Advertisement

ಕೊರೊನಾ ಲಸಿಕೆಯನ್ನು ಮಾರಾಟ ಮಾಡುತ್ತಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಮ ಏಕಿಲ್ಲ?: ಸಿದ್ದರಾಮಯ್ಯ ಆಕ್ರೋಶ

Advertisement

ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ ಇರುವ ಲಸಿಕೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಯಾಕಿಲ್ಲ ಎಂದು ಹೈಕೋರ್ಟ್‌ ಚಾಟಿ‌ ಬೀಸಿದರೂ ರಾಜ್ಯದ ಬಿಜೆಪಿ ಸರ್ಕಾರ ಖಾಸಗಿ‌ ಆಸ್ಪತ್ರೆಗಳ‌ ಸುಲಿಗೆಯನ್ನು ಬೆಂಬಲಿಸುತ್ತಿರುವುದು ನಿರ್ಲಜ್ಜತನದ ಪರಮಾವಧಿ. ರಾಜ್ಯದ ಜನತೆಗೆ‌ ಉಚಿತವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಕೊರೊನಾ ಲಸಿಕೆ‌ ಸಿಗುವಂತೆ ಮಾಡಬೇಕಾಗಿರುವ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಖಾಸಗಿ ಆಸ್ಪತ್ರೆಗಳ ಪರವಾಗಿ ಪ್ರಚಾರಕ್ಕಿಳಿದಿದ್ದಾರೆ. ಇವರು ಸಚಿವರೋ? ಖಾಸಗಿ ಆಸ್ಪತ್ರೆಗಳ ಪ್ರಚಾರಕರೋ? ಖಾಸಗಿ ಆಸ್ಪತ್ರೆಗಳು ಲಸಿಕಾ ತಯಾರಿಕ ಸಂಸ್ಥೆ ನಿಗದಿಪಡಿಸಿದ ದರದ ಜೊತೆಗೆ ರೂ.100 ಸೇವಾಶುಲ್ಕ ಮಾತ್ರ ವಸೂಲಿ ಮಾಡಬೇಕೆಂದು ಕೇಂದ್ರ ಸರ್ಕಾರದ ಸುತ್ತೋಲೆ ಇದ್ದರೂ, ಲಸಿಕೆಯನ್ನು 900ರೂ.ಗೆ‌ ಮಾರಾಟ‌ ಮಾಡುತ್ತಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಮ ಯಾಕಿಲ್ಲ‌ ಮುಖ್ಯಮಂತ್ರಿಗಳೇ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಖಾಸಗಿ ಆಸ್ಪತ್ರೆಗಳು ನೀಡುವ ಲಸಿಕೆಗೆ ಸೇವಾ ಶುಲ್ಕವನ್ನು ರೂ.100 ರಿಂದ 200ಕ್ಕೆ ಹೆಚ್ಚಿಸಿರುವ ರಾಜ್ಯದ ಬಿಜೆಪಿ ಸರ್ಕಾರ ಯಾರ ಹಿತರಕ್ಷಣೆ‌ ಮಾಡುತ್ತಿದೆ? ರಾಜ್ಯದ ಜನರದ್ದೋ? ಖಾಸಗಿ ಆಸ್ಪತ್ರೆಗಳದ್ದೋ? ಕಳೆದ ಏಪ್ರಿಲ್‌ನಲ್ಲಿ ರಾಜ್ಯ ಸರ್ಕಾರ ಖಾಸಗಿ‌ ಸಂಸ್ಥೆಗಳು ನೀಡುವ ಲಸಿಕೆಗೆ ರೂ.100 ಸೇವಾ ಶುಲ್ಕವನ್ನು‌ ನಿಗದಿಪಡಿಸಿದ್ದರೂ, ಖಾಸಗಿ ಆಸ್ಪತ್ರೆಗಳು ಲಸಿಕೆಗೆ ಹೆಚ್ಚುವರಿ‌ ಶುಲ್ಕ ವಸೂಲಿ‌ ಮಾಡುತ್ತಿದ್ದಾರೆನ್ನುವ ದೂರುಗಳಿವೆ. ಹೀಗಿರುವಾಗಲೇ ಸರ್ಕಾರ ಸೇವಾ ಶುಲ್ಕ‌ವನ್ನು ದುಪ್ಪಟ್ಟುಗೊಳಿಸಿ ಸುಲಿಗೆಯನ್ನು ಬೆಂಬಲಿಸಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. __________________________________ ►►ನಿಮ್ಮ ಭಾಗದ ಜಾಹೀರಾತು ಪ್ರಸಾರಕ್ಕಾಗಿ ಮೊಬೈಲ್ ಸಂಖ್ಯೆ; +919916377454 -ರೋಶನ್ ಶೆಟ್ಟಿ RG (ಜಾಹೀರಾತು ವಿಭಾಗ) ಹಾಗೂ ನಿಮ್ಮ ಭಾಗದ ಸುದ್ದಿಗಳ ಪ್ರಸಾರಕ್ಕಾಗಿ E-mail ID: kannadamedia1947@gmail.com (ಸುದ್ದಿ ವಿಭಾಗ) ಕ್ಕೆ ಸಂಪರ್ಕಿಸಿ. www.kannadamedia.com

Advertisement
Advertisement
Recent Posts
Advertisement