ಕಾಂಗ್ರೆಸ್ ಪಕ್ಷದ ಸೋಶಿಯಲ್ ಮೀಡಿಯಾ ಘಟಕದ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಕುಂದಾಪುರ ತಾಲೂಕಿನ ಅಲ್ಬಾಡಿ ಗ್ರಾಮದ ರೋಶನ್ ಶೆಟ್ಟಿ ಇವರನ್ನು ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಸೋಶಿಯಲ್ ಮೀಡಿಯಾ ಅಧ್ಯಕ್ಷರಾದ ಬಿ.ಆರ್ ನಾಯ್ಡು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ದಾಂತದ ಕುರಿತು ಅಪಾರ ಒಲವು ಹೊಂದಿರುವ ಯುವ ಮುಖಂಡ ರೋಶನ್ ಶೆಟ್ಟಿಯವರು ಈ ಹಿಂದೆ ಕಾಂಗ್ರೆಸ್ ಪಕ್ಷದ ಇಂಟಕ್ ನ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು ಅಲ್ಲದೇ ಇವರು ಪ್ರಸ್ತುತ 'ಕನ್ನಡ ಮೀಡಿಯಾ ಡಾಟ್ ಕಾಂ' ನ ಜಾಹೀರಾತು ವಿಭಾಗದ ಮುಖ್ಯಸ್ಥರಾಗಿರುತ್ತಾರೆ.