ಅವೈಜ್ಞಾನಿಕವಾದ ನೋಟು ಬ್ಯಾನ್ ಹಾಗು ಕೊರೊನಾ ಲಾಕ್ಡೌನ್ ನಿಂದ ದೇಶದಾದ್ಯಂತ ಜನತೆ ಇದ್ದ ಕೆಲಸ ಕಳೆದುಕೊಂಡು ಒಂದೊತ್ತಿನ ಊಟಕ್ಕೆ ಪರದಾಡುತ್ತಿರುವ ಈ ವೇಳೆ ಪ್ರಜಾಪ್ರಭುತ್ವ ದೇಶವಾದ ಭಾರತದ ಸರ್ಕಾರವು ಬ್ಯಾಂಕ್ ಮತ್ತಿತರ ಹಣಕಾಸು ಸಂಸ್ಥೆಗಳ ಮೂಲಕ ಜನರ ಕೈಗೆ ಹಣ ಸಿಗುವ ಯೋಜನೆಗಳನ್ನು ರೂಪಿಸುವ ಹಾಗೂ ಆ ಮೂಲಕ, ಮಾರುಕಟ್ಟೆಯಲ್ಲಿ ಹಣದ ಹರಿವು ರೂಪಿಸುವ ಮೂಲಕ ನಾಶಗೊಂಡಿರುವ ಜನಜೀವನವನ್ನು ಮತ್ತೊಮ್ಮೆ ಕಟ್ಟಿಕೊಳ್ಳಲು ಸಹಾಯಕವಾಗಿ ಕಾರ್ಯ ನಿರ್ವಹಿಸಬೇಕಿತ್ತು ಆದರೆ ಕೇಂದ್ರದ ಮೋದಿ ಸರ್ಕಾರ ಅದಕ್ಕೆ ಬದಲಿಯಾಗಿ ಪೆಟ್ರೋಲ್ ಡಿಸೇಲ್ ಮೇಲೆ ವಿಪರೀತವಾದ ತೆರಿಗೆ ವಿಧಿಸುವ ಮೂಲಕ ಜನರ ಸುಲಿಗೆಗೆ ಪಣತೊಟ್ಟಂತೆ ವರ್ತಿಸುತ್ತಿದೆ. ಲೀಟರ್ ಒಂದರ 35ರೂಪಾಯಿ ಮೂಲಬೆಲೆಯ ಪೆಟ್ರೋಲ್ ಮೇಲೆ ಕೇಂದ್ರದ ಮೋದಿ ಸರ್ಕಾರ 34ರೂ ತೆರಿಗೆ ವಿಧಿಸಿದರೆ, ರಾಜ್ಯದ ಯಡಿಯೂರಪ್ಪ ಸರ್ಕಾರ 26 ರೂಪಾಯಿ ತೆರಿಗೆ ವಸೂಲಿ ಮಾಡುತ್ತಿದೆ. ಇದರಿಂದಾಗಿ ಸಾಗಾಟ ವೆಚ್ಚ ವಿಪರೀತವಾಗಿ ಏರಲ್ಪಟ್ಟು ದಿನವಹಿ ಸಾಮಾನುಗಳ ಬೆಲೆಗಳು ಗಗನಕ್ಕೇರಿದೆ. ಈ ಕುರಿತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ದೇಶದಾದ್ಯಂತ ಐದು ದಿನಗಳ ಕಾಲ ಪ್ರತಿಭಟನೆಗೆ ಕರೆ ಕೊಟ್ಟಿದೆ. ಅದರಂತೆ ನಿನ್ನೆ ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಪ್ರತಿಭಟನೆ ನಡೆದರೆ, ಇಂದು ಎಲ್ಲಾ ತಾಲೂಕು ಕೇಂದ್ರಗಳ ಪೆಟ್ರೋಲ್ ಬಂಕ್ ಎದರುಗಡೆ ಪ್ರತಿಭಟನೆ ನಡೆಯಿತು.
(ಝೂಮ್ ಲಿಂಕ್ ಮೂಲಕ ರಾಜ್ಯಾದ್ಯಂತ ಇಂದು ಎರಡೂವರೆ ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ನೇರವಾಗಿ ವೀಕ್ಷಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.)
ಅದರ ಭಾಗವಾಗಿ ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಂದಾಪುರದ ಹೃದಯ ಭಾಗದಲ್ಲಿರುವ ಹೆಚ್ಪಿ ಪೆಟ್ರೋಲ್ ಬಂಕ್ ಎದುರುಗಡೆ ಪ್ರತಿಭಟನೆ ನಡೆಯಿತು.
ಲಾಕ್ಡೌನ್ ಕಾರಣಕ್ಕಾಗಿ ಸಾಂಕೇತಿಕವಾಗಿ ನಡೆದ ಈ ಪ್ರತಿಭಟನೆಯಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ, ಹಿರಿಯ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೊಳ್ಕೆಬೈಲು ಕಿಶನ್ ಹೆಗ್ಡೆ ಮುಂತಾದವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯದ ತೆರಿಗೆಯನ್ನು ಕಡಿಮೆಗೊಳಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.
ಈ ಸಂಧರ್ಭದಲ್ಲಿ ಕೆಪಿಸಿಸಿ ಸೋಶಿಯಲ್ ಮೀಡಿಯಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಪುರಸಭಾ ಸದಸ್ಯರಾದ ದೇವಕಿ ಪಿ. ಸಣ್ಣಯ್ಯ, ಚಂದ್ರಶೇಖರ ಖಾರ್ವಿ, ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರೆಗಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಅಧ್ಯಕ್ಷ ರೋಷನ್ ಶೆಟ್ಟಿ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೋಡಿ ಸುನಿಲ್ ಪೂಜಾರಿ, ಮುಖಂಡರಾದ ಅಶೋಕ್ ಪೂಜಾರಿ, ಅಶೋಕ್ ಸುವರ್ಣ, ಶಿವಕುಮಾರ್, ಧರ್ಮಪ್ರಕಾಶ್, ಡೊಲ್ಫಿ ಡಿ'ಕೋಸ್ಟಾ, ಸುವರ್ಣ ಅಲ್ಮೇಡಾ, ಆಶಾ ಕರ್ವಾಲೋ, ಚಂದ್ರ ಅಮಿನ್, ಆಶ್ವಥ್ ಕುಮಾರ್, ಹಾರೂನ್ ಸಾಹೇಭ್, ಕುಮಾರ ಖಾರ್ವಿ, ಶಿಶಿರ್ ಕುಮಾರ್, ಸುರೇಶ್ ಕೆ, ಯುವ ಮುಖಂಡರಾದ ಶಶಿ ರಾಜ್, ಪ್ರಭಾಕರ್, ವಿ.ಸುರೇಶ್, ಪ್ರಭಾಕರ್ ಕಡ್ಗಿಮನೆ, ರಾಘವೇಂದ್ರ ಮುಂತಾದವರು ಭಾಗವಹಿಸಿದ್ದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ಕಾರ್ಯಕ್ರಮವನ್ನು ನಿರ್ವಹಿಸಿ, ಬ್ಲಾಕ್ ಕಾಂಗ್ರೆಸ್ ಖಜಾಂಚಿ ನಾರಾಯಣ ಆಚಾರ್ ವಂದಿಸಿದರು.
ಇದನ್ನೂ ಓದಿ:
BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ.
ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ?
1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.!
ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್!
ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ!
ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ?
ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ?
‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ.
‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ
ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ)
‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ?
ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..!
ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ!
ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ?
ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್!
ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ?
‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು.
ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು?
'ಕೋವಿಡ್ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್!
‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ.
ಛತ್ತೀಸ್ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ?
ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್
ನನ್ನ ರಾಜೀವ್ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ
ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್ ಚಂದ್ರ ಶೆಟ್ಟಿ (ವಿಡಿಯೋ ನೋಡಿ)
ಖಾಸಗೀಕರಣದ ಹಿಂದಿನ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ
ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?
►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com