ .ಡೀಸೆಲ್ ಬೆಲೆ ಶತಕದ ಅಂಚಿನಲ್ಲಿದ್ದ . ಜನಸಾಮಾನ್ಯರಿಗೆ ಕೋವಿಡ್ ಲಾಕ್ ಡೌನ್ ನಿಂದಾಗಿ ದೈನಂದಿನ ಜೀವನ ನಡೆಸುವುದೇ ಕಷ್ಟಕರವಾಗಿರುವಾಗ ತೈಲ ಬೆಲೆ ಏರಿಕೆಯಿಂದ ಜನರು ದಿಕ್ಕು ತೋಚದಂತಾಗಿದೆ .ತೈಲ ಬೆಲೆ ಏರಿಕೆಯಿಂದಾಗಿ ಇತರ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ .ಸರ್ಕಾರ ಸುಳ್ಳು ಆಶ್ವಾಸನೆಗಳನ್ನು ನೀಡಿ ಜನಸಾಮಾನ್ಯರು ನರಳುವಂತಾಗಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಾಧ್ಯಂತ ಜಿಲ್ಲಾ ಕೇಂದ್ರದ ಪೆಟ್ರೋಲ್ ಬಂಕ್‌ಗಳ ಮುಂದೆ ನಡೆಯುತ್ತಿರುವ ಈ ಪ್ರತಿಭಟನೆ ಶಿವಮೊಗ್ಗದ ಪ್ರಮುಖವಾದ 15ಸ್ಥಳಗಳಲ್ಲಿ ಕಾಂಗ್ರೆಸ್ ನ ವಿವಿಧ ಘಟಕಗಳಾದ ಯುವ ಕಾಂಗ್ರೆಸ್, ಎನ್‌ಎಸ್‌ಯುಐ, ಕಾರ್ಮಿಕ ಘಟಕ, ಇಂಟಕ್, ಕಿಸಾನ್ ಘಟಕ ಮುಂತಾದ ಮುಂಚೂಣಿ ಘಟಕಗಳ ನೇತೃತ್ವದಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಪಕ್ಷದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು, ಜನಸಾಮಾನ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇದನ್ನೂ ಓದಿ:
BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com