Advertisement

ಕಾಂಗ್ರೆಸ್ ಕಾರ್ಯಕರ್ತನ ಹೆಸರಿನಲ್ಲಿ ಸೃಷ್ಟಿಸಲಾದ ಸೈನಿಕರ ವಿರುದ್ಧದ ಪೋಸ್ಟ್‌ ನ ರೂವಾರಿ ಕಾರ್ಕಳ ಶಾಸಕರೇ?

Advertisement

ಕಾಂಗ್ರೆಸ್ ಕಾರ್ಯಕರ್ತನ ಹೆಸರಿನಲ್ಲಿ ಸೃಷ್ಟಿಸಲಾದ ಸೈನಿಕರ ವಿರುದ್ಧದ ಪೋಸ್ಟ್‌ ನ ರೂವಾರಿ ಕಾರ್ಕಳ ಶಾಸಕರೇ? ಈ ಕುರಿತು ಬರೆದಿದ್ದಾರೆ ಹಿರಿಯ ಪತ್ರಕರ್ತ, ನಿಕಟಪೂರ್ವ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ, ಜನಪರ ಚಿಂತಕ ದಿನೇಶ್ ಅಮಿನ್ ಮಟ್ಟು. ಕಾರ್ಕಳದ ರಾಧಾಕೃಷ್ಣ ನಾಯಕ್ ಹಿರ್ಗಾನ ಅವರದ್ದೆನ್ನಲಾದ ಏಳೆಂಟು ತಿಂಗಳುಗಳ ಹಿಂದಿನ ಪೋಸ್ಟ್, ಅದರ ವಿರುದ್ಧ ಬೆಂಗಳೂರಿನಲ್ಲಿ ದೂರು-ವಿಚಾರಣೆ, ಇದಕ್ಕೆ ಆರೋಪಿಯಿಂದ ಪ್ರತಿದೂರು ಮತ್ತಷ್ಟು ದಿನಗಳ ಕಾಲ ದೀರ್ಘ ಮೌನ. ದಿಡೀರನೆ ಕಾರ್ಕಳದ ಪೊಲೀಸ್ ಅಧಿಕಾರಿಯೊಬ್ಬರಲ್ಲಿ ಕರ್ತವ್ಯಪ್ರಜ್ಞೆಯ ಜಾಗೃತಿ, ವಿಚಾರಣೆ, ವೈದ್ಯಕೀಯ ಪರೀಕ್ಷೆ…. ಏನಿದೆಲ್ಲ? ಇಷ್ಟೆಲ್ಲ ನಡೆಯಬಾರದ್ದೆಲ್ಲ ನಡೆಯಬೇಕಾದರೆ ಇದರ ಹಿಂದೆ ಯಾರಿದ್ದಾರೆ ಎಂಬ ಪ್ರಶ್ನೆ ಸಹಜ. ಉತ್ತರ ಹುಡುಕಲು ಹೆಚ್ಚು ಕಷ್ಟ ಪಡಬಾರದೆಂದು ಕಾರ್ಕಳದ ಶಾಸಕ ಸುನೀಲ್ ಕುಮಾರ್ ತಕ್ಷಣ ಹಾಜರಾಗಿದ್ದಾರೆ. ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಹಾಕಿರುವ ಸುಳ್ಳುಗಳ ಸರಮಾಲೆ ಪೋಣಿಸಿ ಹಾಕಿರುವ ಪೋಸ್ಟ್ ನೋಡಿದರೆ ಈ ರಾಧಾಕೃಷ್ಣ ಅವರ ಹೆಸರಲ್ಲಿ ಸೃಷ್ಟಿಯಾಗಿರುವ ನಕಲಿ ಪೋಸ್ಟ್ ನ ಸೃಷ್ಟಿಕರ್ತ ಈ ಶಾಸಕರೇ ಆಗಿರಬಹುದೇ ಎಂಬ ಸಂಶಯ ಸಹಜವಾಗಿಯೇ ಉದ್ಭವವಾಗುತ್ತದೆ. ಇದಕ್ಕೆ ಆಧಾರವನ್ನು ಅವರೇ ಒದಗಿಸಿ ನೆರವಾಗಿದ್ದಾರೆ. ಕೆ.ಜೆ.ಹಳ್ಳಿ ಗಲಭೆ, ಮಂಗಳೂರು ಗಲಭೆ, ಮಂಗಳೂರಿನ ಗೌರಿಪಾಳ್ಯದಲ್ಲಿ ನಡೆದ ವೈದ್ಯರ ಮೇಲಿನ ಹಲ್ಲೆ, ಮಂಗಳೂರಿನ ಹಿಂದೂ ಕಾರ್ಯಕರ್ತರ ಕಗ್ಗೊಲೆ ಮತ್ತು ಕೊಲೆಗಡುಕ ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆಯ ಕೃತ್ಯಗಳನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮರ್ಥನೆ ಮಾಡಿದ್ದಾರೆಂದು ಶಾಸಕ ಸುನೀಲ್ ಕುಮಾರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಒಂದು ಪೋಸ್ಟರ್ ಬರೆದು ಹಾಕಿದ್ದಾರೆ. ಈ ಆರೋಪದ ಬಗ್ಗೆ ಸಿದ್ದರಾಮಯ್ಯನವರು ಏನು ಪ್ರತಿಕ್ರಿಯಿಸುತ್ತಾರೋ ಅದನ್ನು ಅವರು ನೋಡಿಕೊಳ್ಳುತ್ತಾರೆ. ಆದರೆ ಸೈದ್ದಾಂತಿಕ ಭಿನ್ನಾಭಿಪ್ರಾಯದ ಹೊರತಾಗಿಯೂ ನಿಮ್ಮನ್ನು ಸ್ನೇಹಿತನೆಂದು ಭಾವಿಸಿರುವ ನನ್ನಿಂದ ನಿಮಗೊಂದು ಸವಾಲು. ನೀವು ಉಲ್ಲೇಖಿಸಿರುವ ನಾಲ್ಕು ಪ್ರಕರಣಗಳು ಮತ್ತು ಒಂದು ಸಂಘಟನೆಯನ್ನು ಸಿದ್ದರಾಮಯ್ಯನವರು ಸಮರ್ಥಿಸಿದ್ದಾರೆಂದು ನೀವು ಸಾಬೀತು ಪಡಿಸಿದರೆ ನಿಮ್ಮ ಮನೆಗೆ ನಾನು ಬಂದು ತಲೆ ಬಗ್ಗಿಸಿ ನಿಮ್ಮ ಕ್ಷಮೆ ಕೇಳುತ್ತೇನೆ ಮತ್ತು ಆ ದಿನದಿಂದ ಸಿದ್ದರಾಮಯ್ಯನವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ಕೂಡಾ ಕಡಿದುಕೊಂಡು ನಿಮ್ಮ ಜೊತೆಗಿರುತ್ತೇನೆ. ಈ ಆರೋಪ ಸುಳ್ಳೆಂದು ಸಾಬೀತಾದರೆ ನೀವೇನು ಮಾಡಬಹುದೆಂದು ನೀವೆ ನಿರ್ಧರಿಸಿ ಫೇಸ್ ಬುಕ್ ನಲ್ಲಿ ಪ್ರಕಟಿಸಿ, ಓದಿಕೊಳ್ಳುತ್ತೇನೆ. ನಿಮಗೆ ಒಳ್ಳೆಯದಾಗಲಿ. ►►ಸಂಬಂಧಿತ ಸುದ್ದಿಗಳು: ►►ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಪೋಲಿಸ್ ದೌರ್ಜನ್ಯ ಖಂಡನೀಯ: ಕೊಡವೂರು ►►ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಸೈನಿಕರ ವಿರುದ್ಧ ಪೋಸ್ಟ್ ಮಾಡಿದ್ದು ನಿಜವೇ? ಇಲ್ಲಿದೆ ಸತ್ಯಾಂಶ! ►►ಇದನ್ನೂ ಓದಿ: ►►BREAKING NEWS: ಕನ್ನಡ ಮೀಡಿಯಾ ಡಾಟ್ ಕಾಮ್ ಸುದ್ದಿ ಜಾಲತಾಣ ಉದ್ಘಾಟನೆ, ಲಾಂಛನ ಅನಾವರಣ: ವಿಡಿಯೋ. ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ? ►►ಇಂದಿಗೆ ಎರಡು ವರ್ಷಗಳ ಹಿಂದೆ ನಡೆದ ಪುಲ್ವಾಮ ದಾಳಿ ಪೂರ್ವನಿರ್ಧರಿತವಾಗಿತ್ತೇ? ರಾಜಕೀಯ ಲಾಭಕ್ಕಾಗಿ 44 ಅಮಾಯಕ ಯೋಧರನ್ನು ಬಲಿಕೊಡಲಾಗಿತ್ತೇ? ►►1992ರಲ್ಲಿ ರಾಮ ಮಂದಿರ ನಿರ್ಮಾಣದ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲ್ಪಟ್ಟ 1400 ಕೋಟಿ ರೂ. ಎಲ್ಲಿ ಹೋಯಿತು ಗೊತ್ತೇ? ವಿಡಿಯೋ ನೋಡಿ.! ►►ನೋಡ ನೋಡುತ್ತಿದ್ದಂತೆಯೇ ಸಮುದ್ರಕ್ಕೆ ಜಿಗಿದ ರಾಹುಲ್! ►►ಚಪ್ಪಾಳೆ, ಕ್ಯಾಂಡಲ್ ನಂತಹ ಮೌಢ್ಯಗಳ ನಡುವೆ ವ್ಯಾಕ್ಸಿನ್ ಗೆ ಸ್ಥಾನ ದೊರಕಿರುವುದು ವಿಜ್ಞಾನಕ್ಕೆ ಸಿಕ್ಕ ಜಯ! ►►ಕೋರೊನಾಗಿಂತಲೂ ಘೋರ ಮೋದಿ ಸರ್ಕಾರ! ಜನಸಾಮಾನ್ಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆಯೇ? ►►ರೈತರ ಮೇಲೆ ಮತ್ತೊಂದು ಆಕ್ರಮಣ; 2022 ರ ನಂತರ ರಸಗೊಬ್ಬರ ಸಬ್ಸಿಡಿ ರದ್ದಾಗಲಿದೆಯೇ? ►►‘ಕೋವಿಡ್ ಲಸಿಕಾ ಅಭಿಯಾನ’ವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆ: ವೈದ್ಯರು, ವಿಜ್ಞಾನಿಗಳ ವೇದಿಕೆ ಆರೋಪ. ►►‘ಕೋವಿಡ್ ಕೋಟ್ಯಾಧಿಪತಿಗಳು ಮತ್ತು ವ್ಯಾಕ್ಸಿನ್ ವರ್ಣಬೇಧ’: ಶಿವಸುಂದರ್ ರವರ ಲೇಖನ ►►ಬಹಿರಂಗವಾಯ್ತು ಪ್ರಧಾನಿ ಮೋದಿಯವರ ಅಸಲಿ ವಿದ್ಯಾರ್ಹತೆ… ಎಂಟಯರ್ ಪೊಲಿಟಿಕಲ್ ಸಾಯನ್ಸ್ ಸುಳ್ಳು! (ವಿಡಿಯೋ ನೋಡಿ) ►►‘ಸೋನಿಯಾ ಗಾಂಧಿಯವರ ಕುರಿತು ತಿರುಚಿದ ಫೋಟೋ ವೈರಲ್ ಮಾಡಿದ ಬಿಜೆಪಿ: ಅಸಲಿಯತ್ತೇನು ಗೊತ್ತೇ? ►►ಆಲೂ ಹಾಕಿದರೆ ಚಿನ್ನ ಬರುತ್ತದೆ; ಹಾಗೆ ಹೇಳಿದ್ದು ರಾಹುಲ್ ಅಲ್ಲ, ಮೋದಿ..! ►►ಕೊರೊನಾ ವ್ಯಾಕ್ಸಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ನಡೆಸಿತ್ತೇ? ಇಲ್ಲಿದೆ ನೋಡಿ: ದಾವೆ ಹೂಡಬಹುದಾದ ವಿಡಿಯೋ ಸಾಕ್ಷಿ! ►►ಜನರು ಲಸಿಕೆ ಹಾಕಿಸಿಕೊಳ್ಳದಿರಲು ಕಾಂಗ್ರೆಸ್ ಅಪಪ್ರಚಾರ ಕಾರಣವಾದರೆ, ಸರ್ಕಾರ ಕೊಡಲುದ್ದೇಶಿಸಿದ್ದ ಆ ಲಸಿಕೆ ಈಗ ಎಲ್ಲಿದೆ? ►►ಕಾಂಗ್ರೆಸ್ ಲೆಟರ್ ಹೆಡ್ ಪೋರ್ಜರಿ ಮಾಡಿ ‘ಟೂಲ್‌ಕಿಟ್’ ಸಿದ್ದಪಡಿಸಿದ ಬಿಜೆಪಿ ಐ.ಟಿ ಸೆಲ್: ಪೋಲೀಸ್ ಅಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್! ►►ಸುಪ್ರೀಂಕೋರ್ಟ್ ‘ಆಕ್ಸಿಜನ್ ಹಂಚಿಕೆಯ ಅಧಿಕಾರ’ವನ್ನು ಮೋದಿ ಸರ್ಕಾರದಿಂದ‌ ಕಿತ್ತು ತಜ್ಞರ ಕಾರ್ಯಪಡೆಗೆ ವಹಿಸಲು ಕಾರಣವೇನು ಗೊತ್ತೇ? ►►‘ಹ್ಯಾಕ್ ಆಗುವ ಇವಿಎಂ ಮೆಷಿನ್ ಈಗ ಸರಿಯಿದೆಯಾ ಕಾಂಗಿಗಳೇ?’ ಎನ್ನುವ ಬಿಜೆಪಿಗರು ಉತ್ತರಿಸಬೇಕಾದ ಪ್ರಶ್ನೆಗಳು. ►►ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದಿದ್ದ ‘ವಿಶ್ವಗುರು ಭಾರತ’ದ ಬಗ್ಗೆ ನಿಮಗೆಷ್ಟು ಗೊತ್ತು? ►►'ಕೋವಿಡ್‌ ಸುನಾಮಿ ಬರಲಿದೆ. ಮುನ್ನೆಚ್ಚರಿಕೆ ವಹಿಸಿ’ ಎಂದು ರಾಹುಲ್‌ ಕಳೆದ ವರ್ಷವೇ ಸರ್ಕಾರವನ್ನು ಎಚ್ಚರಿಸಿದ್ದರು: ಆ ಕುರಿತಾದ ವಿಡಿಯೋ ವೈರಲ್! ►►‘ಪೋಲಿಯೋ ಮುಕ್ತ ಭಾರತ’ ಆದಾಗ ಈ ದೇಶದಲ್ಲಿ ಚಪ್ಪಾಳೆ ಹೊಡೆದಿರಲಿಲ್ಲ, ಕ್ಯಾಂಡಲ್ ಹಚ್ಚಿ ಕುಣಿದಾಡಿರಲಿಲ್ಲ. ►►ಛತ್ತೀಸ್‌ಘಡ- ಪುಲ್ವಾಮಾ ಮಾದರಿಯಲ್ಲಿ ನಕ್ಸಲ್ ದಾಳಿ, 22 ಯೋಧರ ಸಾವು: ಚುನಾವಣಾ ಸಮಯದಲ್ಲೇ ಅದೇಕೆ ಇಂತಹ ದಾಳಿಗಳು ನಡೆಯುತ್ತವೆ? ►►ನಾನು ಸುಳ್ಳು ಹೇಳಲು ಇಲ್ಲಿಗೆ ಬಂದಿಲ್ಲ. ಸುಳ್ಳು ಹೇಳಲು ನನ್ನ ಹೆಸರು ಮೋದಿ ಅಲ್ಲ. ನಾನು ರಾಹುಲ್ ►►ನನ್ನ ರಾಜೀವ್‌ರನ್ನು ನನಗೆ ಮರಳಿಸಿ ಇಲ್ಲವೇ ಅವರು ನಡೆದಾಡಿದ ಮಣ್ಣಲ್ಲಿ ಮಣ್ಣಾಗಲು ಬಿಡಿ ►►ಕಾಂಗ್ರೆಸ್ ಕಟ್ಟಿದ ಸಂಸ್ಥೆಗಳನ್ನು ಮಾರುತ್ತಿರುವವರು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ: ಪ್ರತಾಪ್‌ ಚಂದ್ರ ಶೆಟ್ಟಿ (ವಿಡಿಯೋ ನೋಡಿ) ►►ಖಾಸಗೀಕರಣದ ಹಿಂದಿನ‌ ಮೋದಿ ಸರ್ಕಾರದ ಅಸಲಿ ಮಸಲತ್ತೇನು ಗೊತ್ತೇ ►►ರಾವಣನ ಶ್ರೀಲಂಕಾದಲ್ಲಿ 51 ರೂ.ಗೆ ಹಾಗೂ ಸೀತೆಯ ನೇಪಾಳದಲ್ಲಿ 53ರೂ. ಗೆ ಸಿಗುವ ಪೆಟ್ರೋಲ್ ಶ್ರೀರಾಮನ ಭಾರತದಲ್ಲಿ 93 ರೂ. ಯಾಕೆ?

Advertisement
Advertisement
Recent Posts
Advertisement